ತುಂತುರು ನೀರಾವರಿದೆ ಶೇ. 90 ರಷ್ಟು ಸಬ್ಸಿಡಿ

Written by Ramlinganna

Updated on:

These Farmers will get 90 percentage subsidy  ತೋಟಗಾರಿಕೆ ಇಲಾಖೆಯ ವತಿಯಿಂದ ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಘಟಕ ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು,  ತೋಟಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸಂಬಂಧಿಸಿದ ತಾಲೂಕಿನ ತೋಟಗಾರಿಕೆ ಕಚೇರಿಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

These Farmers will get 90 percentage subsidy  ಯಾರಿಗೆ ಎಷ್ಟು ಸಹಾಯಧನ ಸಿಗಲಿದೆ?

ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿದ ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ  ಪಂಗಡ ವರ್ಗದ ರೈತರು ಆರ್.ಡಿ ಸಂಖ್ಯೆ ಇರುವ ಜಾತಿ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಿದೆ. ಗುರುತಿನ ಚೀಟಿ, ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಇತ್ತೀಚಿನ ಫೋಟೋ ಇರಬೇಕು.ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಶೇ. 90 ರಷ್ಟು ಸಹಾಯಧನ ಹಾಗೂ ಇತರ ರೈತರಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು.

ಎಲ್ಲಾ ವರ್ಗದ ರೈತರಿಗೆ ಭಾರತ ಸರ್ಕಾರದ ಮಾರ್ಗಸೂಚಿಯನ್ವಯ 2 ಹೆಕ್ಟೇರ್ ಮೇಲ್ಪಟ್ಟು ಗರಿಷ್ಠ 5 ಹೆಕ್ಟೇರ್ ಪ್ರದೇಶದವರಿಗೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು.

ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶದವರಿಗೆ ಸಹಾಯಧನ ನೀಡಲಾಗುವುದು. ಕಾಫಿ, ಟೀ ಹಾಗೂ ರಬ್ಬರ್ ಹೊರತುಪಡಿಸಿ ಎಲ್ಲಾ ತೋಟಗಾರಿಕೆ ಬೆಳೆಗಳಿಗೆ ಸಹಾಯಧನ ಒದಗಿಸಲಾಗುವುದು. ಅಡಿಕೆ ಅಥವಾ ತೆಂಗು ತೋಟಗಳಲ್ಲಿ ಮಿಶ್ರ ಬೆಳೆಗಳನ್ನು ಬೆಳೆದು ಮಿಶ್ರ ಬೆಳೆಗೆ ಹನಿ ನೀರಾವರಿ ಅಳವಡಿಸಿದಲ್ಲಿ ಅಂತಹ ರೈತರಿಗೆ ಆದ್ಯತೆ ನೀಡಲಾಗುವುದು.

ಹನಿ ನೀರಾವರಿ ಹಾಗೂ ತುಂತುರು ನೀರಾವರಿ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು

ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನ ಬೆಳೆಯುವ ರೈತರಾಗಿರಬೇಕು ಅಥವಾ ತೋಟಗಾರಿಕೆ ಬೆಳೆ ಬೆಳೆ ಬೆಳೆಯುವ ಆಸಕ್ತಿ ಹೊಂದಿರಬೇಕು. ಹಾಗೂ ಸೂಕ್ಷ್ಮ ನೀರಾವರಿ ಅಳವಡಿಸಿದ ನಂತರ ತೋಟಗಾರಿಕೆ ಬೆಳೆಗಳನ್ನೇ ಬೆಳೆಯಬೇಕು.ಫಲಾನುಭವಿಗಳಉ ನೀರಾವರಿ ಮೂಲವನ್ನು ಹೊಂದಿರಬೇಕು. ತನ್ನ ಸ್ವಂತ ನೀರಾವರಿ ಮೂಲ ಇಲ್ಲದಿದ್ದಲ್ಲಿ ಬೇರೆ ರೈತರನ್ನು ಈ ಸಂಬಂಧ ಒಪ್ಪಿಗೆ ಪತ್ರ  ಪಡೆದು ಸಲ್ಲಿಸಬೇಕು. ಹಾಗೂ ಸೂಕ್ಷ್ಮ ನೀರಾವರಿಗೆ ಯೋಗ್ಯವಿರುವಂತಹ ನೀರನ್ನು ಹೊಂದಿರಬೇಕು.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ12 ಕಂತಿನ ಹೊಸ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನುಮೊಬೈಲ್ ನಲ್ಲೇ ಚೆಕ್ ಮಾಡಿ

ಸೂಕ್ಷ್ಮ ನೀರಾವರಿ ಘಟಕಗಳು ಕಾರ್ಯನಿರ್ವಹಿಸಲು ಅವಶ್ಯವಿರುವ ವಿದ್ಯುತ್ಶಕ್ತಿ ಅಥವಾ ಇತರೆ ಶಕ್ತಿ ಮೂಲಗಳನ್ನು ಹೊಂದಿರಬೇಕು. ಹನಿ ಅಥವಾ ತುಂತುರು ನೀರಾವರಿ ಘಟಕಗಲನ್ನು ಇಲಾಖಾ ಅನುಮೋದಿತ ಕಂಪನಿ ಸಂಸ್ಥೆಯವರಿಂದ ಮಾತ್ರ ಅಳವಡಿಸಿಕೊಳ್ಳುವುದು.

ಮೈಸೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾಗಿ ಮೈಸೂರು ಜಿಲ್ಲೆಯ ತಾಲೂಕಿನ ರೈತರು ಆಯಾ ತಾಲೂಕಿನ ಸಹಾಯಕ ತೋಟಗಾರಿಕೆ ಇಲಾಖೆಯ ನಂಬರಿಗೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಯಾವ ತಾಲೂಕಿನ ರೈತರು ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ದಾಖಲಾತಿಗಳ ವಿವರಗಳಿಗಾಗಿ  ರೈತರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಲ್ಲಾ ಪಂಚಾಯತ) ಮೈಸೂರು 0821-2430450ಗೆ ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಎಚ್.ಡಿ ಕೋಟೆ 08228-255261ಗೆ ಸಂಪರ್ಕಿಸಬಹುದು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಹುಣಸೂರು 08222 252447, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ಜಿಲ್ಲಾ ಪಂಚಾಯತ) ಕೆ.ಆರ್. ನಗರ 08223 262791, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ) ನಂಜನಗೂಡು 08221 226201, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ) ಪಿರಿಯಾಪಟ್ಟಣ 08223 273535ಗೆ ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಲ್ಲಾ ಪಂಚಾಯತ) ಟಿ. ನರಸಿಪುರ 08227 260086 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment