Application invited for distribution Tarpaulin 2020-21ನೇ ಸಾಲಿನ ಕೃಷಿ ಸಂಸ್ಕರಣಾ ಘಟಕದ ವತಿಯಿಂದ ರೈತರಿಗೆ ತಾಡಪತ್ರಿ ಹಾಗೂ ಪಿವಿಸಿ ಪೈಪ್ ಹಂಚಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯ ಎರಡು ರೈತ ಸಂಪರ್ಕ ಕೇಂದ್ರದಿಂದ ರೈತರಿಗೆ ತಾಡಪತ್ರಿ (ತಾಡಪಾಲ) ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿಜಯಪುರ ಜಿಲ್ಲೆಯ ಆಲಮೇಲ ರೈತ ಸಂಪರ್ಕ ಕೇಂದ್ರದಿಂದ ತಾಡಪತ್ರಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ರೈತರು ಪಹಣಿ/ಉತಾರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್ ಝರಾಕ್ಸ್, ಭಾವಚಿತ್ರ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರು ಜಾತಿ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಮಾರ್ಚ್ 15 ರೊಳಗೆ ಅರ್ಜಿ ಸಲ್ಲಿಸಬೇಕು.
ಕಳೆದ ವರ್ಷ ತಾಡಪಾಲ ಪಡೆದುಕೊಂಡ ರೈತರು ಈ ವರ್ಷ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೃಷಿ ಅಧಿಕಾರಿ ಯಾಸ್ಮೀನ್ ಮೋಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Application invited for distribution Tarpaulin ಕಕ್ಕೇರಾದಲ್ಲಿ ತಾಡಪತ್ರಿ ಹಾಗೂ ಪಿವಿಸಿ ಪೈಪ್ ವಿತರಿಸಲು ಅರ್ಜಿ ಆಹ್ವಾನ
ಯಾದಗಿರಿ ಜಿಲ್ಲೆಯ ರೈತ ಸಂಪರ್ಕ ಕೇಂದ್ರ ವ್ಯಾಪ್ತಿಯ 37 ಗ್ರಾಮಗಳ ತರಿಗೆ ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ರೈತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಜಾತಿಪ್ರಮಾಣಪತ್ರ, ಪಹಣಿ, ಬ್ಯಾಂಕ್ ಪಾಸ್ಬುಕ್ ಸೇರಿದಂತೆ ಇತರ ಅಗತ್ಯ ದಾಖಲಾತಿಗಳನ್ನು ಇದೇ ತಿಂಗಳ ಮಾರ್ಚ್ 15 ರೊಳಗೆ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ ಹಸಿರು ಪಟ್ಟಿಯಲ್ಲಿದ್ದರೂ ಸಾಲ ಮನ್ನಾಏಕಾಗಿಲ್ಲಾ? ಇಲ್ಲಿದೆ ಮಾಹಿತಿ
2.5 ಇಂಚಿನ ಪಿವಿಸಿ ಪೈಪಗಳು ಸಹಾಯಧನದಡಿಯಲ್ಲಿ ಲಭ್ಯವಿದ್ದು, ಆಸಕ್ತ ರೈತರು ಆಧಾರ್ ಕಾರ್ಡ್ ಹಾಗೂ ಪಹಣಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರೈತರ ಸಂಪರ್ಕ ಕೇಂದ್ರದ ಮುಖ್ಯಸ್ಥರನ್ನು ಸಂಪರ್ಕಿಸಬಹುದು ಎಂದು ಸ್ಥಳೀಯ ಕೇಂದ್ರದ ಅಧಿಕಾರಿ ಪರಶುನಾಥ ತಿಳಿಸಿದ್ದಾರೆ.
ಸಿರಿಧಾನ್ಯ, ಕೃಷಿ ಯಂತ್ರೋಪಕರಣಗಳ ಹಾಗೂ ಮತ್ಸ್ಯಮೇಳ ಪ್ರದರ್ಶನ
ಫೆ. 24 ರಿಂದ 26 ರವರೆಗೆ ನೂತನ ಗೋವುಗಳ, ಶ್ವಾನಗಳ ಪ್ರದರ್ಶನ, ಕೃಷಿ ಯಂತ್ರೋಪಕರಣಗಳ ಹಾಗೂ ಮತ್ಸ್ಯಮೇಳ ಪ್ರದರ್ಶನ ಏರ್ಪಡಿಸಲಾಗಿದೆ.
ಹೌದು, ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಜಿಲ್ಲಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ಬೃಹತ್ ಮಟ್ಟದ ಪ್ರದರ್ಶನ ಹಾಗೂ ಮರಾಟ ಮಳಿಗೆಗಳನ್ನು ಫೆಬ್ರವರಿ 24 ರಿಂದ 26 ರವರೆಗೆ ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ಉತ್ಸವದ ಪ್ರದರ್ಶನ ಸಮಿತಿಯು ತಿಳಿಸಿದೆ.
ಮೇಲ್ಕಂಡ ದಿನದಂದು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಈ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಪ್ರದರ್ಶನದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಮೇಳ, ಸಮಗ್ರ ಕೃಷಿ ಪದ್ಧತಿ ಪ್ರಾತ್ಯಕ್ಷಿಕೆ, ಫಲಪುಷ್ಪ ಪ್ರದರ್ಶನ, ಮತ್ಸ್ಯ ಮೇಳ, ಸ್ವ ಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ, ಎಫ್.ಪಿಓಗಳ ಉತ್ಪನ್ನಗಳ ಪ್ರದರ್ಶನ ಮಾಡಲಾಗುವುದು. ಇದರೊಂದಿಗೆ ನವೀನ ಕೃಷಿ ಹಾಗೂ ಯಂತ್ರೋಪಕರಣಗಳ ಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ. ಇದಲ್ಲದೆ ಫೆಬ್ರವರಿ 25 ಹಾಗೂ 26 ರಂದು ನೂತನ ಗೋವು ತಳಿಗಳ ಪ್ರದರ್ಶನ ನಡೆಯಲಿದೆ.
ಆಸಕ್ತರು ಪ್ರದರ್ಶನದಲ್ಲಿಮಳಿಗೆಗಾಗಿ ಮೊಬೈಲ್ ನಂಬರ್ 8453381700, 8217333171, 9880626689 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.