ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Updated on:

Armed police constable recruitment  ಪೊಲೀಸ್ ಹುದ್ದೆಯಲ್ಲಿ ಸೇರಲಿಚ್ಚಿಸುವ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಕರ್ನಾಟಕ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ನೇಮಕಾತಿಗಾಗಿ 3484 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ರಿಂದ 31-10-2022 ರವರೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಹೇಗೆ ಸಲ್ಲಿಸಬೇಕು? ವೇತನ ಶ್ರೇಣಿ, ಯಾವ ಯಾವ ದಾಖಲೆ ಸಲ್ಲಿಸಬೇಕು. ಪೊಲೀಸ್ ನೇಮಕಾತಿ ಹೇಗೆ ನಡೆಯುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ವಿದ್ಯಾರ್ಹತೆಗಳು

ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.  ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ತುಂಬಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಹಾಗೂ ಓಬಿಸಿ ಅಭ್ಯರ್ಥಿಗಳಇಗೆ ಗರಿಷ್ಠ 27 ವಯೋಮಾನದೊಳಗಿರಬೇಕು. ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷದೊಳಗಿರಬೇಕು. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷದೊಳಗಿರಬೇಕು.

Armed police constable recruitment  ವೇತನ ಶ್ರೇಣಿ ಎಷ್ಟಿರುತ್ತದೆ?

ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗೆ ಮೂಲ ವೇತನ (ಬೇಸಿಕ್ ಪೇ) 23,500 – 47650 ರೂಪಾಯಿಯವರೆಗೆ ಇರುತ್ತದೆ.  ವೇತಣ ಶ್ರೇಣಿ  23500-550-24600-600-27000-650-29600-750-32600-850-36000-950-39800-1100-46400-1250-47650 ರೂಪಾಯಿ ಇರುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅರ್ಹತೆ ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 400 ರೂಪಾಯಿ, ಪರಿಶಷ್ಟಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200 ರೂಪಾಯಿ ಶುಲ್ಕ ಇರುತ್ತದೆ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ?

ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಯ ಆಯ್ಕೆಯು ಲಿಖತ ಪರೀಕ್ಷೆ,  ದೇಹದಾರ್ಡತೆ ಹಾಗೂ ಸಹಿಷ್ಣುತೆ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆಯು 100 ಅಂಕಗಳಲ್ಲಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ದೇಹದಾರ್ಡತೆ ಹಾಗೂ ಸಹಿಷ್ಣುತೆ ಪರೀಕ್ಷೆ ನಡೆಸಲಾಗುವುದು.

ಇದನ್ನೂ ಓದಿ : ನಿಮ್ಮ ಮಕ್ಕಳಿಗೆ ಸ್ಕಾಲರಶಿಪ್ ಬಂದಿದೆಯೇ? ಮೊಬೈಲ್ ನಲ್ಲಿ ಹೀಗೆ ಸ್ಟೇಟಸ್ ಚೆಕ್ ಮಾಡಿ

ಸಾಮಾನ್ಯ ಪರುಷ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ ಎತ್ತರ 168 ಸೆಂ.ಮೀ, ಎದೆ ಸುತ್ತಳತೆ 86 ಸೆಂಟಿ ಮೀಟರ್ ಎದೆ ವಿಸ್ತರಿಸಿದಾಗ 5 ಸೆಂ. ಮೀಟ ಹಿಗ್ಗಬೇಕು.ಬುಡಕಟ್ಟು ಪುರುಷ ಅಭ್ಯರ್ಥಿಗಳ ಕನಿಷ್ಠ 155 ಸೆಂ. ಮೀಟರ್ ಎತ್ತರ,  ಎದೆಯ ಸುತ್ತಳತೆ 70 ಸೆಂ.ಮೀ, ಹಿಗ್ಗಿಸಿದಾಗ 5 ಕನಿಷ್ಠ ಸೆಂ.ಮೀ ಆಗಬೇಕು.

ಸಹೀಷ್ಣುತೆ ಪರೀಕ್ಷೆ ಹೀಗಿರುತ್ತದೆ

ಸಾಮಾನ್ಯ ಪುರುಷ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳು 1600 ಮೀಟರ್ ಓಟವನ್ನು 6 ನಿಮಿಷ 30 ಸೆಕೆಂಡ್ ನಲ್ಲಿ ಓಡಬೇಕು. 1.20 ಮೀಟರ್ ವರೆಗೆ ಎತ್ತರ ಜಿಗಿತ ಇರಬೇಕು. 3.80 ಮೀಟರ್ ವರೆಗೆ ಉದ್ದ ಜಿಗಿತ ಇರಬೇಕು. 5.60 ಮೀಟರ್ ವರೆಗೆ ಗುಂಡು ಎಸೆತ ಇರಬೇಕು.

ಆನ್ಲೈನ್ ನಲ್ಲಿ ಅರ್ಜಿ ಹೇಗೆ ಸಲ್ಲಿಸಬೇಕು?

ಸಶಸ್ತ್ರ ಪೊಲೀಸ್ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲಿಚ್ಚಿಸುವವರು ಈ

https://ksp-recruitment.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಕರ್ನಾಟಕ ಸ್ಟೇಟ್ ಪೊಲೀಸ್ ರಿಕ್ರೂಟ್ಮೆಂಟ್ 2022 ಆನ್ಲೈನ್ ಪೋರ್ಟಲ್ ಓಪನ್ ಆಗುತ್ತದೆ. ಇಲ್ಲಿ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆ  420 ಪೋಸ್ಟ್  ಮುಂದಿರುವ ಕ್ಲಿಕ್ ಹಿಯರ್ ಟು ವೀವ್  ಮೇಲೆ ಕ್ಲಿಕ್ ಮಾಡಬೇಕು. ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಗಳು  3064 ಪೋಸ್ಟ್ ಮುಂದಿರುವ ಕ್ಲಿಕ್ ಹಿಯರ್ ಟು ವೀವ್ ಮೇಲೆ  ಕ್ಲಿಕ್ ಮಾಡಬೇಕು.

ಆಗ ನಿಮಗೆ ಕರ್ನಾಟಕ  ಸಶಸ್ತ್ರ ಪೊಲೀಸ್ ಕಾನ್ಸಟೇಬಲ್ ಹುದ್ದೆಯ ಅಧಿಸೂಚನೆ ತೆರೆದುಕೊಳ್ಳುತ್ತದೆ. ಇಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇರುತ್ತದೆ.  ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡ ನಂತರ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು  ಕೆಳಗಡೆ ಕಲ್ಯಾಣ ಕರ್ನಾಟಕ ಹಾಗೂ ನಾನ್ ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಲಿಂಕ್ ಇರುತ್ತದೆ. ಮುಂದೆ ಕಾಣುವ Apply now ಮೇಲೆ ಕ್ಲಿಕ್ ಮಾಡಿ ಅರ್ಜಿ ಭರ್ತಿ ಮಾಡಬಹುದು.

Leave a Comment