interest free loan extended ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೌದು, ಇಂದು ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಮಂಡಿಸಿದ ಬಜೆಟ್ ನಲ್ಲಿ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. 5 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ ನೀಡಲು ಘೋಷಣೆ ಮಾಡಿದ್ದಾರೆ.
ಇಂದು ರಾಜ್ಯದ ಮುಖ್ಯಮಂತ್ರಿ ಬಜೆಟ್ ಮಂಡನೆಗೂ ಮುನ್ನ ವಿಶೇಷ ಪೂಜೆ ನೆರವೇರಿಸಿದರು. ನಂತರ ಬಜೆಟ್ ಮಂಡನೆ ಮಾಡಿದ ಅವರು ಆರಂಭದಲ್ಲಿಯೇ ರೈತರಿಗಾಗಿ ವಿಶೇಷ ಘೋಷಣೆ ಮಾಡಿದರು.
ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ರೈತರಿಗೆ ಇನ್ನೂ ಮುಂದೆ 3 ಲಕ್ಷ ರೂಪಾಯಿ ಬದಲಾಗಿ 5 ಲಕ್ಷ ರೂಪಾಯಿಯನ್ನು ಬಡ್ಡಿರಹಿತ ಸಾಲ ನೀಡಲು ಘೋಷಣೆ ಮಾಡಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲು ರೈತರಿಗೆ ಸುಲಭವಾಗಿ ಹಾಗೂ ಅಗತ್ಯಕ್ಕೆ ತಕ್ಕಂತೆ ಸಾಲ ಸೌಲಭ್ಯ ಸಿಕ್ಕಂತಾಗಿದೆ. ಈ ವರ್ಷ 30 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25 ಸಾವಿರ ಕೋಟಿರೂಪಾಯಿಗಳಷ್ಟು ಸಾಲ ವಿತರಿಸಲಾಗುವುದು ಎಂದು ಬಜೆಟ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
interest free loan extended ಬಡ್ಡಿರಹಿತ ಸಾಲ ಹೆಚ್ಚಳ
ರಾಜ್ಯದಲ್ಲಿ ರೈತರಿಗಾಗಿ ಇದಕ್ಕಿಂತ ಮುಂಚಿತವಾಗಿ ರೈತರ ಬಡ್ಡಿರಹಿತ ಸಾಲದ ಮಿತಿ 3 ಲಕ್ಷ ರೂಪಾಯಿಯವರೆಗೆ ಇತ್ತು. ಈಗ 5 ಲಕ್ಷಕ್ಕೆ ಏರಿಸಿದ್ದಾರೆ. ರಾಜ್ಯದ 30 ಲಕ್ಷ ರೈತರಿಗೆ 25 ಸಾವಿರ ಕೋಟಿ ರೂಪಾಯಿ ಸಾಲ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಈ ಪಟ್ಟಿಯಲ್ಲಿರುವ ರೈತರಿಗಷ್ಟೇ ಪಿಎಂ ಕಿಸಾನ್ ಹಣ ಜಮೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ
ಇದೇ ರೀತಿ ಪಿಎಂ ಶ್ರೀ ಯೋಜನೆಯಡಿಯಲ್ಲಿ ರೈತರಿಗಾಗಿ 100 ಕೋಟಿ ರೂಪಾಯಿ ಮೀಸಲಿರಿಸಿದ್ದಾರೆ. ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷದ ಅಂಗವಾಗಿ ರೈತರಿಗೆ ಸಿರಿಧಾನ್ಯ ಉತ್ಪಾದನೆಗೆ ಪ್ರೋತ್ಸಾಹಿಸಲು ಪ್ರತಿ ಹೆಕ್ಟೇರಿಗೆ 10 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ನರೇಗಾ ಯೋಜನೆಯಡಿಯಲ್ಲಿ ಕೃಷಿ ಹೊಂಡಗಳ ನಿರ್ಮಾಣಕ್ಕಾಗಿ ರೈತರಿಗೆ ಪ್ರೋತ್ಸಾಹ ಧನ ನೀಡಲಾಗುವುದು. ಅಡಿಕೆ ಬೆಳೆ ರೋಗ ನಿಯಂತ್ರಣಕ್ಕ ನೂತನ ತಂತ್ರಜ್ಞಾನ ಅಭಿವೃದ್ಧಿಗತೀರ್ಥಹಳ್ಳಿ ಕೃಷಿ ಕೇಂದ್ರಕ್ಕೆ 10 ಕೋಟಿ ಅನುದಾನ ಮೀಸಲಿರಿಸಿದ್ದಾರೆ.
ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ 10930 ಕೋಟಿ ರೂಪಾಯಿ ಹಾಗೂ ರಾಜ್ಯ ಸರ್ಕಾರದಿಂದ 4822 ಕೋಟಿ ರೂಪಾಯಿ ಒಟ್ಟಾರೆ 15,752 ಕೋಟಿ ರೂಪಾಯಿಗಳನ್ನುರೈತರಿಗೆ ನೇರ ಜಮೆ ಮಾಡಲಾಗಿದೆ ಎಂದು ಬಜೆಟ್ ನಲ್ಲಿ ತಿಳಿಸಿದರು.
ರಾಜ್ಯದ 56 ಲಕ್ಷ ಸಣ್ಣ ಹಾಗೂ ಅತೀ ಸಣ್ಣ ರೈತರ ಕುಟುಂಬಗಳಿಗೆ 180 ಕೋಟಿ ರೂಪಾಯಿ ವೆಚ್ಚದಲ್ಲಿ ಜೀವನ್ ಜ್ಯೋತಿ ವಿಮಾ ಯೋಜನೆಯಡಿ ಭದ್ರತೆ ನೀಡಲಾಗಿದೆ. ರಾಗಿ ಭತ್ತವನ್ನು ಕನಿಷ್ಟ ಬೆಂಬಲ ಬೆಲೆಗೆ ಖರೀದಿಸಲು ಹೆಚ್ಚಿನ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಘೋಷಿಸಿದ ಡಿಸೆಲ್ ಸಬ್ಸಿಡಿ ನೀಡುವ ರೈತಶಕ್ತಿ ಯೋಜನೆಗೆ 400 ಕೋಟಿ ರೂಪಾಯಿಅನುದಾನ ನೀಡಲಾಗಿದೆ. ಕೃಷಿ ಯಾಂತ್ರೀಕರಣವನ್ನು ಉತ್ತೇಜಿಸಲು 2037 ಕೋಟಿ ರೂಪಾಯಿ ಒದಗಿಸಲಾಗಿದೆ. ಕೃಷಿ ತೋಟಗಾರಿಕೆಯಲ್ಲಿ ಹನಿ ನೀರಾವರಿಗೆ 2900 ಕೋಟಿ ರೂಪಾಯಿ ಮಾರುಕಟ್ಟೆಗೆ ನೆರವು ನೀಡಲಾಗಿದೆ.
ಪ್ರಾಣಿ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ಅನುದಾನ ಹಾಗೂ ಸಂಚಾರಿ ಪ್ರಾಣಿ ಚಿಕಿಕ್ಸೆಕೇಂದ್ರ ಸ್ಥಾಪನೆ ಮಾಡಲಾಗುವುದು. ಮೀನುಗಾರರ ಸುರಕ್ಷತೆಗಾಗಿ 17 ಕೋಟಿ ರೂಪಾಯಿ ಅನುದಾನದಲ್ಲಿ ಬೋಟಿ್ ಗಳಲ್ಲಿ ಜಿಪಿಎಸ್ ಅಳವಡಿಕೆಗೆ ಮೀಡಸಿಲಿಟ್ಟಿದ್ದಾರೆ. ಕನಿಷ್ಟ ಬೆಂಬಲ ಬೆಲೆ ನೀತಿ ಅಡಿಯಲ್ಲಿ ಧಾನ್ಯ ಖರೀದಿಗೆ ಆವರ್ಥ ನಿಧಿ 3500 ಕೋಟಿ ರೂಪಾಯಿ ನಿಗದಿಪಡಿಸಿದ್ದಾರೆ.