ಈ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ವರ್ಷಕ್ಕೆ 10 ಸಾವಿರ ಜಮೆ

Written by Ramlinganna

Updated on:

Under PMKisan 10 thousand  ಪಿಎಂ ಕಿಸಾನ್ ಯೋಜನೆಯಡಿ ಇತರ ರಾಜ್ಯದ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ಜಮೆಯಾದರೆ ಕರ್ನಾಟಕ ರಾಜ್ಯದ ರೈತರಿಗೆ ವರ್ಷಕ್ಕೆ 10 ಸಾವಿರ ರೂಪಾಯಿ ಜಮೆಯಾಗುತ್ತದೆ.

ಹೌದು, ಬಹುತೇಕ ರೈತರಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ಹೆಚ್ಚುವರಿಯಾಗಿ ಜಮೆಯಾಗುವ ಕುರಿತು ಸಂಶಯವಿರಬಹುದು. ಅಥವಾ ಇದರ ಬಗ್ಗೆ ಸರಿಯಾಗಿ ಮಾಹಿತಿ ಇರಲಿಕ್ಕಿಲ್ಲ. ಆದರೆ ರಾಜ್ಯ ಸರ್ಕಾರವು ರಾಜ್ಯದ ರೈತರಿಗೆ ಕಳೆದ ಎರಡು ವರ್ಷದಿಂದ 4 ಸಾವಿರ ರೂಪಾಯಿ ಹೆಚ್ಚುವರಿ ಹಣವನ್ನು ರೈತರ ಖಾತೆಗೆ ಜಮೆ ಮಾಡುತ್ತಿದೆ. ಇದನ್ನು ರೈತರು ಮೊಬೈಲ್ ನಲ್ಲಿ ಚೆಕ್ ಮಾಡಬಹುದು.

ಕೇಂದ್ರ ಸರ್ಕಾರವು ದೇಶದ ಎಲ್ಲಾ ಬಡ ರೈತರಿಗೆ ಪಿಎಂ ಕಿಸಾನ್ ಯೋಜನೆಯನ್ನು ಘೋಷಣೆ ಮಾಡಿದ್ದು ಗೊತ್ತಿದ್ದ ಸಂಗತಿ. ಈ ಯೋಜನೆಯಡಿಯಲ್ಲಿ ನೋಂದಾಯಿಸಿಕೊಂಡ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿಯನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಜಮೆಮಾಡಲಾಗುತ್ತಿದೆ.

ಪಿಎಂ ಕಿಸಾನ್ ಯೋಜನೆಯಡಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ನೀಡಲಾಗುವುದೆಂದು ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಘೋಷಿಸಿದ್ದರು. ಈಗಾಗಲೇ ವರ್ಷಕ್ಕೆ 4 ಸಾವಿರ ರೂಪಾಯಿ ಪ್ರತಿ ಆರು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ರೈತರಿಗೆ 2 ಸಾವಿರ ರೂಪಾಯಿ ಜಮೆಯಾಗುತ್ತಿದ್ದರಿಂದ ಬಹುತೇಕ ರೈತರು ಕೇಂದ್ರ ಸರ್ಕಾರದ ವತಿಯಿಂದಲೇ 2 ಸಾವಿರ ರೂಪಾಯಿ ಜಮೆಯಾಗುತ್ತಿದೆ ಎಂದುಕೊಂಡಿರಬಹುದು. ಆದರೆ ರೈತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಟ್ಟಿಯನ್ನು ಪ್ರತ್ಯೇಕವಾಗಿಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ನೋಡಿ ಮಾಹಿತಿ.

ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರದ ಫಲಾನುಭವಿಗಳ ಪಟ್ಟಿಯಲ್ಲಿರುವ ರೈತರ ಹೆಸರು ಚೆಕ್ ಮಾಡುವುದು ಹೇಗೆ?

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದ ಫಲಾನುಭವಿಗಳ ಪಟ್ಟಿಯಲ್ಲಿರುವ ರೈತರ ಹೆಸರು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಫಲಾನುಭವಗಳ ಪಟ್ಟಿ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ, ಜಿಲ್ಲೆ. ತಾಲೂಕು, ಗ್ರಾಮ ಆಯ್ಕೆ ಮಾಡಿಕೊಂಡು ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕೇಂದ್ರ ಸರ್ಕಾರದ ಫಲಾನುಭವಿಗಳ ಪಟ್ಟಿ ತೆರೆದುಕೊಳ್ಳುತ್ತದೆ.

Under PMKisan 10 thousand  ರಾಜ್ಯ ಸರ್ಕಾರದ ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿರುವವರ ಹೆಸರು ಚೆಕ್ ಮಾಡಿ

ಕೇಂದ್ರ ಸರ್ಕಾರದ ಯೋಜನೆಯಡಿಯಲ್ಲಿರುವ ಫಲಾನುಭವಿಗಳ ಪಟ್ಟಿಯಲ್ಲಿರುವ ಹೆಸರುಗಳನ್ನು ಚೆಕ್ ಮಾಡುವಂತೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ನೀಡಲಾಗುವ 4 ಸಾವಿರ ರೂಪಾಯಿ ಪಡೆಯುವ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಬಹುದು. ರೈತರು ತಮ್ಮ ಹೆಸರಿರುವದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಬೇಕು.  ಅಲ್ಲಿ ಜಿಲ್ಲೆ, ತಾಲೂಕು, ಹೋಬಳಿ ಗ್ರಾಮ, ಪಿಎಂಕೆ ಐಡಿ, ಹೆಸರು, ಸ್ಟೇಟಸ್ ಅಂದರೆ ಹೆಸರು ಅಪ್ರೂವ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿ ಕಾಣುತ್ತದೆ. ಪಿಎಂ ಕಿಸಾನ್ ಯೋಜನೆಯಡಿ 4 ಸಾವಿರ ರೂಪಾಯಿ ಪಡೆಯಲು ಸರ್ಕಾರಕ್ಕೆ ಹೆಸರು ಕಳುಹಿಸಲಾಗಿದ್ದರೆ ಯಸ್ ಎಂದು ಇಲ್ಲದಿದ್ದರೆ ನೋ ಎಂಬ ಮೆಸೆಜ್ ಇರುತ್ತದೆ.

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ನೋಂದಾಯಿಸಿದ ಎಲ್ಲಾ ರೈತರ ಹೆಸರು ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಹೆಚ್ಚುವರಿ 4 ಸಾವಿರ ಪಟ್ಟಿಯಲ್ಲಿ ಇರುವುದೆಂದು ಹೇಳಲಿಕ್ಕಾಗುವುದಿಲ್ಲ. ರಾಜ್ಯ ಸರ್ಕಾರದ ವತಿಯಂದ ಹೆಚ್ಚುವರಿ 4 ಸಾವಿರ ರೂಪಾಯಿ ಪಡೆಯಲು ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ಹೆಸರು ನೋಂದಾಯಿಸಿ ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಹೆಚ್ಚುವರಿ 4 ಸಾವಿರ ರೂಪಾಯಿ ಪಡೆಯಬಹುದು.

Leave a Comment