ಈ ರೈತರಿಗೇಕೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ? ಇಲ್ಲೇ ಚೆಕ್ ಮಾಡಿ

Written by By: janajagran

Updated on:

why these farmers not receiving pmkisan money ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬಹುದು.

ಒಂದು ವೇಳೆ ನೀವು ಇನ್ನೂ ಇಕೆವೈಸಿ ಮಾಡಿಸದಿದ್ದರೆ  ನಿಮಗೆ ಮುಂದಿನ ಕಂತು ತಡೆಹಿಡಿಯಲಾಗುವುದು.

ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಬೇಕು.  ಇಲ್ಲದಿದ್ದರೆ ಮುಂದಿನ ಕಂತಿನ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.

ಮೊಬೈಲ್ ನಲ್ಲಿ PM kisan eKYC ಮಾಡಿಸುವುದು ಹೇಗೆ

ಪಿಎಂ ಕಿಸಾನ್ ಯೋಜನೆಯ ಪೋರ್ಟಲ್ ನಲ್ಲಿ ಆಧಾರ್ ಆಧಾರಿತ ಓಟಿಪಿ ದೃಢೀಕರಣಕ್ಕಾಗಿ ಕಿಸಾನ್ ಕಾರ್ನರ್ ನಲ್ಲಿರುವ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್  ಮಾಡಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.  ರೈತರು ಈ

https://pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಪಿಎಂ ಕಿಸಾನ್ ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ನಿಮ್ಮಆಧಾರ್ ಕಾರ್ಡ್ ನ್ನು ನಮೂದಿಸೇಕು. ನಂತರ search ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ಅಲ್ಲಿ EKYC is Already Done ಎಂಬ ಮೆಸೇಜ್ ಕಾಣಿಸುತ್ತದೆ. ಅಲ್ಲಿ ನೀವು ಓಕೆ ಬಟನ್ ಮೇಲೆ ಕ್ಲಿಕ್ ಮಾಡಬಹುದು. ಒಂದು ವೇಳೆ ನಿಮ್ಮ ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸದ ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ನೀವು ನಿಮ್ಮ ಮೊಬೈಲ್ ನಲ್ಲೇ ಇಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.

ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ಸಮಸ್ಯೆಯಾಗುತ್ತಿದ್ದರೆ ಏನು ಮಾಡಬೇಕು?

ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ನಿಮಗೆ ಸಮಸ್ಯೆಯಾಗುತ್ತಿದ್ದರೆ ನೀವು ಹ್ತತಿರದ ರೈತ ಸಂಪರ್ಕ  ಕೇಂದ್ರ, ಅಥವಾ ಸಿ.ಎಸ್.ಕೆ ಕೇಂದ್ರಗಳಲ್ಲಿಯೂ ಇಕೆವೈಸಿಯನ್ನು ಮಾಡಿಕೊಳ್ಳಬಹುದು.

ನೈಜ ಫಲಾನುಭವಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಈ ಆದೇಶ ಹೊರಡಿಸಿದೆ. ಇ-ಕೆವೈಸಿ ಮಾಡಿಕೊಂಡಲ್ಲಿ ಅರ್ಹ ರೈತರ ಖಚಿತ ಮಾಹಿತಿ ಲಭ್ಯವಾಗಲಿದೆ. ಇದಕ್ಕಾಗಿ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡಬೇಕಿದೆ. ಒಂದೇ ಕುಟುಂಬದ ಹಲವರ ಹೆಸರಿನಲ್ಲಿ ಆರ್.ಟಿ.ಸಿ ಇದ್ದ ಕಾರಣ ಅಥವಾ ಮೂರು ಜನರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದರು.ಈ ಬಾರಿ ಆಧಾರ್ ಲಿಂಕ್ ಮಾಡುವುದರಿಂದ ಕುಟುಂಬದ ಮಾಹಿತಿ ಲಭ್ಯವಾಗುವುದರಿಂದ ಎಷ್ಟೇ ಜನರ ಹೆಸರಿನಲ್ಲಿ ಆರ್.ಟಿ.ಸಿ ಗಳಿದ್ದರೂ ಒಬ್ಬರಿಗೆ ಅಷ್ಟೇ ನೆರವು ಸಿಗಲಿದೆ. ಆದಾಯ ತೆರಿಗೆ ಕಟ್ಟುವವರ ಮಾಹಿತಿಯೂ ಸಹ ಲಭ್ಯವಾಗಲಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಅಕ್ಕಪಕ್ಕ ಯಾರಿಗೆಷ್ಟು ಜಮೀನಿದೆ? ಚೆಕ್ ಮಾಡಿ

ರೈತರು ನಾಗರಿಕ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿವಾಗಿ ಇ-ಕೆವೈಸಿಯನ್ನು  ಮಾಡಿಸಬೇಕು. ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿಯೂ ಇ-ಕೆವೈಸಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಕುರಿತು ಗೊಂದಲವಿದ್ದರೂ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು. ಇ-ಕೆವೈಸಿ ಮಾಡಿಸದಿದ್ದಲ್ಲಿ ಫಲಾನುಭವಿಗಳಿಗೆ ಮುಂದಿನ ಕಂತು

ಏನಿದು ಪಿಎಂ ಕಿಸಾನ್ ಯೋಜನೆ?

ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕುಟುಂಬದ ಒಬ್ಬ ಸದಸ್ಯರಿಗೆ ವಾರ್ಷಿಕ 6 ಸಾವಿರ ರೂಪಾಯಿ ನೆರವು ನೀಡುವುದಕ್ಕಾಗಿ ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ 19 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷ ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಪಿಎಂ ಕಿಸಾನ್ ಯೋಜನೆಯ ಫಲಾನುಭವಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.

Leave a Comment