ಆಗಸ್ಟ್ 31ರವರೆಗೆ ಇಕೆವೈಸಿ ಮಾಡಿಸಿ

Written by Ramlinganna

Updated on:

PM kisan eKYC deadline  ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಸಂತಸದ ಸುದ್ದಿ. ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೆ ನಿಮಗೆ ಇಕೆವೈಸಿ ಮಾಡಿಸಲು ಆಗಸ್ಟ್ 31ರವರೆಗೆ ಅವಕಾಶವಿದೆ.

ಹೌದು, ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಒಂದು ವೇಳೆ ಇಕೆವೈಸಿ ಮಾಡಿಸದಿದ್ದರೆ ಈಗ ಇಕೆವೈಸಿ ಪ್ರಕ್ರೆಯೆ ಪೂರ್ಣಗೊಳಿಸುವ ಗಡುವನ್ನು ಮತ್ತೆ ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ.

ದೇಶದಲ್ಲಿ ಇನ್ನೂ ಬಹಳಷ್ಟು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಮಾಡಿಸದೆ ಇರುವುದರಿಂದ ಇಕೆವೈಸಿ ಮಾಡಸಲು ಮತ್ತೆ ಆಗಸ್ಟ್ 31 ರವರೆಗೆ ದಿನಾಂಕ ವಿಸ್ತರಣೆ ಮಾಡಲಾಗಿದೆ. ರೈತರು ಇಕೆವೈಸಿಯನ್ನು ಮೊಬೈಲನಲ್ಲೇ ಮಾಡಿಕೊಳ್ಳಬಹುದು. ಒಂದು ವೇಳೆ ನಿಮಗೆ ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ಹತ್ತಿರದ ಸಿಎಸ್.ಸಿ ಕೇಂದ್ರಗಳಲ್ಲಿಯೂ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಬಹುದು.

PM kisan eKYC deadline  ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ?

ರೈತರು ಮೊಬೈಲ್ ನಲ್ಲೇ ಇಕೆವೈಸಿ ಮಾಡಬೇಕಾದರೆ ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪೇಜ್ ಓಪನ್ ಆಗುತ್ತದೆ. ಅಲ್ಲಿ ಓಟಿಪಿ ಬೇಸ್ಡ್ ಇಕೆವೈಸಿ ಎಂಬ ಮೆಸೇಜ್ ಕಾಣುತ್ತದೆ ಅದರ ಕೆಳಗಡೆ ಆಧಾರ್ ನಂಬರ್ ನಮೂದಿಸಿ ಸರ್ಚ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕಾಗುತ್ತದೆ. ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ  ಇತರ ಮಾಹಿತಿ ಕೇಳಲಾಗುತ್ತದೆ. ಆಗ ನೀವು ಮಾಹಿತಿ ಭರ್ತಿ ಮಾಡಿ ಮೊಬೈಲ್ ನಲ್ಲೇ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಕೊನೆಯಲ್ಲಿ ನಿಮಗೆ Ekyc successful ಎಂಬ ಮೆಸೇಜ್ ಬಂದಾಗ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.

ಇಕೆವೈಸಿ ಏಕೆ ಮಾಡಿಸಬೇಕು?

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಲ್ಲಿಯವರೆಗೆ 11 ಕಂತುಗಳು ಖಾತೆಗೆ ಜಮೆಯಾಗಿದೆ. ಇಕೆವೈಸಿ ಮಾಡಿಸುವ ಅಗತ್ಯವಿಲ್ಲವೆಂಬ ಭಾವನೆಯಿದ್ದರೆ ಮುಂದಿನ 12ನೇ ಕಂತು ನಿಮ್ಮ ಖಾತೆಗೆ ಜಮೆಯಾಗುವ ಸಾಧ್ಯತೆ ಕಡಿಮೆಯಿದೆ. ಇಕೆವೈಸಿ ಮಾಡಿಸದ ರೈತರಿಗೆ ಮತ್ತೆ ಕಾಲಾವಕಾಶ ನೀಡಲಾಗುತ್ತೋ ಇಲ್ಲವೋ ಗೊತ್ತಿಲ್ಲ. ಹಾಗಾಗಿ ಇಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆದುಕೊಳ್ಳಬೇಕು.

ಏನಿದು ಪಿಎಂ ಕಿಸಾನ್ ಇಕೆವೈಸಿ?

ಪಿಎಂ ಕಿಸಾನ್ ಯೋಜನೆಯ ಹಣ ವರ್ಗಾವಣೆಯಲ್ಲಿ ಉಂಟಾಗಬಹುದಾದ ವಂಚನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿಸಲಾದ ರೈತರಿಗೆ ಇಕೆವೈಸಿ ಕಡ್ಡಾಯಗೊಳಿಸಲಾಗಿದೆ.

ಏನಿದು ಪಿಎಂ ಕಿಸಾನ್ ಯೋಜನೆ?

ಪ್ರಧಾನಮಂತ್ರಿ ಪಿಎಂ ಕಿಸಾನ್ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಗಿದೆ.  ಬಡ, ಸಣ್ಣ ರೈತ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡುವುದಕ್ಕಾಗಿ ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ಜಮೆ ಮಾಡಲಾಗುತ್ತಿದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಇದನ್ನೂ ಓದಿ : ಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮ ಪಿಎಂ ಕಿಸಾನ್ ಇಕೆವೈಸಿ ಸ್ಟೇಟಸ್

ರೈತರ ಖಾತೆಗೆ ಈಗಾಗಲೇ 11 ಕಂತುಗಳ ಹಣ ಬಿಡುಗಡೆ ಮಾಡಲಾಗಿದೆ. 12ನೇ ಕಂತಿಗಾಗಿ ಕಾಯುತ್ತಿರುವ ರೈತರಿಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ ಮಾಡುವ ಸಾಧ್ಯತೆಯಿರುವುದರಿಂದ ಆಗಸ್ಟ್ 31 ರೊಳಗಾಗಿ ಇಕೆವೈಸಿ ಮಾಡಿಸಿಕೊಳ್ಳಲು ಕೋರಲಾಗಿದೆ.

ಯಾರಿಗೆ ಪಿಎಂ ಕಿಸಾನ್ ಯೋಜನೆಯ ಲಾಭ ಸಿಗಲ್ಲ?

2 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಇರುವ ರೈತ ಕುಟುಂಬ, ಮಾಸಿಕ 10 ಸಾವಿರಗಿಂತ ಹೆಚ್ಚು ಪಿಂಚಣಿ ಪಡೆಯುವವರು, ಸರ್ಕಾರಿ ನೌಕರಿಯಲ್ಲಿರುವರು, ತೆರಿಗೆ ಪಾವತಿಸುತ್ತಿರುವ ರೈತರಿಗೆ  ಸೌಲಭ್ಯ ಸಿಗುವುದಿಲ್ಲ.

Leave a Comment