Up to 2 lakh subsidy for bore well ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ನಲ್ಲಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Up to 2 lakh subsidy for bore well ಯಾವ ರೈತರು ಅರ್ಜಿ ಸಲ್ಲಿಸಬೇಕು?
ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ -2 (ಎ) ರಲ್ಲಿನ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಸವಿತಾ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಸವಿತಾ ಮತ್ತು ಇದರ ಉಪಜಾತಿಗೆ ಸೇರಿದವರಾಗಿರಬೇಕು.
ಇದನ್ನೂ ಓದಿ : ಈ ಪಟ್ಟಿಯಲ್ಲಿರುವ ರೈತರಿಗಷ್ಟೇ ಪಿಎಂ ಕಿಸಾನ್ ಹಣ ಜಮೆ- ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ
ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು. ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ 2.50 ಲಕ್ಷ ರೂಪಾಯಿ ಇದೆ.ಇದರಲ್ಲಿ 2 ಲಕ್ಷ ರೂಪಾಯಿ ಸಹಾಯಧನ ಹಾಗೂ 50 ಸಾವಿರ ರೂಪಾಯಿ ನಿಗಮದಿಂದ ಶೇ. 4 ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿರುತ್ತದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು) (Arivu shaikshanika sala yojana)
ಹಿಂದುಳಿದ ವರ್ಗಗಳ ಪ್ರವರ್ಗ 2 (ಎ) ರಲ್ಲಿನ ಸವಿತಾ ಮತ್ತ ಇದರ ಉಪಜಾತಿಗಳಿಗೆ ಸೇರಿದ ಸಿಇಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ಯಾವುದು? (what is the last date)
ಅರ್ಹ ವಿದ್ಯಾರ್ಥಿಗಳು https://suvidha.karnataka.gov.in ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಮಾರ್ಚ್ 3 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ರೈತರು ಯಾರಿಗೆ ಸಂಪರ್ಕಿಸಬೇಕು? (whom should contact farmers)
ಹೆಚ್ಚಿನ ಮಾಹಿತಿಗಾಗಿ ನಿಗಮದ https://kssd.karnataka.gov.in ವೆಬ್ಸೈಟಿಗೆ ಭೇಟಿ ನೀಡಬಹುದು. ನಿಗಮದ ಸಹಾಯವಾಣಿ ಸಂಖ್ಯೆ 080-22374832 ಮತ್ತು ಮೊಬೈಲ್ ನಂಬರ್ 9606066389 ಅಥವಾ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278635 ಗೆ ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?(what are document need for get subsidy)
ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವ ರೈತರ ಬಳಿ ಆಧಾರ್ ಕಾರ್ಡ್ ಇರಬೇಕು. ಜಮೀನಿನ ದಾಖಲೆ ಪಹಣಿ (ಆರ್.ಟಿ.ಸಿ) ಇರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು.
ಇದನ್ನೂ ಓದಿ : ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ರೈತರು FID ರೈತ ಕಾರ್ಡ್ ಸಂಖ್ಯೆ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಗಂಗಾ ಕಲ್ಯಾಣ ಯೋಜನೆಯಡಿ ಈ ಹಿಂದೆ ಬೋರ್ವೆಲ್ ಕೊರೆಯಲು ಸೌಲಭ್ಯ ಪಡೆದಿರಬಾರದು. ಸಣ್ಣ ಮತ್ತು ಅತೀ ಸಣ್ಣರೈತರಾಗಿರಬೇಕು. ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮಕ್ಕೆ ಸಂಪರ್ಕಿಸಬಹುದು.