Belehani parihara status check ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬಹುದು. ಇದಕ್ಕಾಗಿ ರೈತರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಒಂದೇ ನಿಮಿಷದಲ್ಲಿ ತಮಗೆ ಇಲ್ಲಿಯವರೆಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Belehani parihara status check ಪರಿಹಾರ ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ರೈತರು ತಮ್ಮಲ್ಲಿರುವ ಮೊಬೈಲ್ ನಲ್ಲಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರಿಗೆ ಎರಡು ಆಯ್ಕೆಗಳು ಕಾಣುತ್ತವೆ. ಅಂದರೆ ಯಾವುದರ ಮೂಲಕ ನೀವು ಸ್ಟೇಟಸ್ ಚೆಕ್ ಮಾಡಬಹುದು ಎಂಬ ಆಯ್ಕೆಗಳಿರುತ್ತವೆ. ಸಹಜವಾಗಿ ರೈತರಿಗೆ ಪರಿಹಾರ ಐಡಿ ಗೊತ್ತಿರುವುದಿಲ್ಲ. ಹಾಗಾಗಿ ರೈತರು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಬೆಳೆಯಾವುದರ ಮೂಲಕ ಹಾಳಾಗಿದೆ ಎಂಬ ಆಯ್ಕೆಗಳಿರುತ್ತವೆ.
ಅಲ್ಲಿ ಬಹುತೇಕ ರೈತರ ಬೆಳೆ ಮಳೆಯಿಂದಾಗಿ ಹಾಳಾಗಿರುತ್ತದೆ. ಹಾಗಾಗಿ ರೈತರು Flood ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ರೈತರು ಯಾವ ವರ್ಷದ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕು ಎಂಬ ಆಯ್ಕೆಗಳಿರುತ್ತವೆ. ಅಲ್ಲಿಯೂ ರೈತರು ಯಾವ ವರ್ಷದ ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಅದನ್ನುಆಯ್ಕೆ ಮಾಡಿಕೊಳ್ಳಬೇಕು.
ಕಳೆದ ವರ್ಷದ ಸ್ಟೇಟಸ್ ಚೆಕ್ ಮಾಡಬೇಕಾಗಿರುವುದರಿಂದ ನೀವು 2022-23 ಆಯ್ಕೆ ಮಾಡಿಕೊಳ್ಳಬೇಕು.ಇದಾದ ಮೇಲೆ ನಿಮಗೆ ಇನ್ನೂ ಎರಡು ಆಯ್ಕೆಗಳು ಕಾಣುತ್ತವ. ಅಲ್ಲಿ ರೈತರು 12 ಅಂಕಿಗಳ ಆಧಾರ್ ಸಂಖ್ಯೆಯನ್ನು ನಮೂದಿಸಬೇಕು. ನಂತರ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಕ್ಯಾಪ್ಚ್ಯಾ ಕೋಡ್ ಹಾಕಿದ ನಂತರ ವಿವರಗಳನ್ನುಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ರಿಪೋರ್ಟ್ ತೆರೆದುಕೊಳ್ಳುತ್ತದೆ.
ಅಲ್ಲಿ ನಿಮ್ಮ ಜಿಲ್ಲೆ ಕಾಣಿಸುತ್ತದೆ. ಅದರ ಪಕ್ಕದಲ್ಲಿ ಯಾವ ಬ್ಯಾಂಕಿನಲ್ಲಿ ಹಣ ಜಮೆ ಮಾಡಲಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬುದು ಗೋಚರಿಸುತ್ತದೆ. ಅದರ ನಂತರ ನಿಮ್ಮ ಹೆಸರು, ತಂದೆಯ ಹೆಸರು ಕಾಣಿಸುತ್ತದೆ.
ಇದನ್ನೂ ಓದಿ : ಒಂದೇ ನಿಮಿಷದಲ್ಲಿ ನಿಮ್ಮ ಜಮೀನಿನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ: ಇಲ್ಲಿದೆ ಮಾಹಿತಿ
ಬ್ಯಾಂಕ್ ಅಕೌಂಟಿನ ಕೊನೆಯ ನಾಲ್ಕು ಅಂಕಿಗಳು ಕಾಣುತ್ತವೆ. ನಿಮ್ಮ ಬೆಳೆ ಹಾನಿ ಪರಿಹಾರ ಸಕ್ಸೆಸ್ ಆಗಿದೆಯೋ ಇಲ್ಲವೋ ಎಂಬ ಮಾಹಿತಿಯೊಂದಿಗೆ ಫ್ಲಡ್ ಹಾಗೂ ಖಾರಿಫ್ ಮತ್ತು ವರ್ಷದ ಮಾಹಿತಿ ಇರುತ್ತೆದ. ಅದರ ಕೆಳಗಡೆ ನಿಮ್ಮಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ ಸರ್ವೆ ನಂಬರ್ ಕಾಣಿಸುತ್ತದೆ. ಅದರ ಪಕ್ಕದಲ್ಲಿ ಯಾವ ಬೆಳೆಗೆ ಪರಿಹಾರ ನೀಡಲಾಗಿದೆ ಹಾಗೂ ಎಷ್ಚು ಎಕರೆಗೆ ಪರಿಹಾರ ನೀಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಒಂದು ವೇಳೆ ಕಳೆದ ವರ್ಷ ಅಂದರೆ 2021-22ನೇ ಸಾಲಿನಲ್ಲಿ ನಿಮಗೆ ಎಷ್ಟು ಬೆಳೆ ಹಾನಿ ಪರಿಹಾರ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಬೇಕಾದರೆ ನೀವು ವರ್ಷ ಚೇಂಜ್ ಮಾಡಬೇಕಾಗುತ್ತದೆ. ಅಲ್ಲಿ ನೀವು ಮತ್ತೆ ನಿಮ್ಮ ಆಧಾರ್ ಕಾರ್ಡ್ ಹಾಕಬೇಕು. ಇದಾದ ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು. ಆಗ ಕಳೆದ ಸಾಲಿನಲ್ಲಿ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಇದಕ್ಕಾಗಿ ರೈತರಿಗೆ ಹೆಚ್ಚು ಸಮಯ ಬೇಕಾಗಿಲ್ಲ. ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.