Crop damage crop insurance are different ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಎರಡೂ ಒಂದೇ ಅಂದುಕೊಂಡಿದ್ದರೆ ನಿಮ್ಮ ಊಹೆ ತಪ್ಪಾಗಿದೆ. ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಎರಡೂ ಬೇರೆ ಬೇರೆಯಾಗಿದೆ. ಹೌದು, ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ವ್ಯತ್ಯಾಸ ಮತ್ತು ಯಾವ ರೈತರಿಗೆ ಬೆಳೆ ಪರಿಹಾರ ಜಮೆಯಾಗುತ್ತದೆ? ಯಾವ ರೈತರಿಗೆ ಬೆಳೆ ವಿಮೆ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಳೆ ಪರಿಹಾರ ಎಂದರೇನು?
ಪ್ರಕೃತಿ ವಿಕೋಪದಿಂದಾಗಿ ಅಂದರೆ ಅತೀವಷ್ಟಿ ಪ್ರವಾಹದಿಂದಾಗಿ ಬೆಳೆ ಹಾಳಾದಾಗ ರಾಜ್ಯ ಸರ್ಕಾರವು ಪ್ರತಿ ಎಕರೆಗೆ ಇಂತಿಷ್ಟು ಪರಿಹಾರ ಹಣವನ್ನು ಘೋಷಿಸುತ್ತದೆ. ಆ ಆಧಾರದ ಮೇಲೆ ರೈತರಿಗೆ ಎಕರೆಗೆ ಇಂತಿಷ್ಟು ಹಣವನ್ನು ಜಮೆ ಮಾಡುತ್ತದೆ. ಬೆಳೆ ಹಾನಿಯಾದ ರೈತರು ಗ್ರಾಮ ಪಂಚಾಯತಿಯಲ್ಲಿ ಯಾವ ಬೆಳೆ ಹಾಳಾಗಿದೆ ಹಾಗೂ ಎಷ್ಟು ಎಕರೆ ಜಮೀನು ಹಾಳಾಗಿದೆ ಎಂಬುದನ್ನು ಅರ್ಜಿಯಲ್ಲಿ ನಮೂದಿಸಬೇಕು. ರೈತರು ಬೆಳೆ ಹಾನಿ ಪರಿಹಾರ ಪಡೆಯಲು ಯಾವುದೇ ಹಣ ಪಾವತಿಸಬೇಕಿಲ್ಲ. ಗ್ರಾಪಂ ಕಚೇರಿಯಲ್ಲಿ ರೈತರು ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಪಾಸ್ ಬುಕ್ ನೀಡಬೇಕಾಗುತ್ತದೆ. ಗ್ರಾಪಂ ಅಧಿಕಾರಿಗಳು ರೈತರ ಮಾಹಿತಿಯನ್ನು ಪರಿಹಾರ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಿದ ಮೇಲೆ ಹಂತಹಂತವಾಗಿ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಹಣವನ್ನು ಜಮೆ ಮಾಡುತ್ತದೆ.
Crop damage crop insurance are different ಬೆಳೆ ಹಾನಿ ಪರಿಹಾರ ನಿಮಗೆ ಜಮೆಯಾಗಿದೆಯೋ ಇಲ್ಲವೋ? ಚೆಕ್ ಮಾಡಿ
ರೈತರು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿರುವುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ಹಾನಿ ಪರಿಹಾರ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಸಂಖ್ಯೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ಕಾಲಾಮಿಟಿ ಟೈಪ್ ಕೆಳಗಡೆ ಫ್ಲಡ್ ಹಾಗೂ ಇಯರ್ ಕೆಳಗಡೆ 2022-23 ಆಯ್ಕೆ ಮಾಡಿ ಆಧಾರ್ ಸಂಖ್ಯೆ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ಹಾಗಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿದರೆ ಸಾಕು ನಿಮಗೆ ಪ್ರಸಕ್ತ ಸಾಲಿನಲ್ಲಿ ನಿಮಗೆ ಬೆಳೆ ಹಾನಿ ಎಷ್ಟು ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬಹುದು.
ಬೆಳೆ ವಿಮೆ ಎಂದರೇನು?
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸುವುದನ್ನು ಬೆಳೆ ವಿಮೆ ಎನ್ನುತ್ತಾರೆ. ರೈತರು ವಿಮೆ ಮಾಡಿಸುವಾಗ ಅತೀ ಕಡಿಮೆ ಹಣವನ್ನು ಪಾವತಿಸುತ್ತಾರೆ.ಉಳಿದ ಮೊತ್ತವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರವು ಪಾವತಿಸುತ್ತದೆ. ಬೆಳೆ ವಿಮೆ ಮಾಡಿಸಿದ ನಂತರ ರೈತರ ಬೆಳೆಯು ಪ್ರಕೃತಿ ವಿಕೋಪಗಳಾದ ಅತೀವೃಷ್ಟಿ, ಅನಾವೃಷ್ಟಿ, ಪ್ರವಾಹ, ಗುಡುಗು ಸಿಡಿಲಿನಿಂದ ಉಂಟಾದ ಬೆಂಕಿ ಸೇರಿದಂತೆ ಇನ್ನಿತರ ಪ್ರಕೃತಿ ವಿಕೋಪದಿಂದಾಗಿ ಬೆಳೆ ಹಾಳಾದಾಗ ರೈತರಿಗೆ ಬೆಳೆ ವಿಮೆ ಹಣ ಪಾವತಿಸಲಾಗುವುದು.
ಇದನ್ನೂ ಓದಿ : ಇನ್ನೂ ಮುಂದೆ ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುತ್ತೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರ ಬೆಳೆ ಹಾಳಾದಾಗ ಯಾವ ವಿಮಾ ಕಂಪನಿಗೆ ಹಣ ಪಾವತಿಸಿರುತ್ತಾರೆಯೋ ಆ ವಿಮಾ ಕಂಪನಿಗೆ 72 ಗಂಟೆಯೊಳಗೆ ತಿಳಿಸಬೇಕಾಗುತ್ತದೆ. ಆಗ ವಿಮಾ ಕಂಪನಿಯ ಸಿಬ್ಬಂದಿಗಳು ರೈತರ ಜಮೀನಿಗೆ ಭೇಟಿ ನೀಡುತ್ತಾರೆ. ಅಲ್ಲಿ ಎಷ್ಟು ಪ್ರಮಾಣದಲ್ಲಿ ಬೆಳೆ ಹಾಳಾಗಿದೆ ಎಂಬುದನ್ನು ಪರಿಶೀಲಿಸಿ ಬೆಳೆ ವಿಮೆ ಪಾವತಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆಗ ಯಾವ ರೈತರ ಬೆಳೆ ಹಾಳಾಗಿದೆಯೋ ಹಾಗೂ ಎಷ್ಟು ಪ್ರಮಾಣದಲ್ಲಿ ಬೆಳೆ ಹಾಳಾಗಿದೆ ಆ ಆಧಾರದ ಮೇಲೆ ರೈತರಿಗೆ ವಿಮೆ ಹಣ ಪಾವತಿಸಲಾಗುವುದು.