Farmers who have insured crops ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ಹೇಗೆ ನಿರ್ಧರಿಸುತ್ತಾರೆ? ಬೆಳೆ ಯಾವ ಪ್ರಮಾಣದಲ್ಲಿ ನಷ್ಟವಾಗಿದೆ ಎಂಬುದನ್ನು ಗಮನಿಸಿ ಎಷ್ಟು ಪರಿಹಾರ ನೀಡಲಾಗುತ್ತದೆ ಎಂಬುದರ ಮಾಹಿತಿ ಇಲ್ಲಿದೆ.
ರೈತರು ತಮ್ಮ ಬೆಳೆಗೆ ವಿಮೆ ಮಾಡಿಸಿದ ನಂತರ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲ ಶೇ. 75 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮೆ ಮೊತ್ತದ ಗರಿಷ್ಟ ಶೇ. 25 ರಷ್ಟು ಬೆಳೆ ವಿಮೆ ನಷ್ಟ ಪರಿಹಾರ ನೀಡಲಾಗುವುದು. ಒಂದು ವೇಳೆ ಬೆಳೆ ಬಿತ್ತನೆ ನಂತರ ಕಟಾವು ಹಂತದವರೆಗಿನ ಅವಧಿಯಲ್ಲಿ ಶೇ. 50 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲೆ ಬೆಳೆ ನಷ್ಟವಾದರೆ ಮುಂಚಿತವಾಗಿ ಅಂದಾಜಿಸಲಾದ ನಷ್ಟ ಪರಿಹಾರದಲ್ಲಿ ಶೇ. 25 ರಷ್ಟು ಪರಿಹಾರ ಹಣ ನೀಡಲಾಗುವುದು.
Farmers who have insured crops ಬೆಳೆ ಯಾವುದರಿಂದ ಹಾನಿಯಾದರೆ ಪರಿಹಾರ ನೀಡಲಾಗುವುದು?
ಬೆಳೆ ವಿಮೆ ಮಾಡಿಸಿದ ರೈತರ ಬೆಳೆಯು ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಗುಡುಗು ಮಿಂಚಿನಿಂದಾಗಿ ಉಂಟಾಗುವ ಬೆಂಕಿ ಅವಗಡ ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.
ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರುಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರವನ್ನು ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
ಇದನ್ನೂಓದಿ : ರೈತರು ತಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲೇ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೇ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಕಟಾವು ಮಾಡಿದ ಎರಡು ವಾರಗಳೊಳಗೆ (ಹದಿನಾಲ್ಕು ದಿನ) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮೆ ಸಂಸ್ಥೆಯು ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನುಇತ್ಯರ್ಥಪಡಿಸಲಾಗುವುದು. ಇಂತಹ ಸ್ಥಳೀಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟವಾದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸಿರುವ ವಿಮಾ ಸಂಸ್ಥೆಗಳ ಕಚೇರಿಗಳಿಗೆ ತಕ್ಷಣ ಸೂಚನೆ ನೀಡಬೇಕು. ಯಾವುದೇ ಸಂದರ್ಭದಲ್ಲಿ ವಿಮಾ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಬೇಕು.
Bele vime jama ನಿಮ್ಮ ಬೆಳೆ ವಿಮೆ ಅರ್ಜಿಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ರೈತರು ಬೆಳೆ ವಿಮೆ ಪಾವತಿಸಿದ ನಂತರ ತಮ್ಮ ಅರ್ಜಿಯ ಸ್ಟೇಟಸ್ ಚೆಕ್ ಮಾಡಲು ಈ
https://samrakshane.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನೀವು ಋತು ಆಯ್ಕೆಯಲ್ಲಿ Kharif ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗಲಿದೆ. ನಂತರ ತೆರೆದುಕೊಳ್ಳುವ ಪೇಜ್ ನಲ್ಲಿ Check status ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಆಯ್ಕೆಮಾಡಿಕೊಳ್ಳಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಿ ರೈತರು ತಮ್ಮ ಅರ್ಜಿಯ ಸ್ಟೇಟಸನ್ನು ಚೆಕ್ ಮಾಡಿಕೊಳ್ಳಬಹುದು.