pm kisan status update ಕೇಂದ್ರ ಸರ್ಕಾರವು ಜಾರಿಗೆ ತಂದ ಪಿಎಂ ಕಿಸಾನ್ ಯೋಜನೆಯ ಆನಲೈನ್ ಸ್ಟೇಟಸ್ ಚೆಕ್ ಮಾಡುವ ಪ್ರಕ್ರಿಯೆ ಬದಲಾಗಿದೆ. ಹೌದು ಇದಕ್ಕಿಂತ ಮುಂಚಿತವಾಗಿ ಅಕೌಂಟ್ ನಂಬರ್, ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು, ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬಹುದಿತ್ತು. ಆದರೆ ಈಗ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪ್ರಕ್ರಿಯೆ ಸಂಪೂರ್ಣ ಬದಲಾಗಿದೆ. ಹಾಗಾದರೆ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಅಂದುಕೊಂಡಿದ್ದೀರಾ…. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
pm kisan status update ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವ ಪ್ರಕ್ರಿಯೆಯಲ್ಲಿ ಏನೇನು ಬದಲಾವಣೆಯಾಗಿದೆ?
ರೈತರು ಈಗ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವಾಗು Search by, Enter value, Enter Image Text, Get Data ಹಾಗೂ Know your Register no. ಹೀಗೆ ಕಾಣುತ್ತದೆ. ಈಗ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಸುಲಭವಾಗಿದೆ. ಹೌದು ರೈತರು ಮೊಬೈಲ್ ನಲ್ಲೇ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಬೇಕಾದರೆ ಈ
https://pmkisan.gov.in/BeneficiaryStatus.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು Search by ನಲ್ಲಿ ರಿಜಿಸ್ಟರ್ ನಂಬರ್ ಅಥವಾ ಮೊಬೈಲ್ ನಂಬರ್ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಒಂದು ವೇಳೆ ನೀವು ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಂಡರೆ ಅಲ್ಲಿ ಎಂಟರ್ ವ್ಯಾಲ್ಯೂ ನಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಇಮೇಜ್ ಕೋಡ್ ನಲ್ಲಿ ಕೆಳಗಡೆ ಕಾಣುವ ಟೆಕ್ಸ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಬೇಕು.
ಆಗ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಬ್ಯಾಂಕಿನ ಖಾತೆಗೆ ಜಮೆಯಾಗಿದೆ. ಯಾವ ದಿನಾಂಕದಂದು ಜಮೆಯಾಗಿದೆ ಎಂಬ ಮಾಹಿತಿ ಕಾಣುತ್ತದೆ.
ಪಿಎಂ ಕಿಸಾನ್ ಸ್ಟೇಟಸ್ ಪೇಜ್ ನಲ್ಲಿ ಯಾವ ಯಾವ ಮಾಹಿತಿ ಇರುತ್ತದೆ
ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಪೇಜ್ ನಲ್ಲಿ ರೈತನ ಹೆಸರು, ತಂದೆಯ ಹೆಸರು, ಮೊಬೈಲ್ ನಂಬರ್ ನ ಕೊನೆಯ ನಾಲ್ಕು ಅಂಕಿಗಳು, ಅಕೌಂಟ್ ನಂಬರ್ ಇರುತ್ತದೆ. ಇದರೊಂದಿಗೆ, ಜಿಲ್ಲೆ, ಗ್ರಾಮ, ತಾಲೂಕು, ಪಿಎಂ ಕಿಸಾನ್ ಯೋಜನೆಯಡಿ ನೀವು ನೋಂದಣಿ ಮಾಡಿದ ದಿನಾಂಕ, ಇರುವುದು.
ಇದನ್ನೂ ಓದಿ: ನಿಮ್ಮ ಜಮೀನಿನ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಮ್ಮ ಆಧಾರ್ ಕಾರ್ಡ್ ವೆರಿಫೈಡ್ ಆಗಿದೆಯೋ ಇಲ್ಲವೋ, ನಿಮ್ಮ ಖಾತೆಯು ಆ್ಯಕ್ಟಿವ್ ಇದೆಯೋ ಇಲ್ಲವೋ ಎಂಬ ಮಾಹಿತಿಗಳನ್ನು ಕಾಣಬಹುದು.
ಪಿಎಂ ಕಿಸಾನ್ ಯೋಜನೆಯ ನೋಂದಣಿ ನಂಬರ್ ನಿಮಗೆ ಗೊತ್ತಿಲ್ಲವೇ? ಹೀಗೆ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆ ಸ್ಟೇಟಸ್ ಪೇಜ್ ನಲ್ಲಿ Know your Register no ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು.ಆಗ ನಿಮ್ಮ ಮೊಬೈಲಿಗೆ ಒಂದು ಓಟಿಪಿ ಬರುತ್ತದೆ. ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸಿ ಗೆಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಪಿಎಂ ಕಿಸಾನ್ ಯೋಜನೆಯ ನೋಂದಣಿ ನಂಬರ್ ಮತ್ತು ನಿಮ್ಮ ಹೆಸರು ಕಾಣುತ್ತದೆ. ಈ ರೆಜಿಸ್ಟರ್ ನಂಬರ್ ಸಹಾಯದಿಂದಲೂ ಸಹ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಬಹುದು.