free goat training to farmers ಕುರಿ ಸಾಕಾಣಿಕೆ ಮಾಡಲಿಚ್ಚಿಸುವ ರೈತರಿಗೆ, ಹಾಗೂ ಕುರಿ ಸಾಕಾಣಿಕೆಯಲ್ಲಿ ತೊಡಗಿರುವ ರೈತರಿಗೆ ಉಚಿತವಾಗಿ 10 ದಿನಗಳ ಕಾಲ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಯಾದಗಿರಿ ಗ್ರಾಮೀಣ ಸ್ವಯಂ ತರಬೇತಿ ಸಂಸ್ಥೆ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗ ಉಚಿತ ಕುರಿ ಸಾಕಾಣಿಕೆಯ 10 ದಿನಗಳ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿಯುಳ್ಳ ಯಾದಗಿರಿ ಜಿಲ್ಯ 18 ರಿಂದ 45 ವರ್ಷದೊಳಗಿನ ಗ್ರಾಮೀಣ ಯುವಕರು ಉಚಿತ ಕುರಿ ಸಾಕಾಣಿಕೆ ತರಬೇತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ರೈತರು ಕನಿಷ್ಟ 7ನೇ ತರಗತಿಯವರೆಗೆ ಓದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬಲ್ಲವರರಾಗಿರಬೇಕು. ತರಬೇತಿ ಸಮಯದಲ್ಲಿ ಉಚಿತವಾಗಿ ಊಟ ಹಾಗೂ ವಸತಿ ಸೌಲಭ್ಯಗಳನ್ನು ನೀಡಲಾಗುವುದು ಎಂದು ಯಾದಗಿರಿ ಭಾರತೀಯ ಸ್ಟೇಟ್ ಬ್ಯಾಂಕ್ ನ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 0448994164, 9448577110, 9902698281, 8088235941 ಹಾಗೂ 7829101994ಗೆ ಸಂಪರ್ಕಿಸಲು ಕೋರಲಾಗಿದೆ.
free goat training to farmers ಪಶು ಸಂಗೋಪನೆ ಕುರಿತು ಮಾಹಿತಿ ನೀಡಲು ಆರಂಭವಾಗಿದೆ ಉಚಿತ ಸಹಾಯವಾಣಿ
ರೈತರಿಗೆ ದಿನದ 24*7 ಗಂಟೆಗಳವರೆಗೆ ರೈತರಿಗೆ ಉಚಿತವಾಗಿ ಪಶುಸಂಗೋಪನೆ ಕುರಿತು ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ. 8277 100 200 ಗೆ ಕರೆ ಮಾಡಿದರೆ ಸಂಬಂಧಿಸಿದ ಅಧಿಕಾರಿಗಳು ಕರೆ ಸ್ವೀಕರಿಸಿ ರೈತರಿಗೆ ಅಗತ್ಯ ಮಾಹಿತಿ ನೀಡುವರು. ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು.
ಸಹಾಯವಾಣಿಯಲ್ಲಿ ಲಭ್ಯವಿರುವ ಮಾಹಿತಿಗಳು
ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಇದನ್ನೂ ಓದಿ : ಯಾವ ಬ್ಯಾಂಕಿನಲ್ಲಿ ಎಷ್ಟು ಮತ್ತು ಎಲ್ಲೆಲ್ಲಿ ಸಾಲ ಪಡೆದಿದ್ದೀರೆಂಬುದನ್ನು ಮೊಬೈಲ್ ನಲ್ಲಿಯೇ ಉಚಿತವಾಗಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಜಾನುವಾರು ರೋಗಳು, ಲಸಿಕಾ ಕಾರ್ಯಕ್ರಮ ಹಾಹೂಗ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶೀ ಹಾಗೂ ವಿದೇಶ ಜಾನುವಾರು ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಪಶು ಸಂಗೋಪನೆ ಚಟುವಟಿಕೆಗಳಿಗಾಗಿ ಅಂದರೆ ಕುರಿ, ಮೇಕೆ, ಕೋಳಿ, ಮೊಲ ಸಾಕಾಣಿಕೆ ಹಾಗೂ ಹೈನುಗಾರಿಕೆಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲ ಸೌಲಭ್ಯದ ಕುರಿತು ಮಾಹಿತಿ ನೀಡಲಾಗುವುದು.
ಉಚಿತ ಸಹಾಯವಾಣಿ
ಉಚಿಿತ ಸಹಾವಾಣಿ ನಂಬರ್ ಕರೆ ಮಾಡಿದರೆ ಸಾಕು, ನಿಮ್ಮ ಜಾನುವಾರುಗಳಿಗೆ ತಗಲುವ ರೋಗ, ಮುಂಜಾಗ್ರತಾ ಕ್ರಮ, ನಿರ್ವಹಣೆ ಸೇರಿದಂತೆ ಸರ್ಕಾರದ ಸೌಲಭ್ಯಗಳು ಅಂದರೆ ಕುರಿ ಮೇಕೆ ಸಾಕಾಣಿಕೆಗೆ ಬ್ಯಾಂಕುಗಳಿಂದ ಸಿಗುವ ಸಾಲ ಸೌಲಭ್ಯಗಳ ಮಾಹಿತಿಯನ್ನು ಸಹ ನೀಡಲಾಗುವುದು.