Anganwadi recruitment from various districts ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು ಕಾರವಾರ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ 19-35 ವಯೋಮಾನದವರಾಗಿರಬೇಕು. ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಅಧ್ಯಯನ ಮಾಡಿರಬೇಕು.
ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಡಿಎಸ್ಇಆರ್.ಟಿಯಿಂದ ಇಸಿಜಿಸಿಇ ಡಿಪ್ಲೋಮಾ ಕೋರ್ಸ್, ಜೆಒಸಿ ಕೋರ್ಸ್, ಎನ್.ಟಿ.ಟಿ ಕೋರ್ಸ್ ಗಳನ್ನು ಹಾಗೂ ಡಿಪ್ಲೋಮಾ ನ್ಯುಟ್ರಿಶಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು ಮತ್ತು 5 ಅಂಕಗಳನ್ನು ಬೋನಸ್ ನೀಡಲಾಗುವುದು.
ಅಭ್ಯರ್ಥಿಯು ಅರ್ಜಿ ಸಲ್ಲಿಸುವ ಅಂಗನವಾಡಿ ಕೇಂದ್ರದ ಕಂದಾಯ ಗ್ರಾಮ/ಕಂದಾಯ ವಾರ್ಡ್ ನಲ್ಲಿ ವಾಸ್ತವ್ಯ ಹೊಂದಿರಬೇಕು. ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ ಅತವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು.
ಆಸಕ್ತರು ಮಾರ್ಚ್ 18 ರೊಳಗೆ ಲಕೋಟೆಯ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ / ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಎಂದು ನಮೂದಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸಿದ್ದಾಪುರ ಇಲ್ಲಿಸಲ್ಲಿಸಬೇಕು.
ಇದನ್ನೂ ಓದಿ : ಜಮೀನಿನ ಓರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲಿನಲ್ಲಿ ಒಂದೇ ನಿಮಿಷದಲ್ಲಿ ಡೌನ್ಲೋಡ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಸಿದ್ದಾಪುರ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ದೂರವಾಣಿ ಸಂಖ್ಯೆ 0839 231402 ಗೆ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Anganwadi recruitment from various districts ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ಅರ್ಜಿ ಅಹ್ವಾನ
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿಯೂ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸೋಮವಾರಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ ಮೂರು ಅಂಗನವಾಡಿ ಕಾರ್ಯಕರ್ತೆಯರು, 12 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅದೇ ರೀತಿ ಮಡಿಕೇರಿ ತಾಲೂಕಿನ ವ್ಯಾಪ್ತಿಯಲ್ಲಿ 3 ಅಂಗನವಾಡಿ ಕಾರ್ಯಕರ್ತೆ ಹಾಗೂ4 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಪೊನ್ನಂಪೇಟೆ ತಾಲೂಕಿನ ವ್ಯಾಪ್ತಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 22 ಸಹಾಯಕಿಯರ ಹುದ್ಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನವಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು.ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ವ್ಯಾಪ್ತಿಯಲ್ಲಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂಗವಿಕಲರಿಗೆ ಅರ್ಜಿ ಸಲ್ಲಿಸಲು ವಯೋಮಿತಿ 10 ವರ್ಷ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವವರು ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : Job card list ನಿಂದ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೇ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಅರ್ಜಿ ಹಾಗೂ ಇನ್ನಿತರ ಮಾಹಿತಿ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ದೂರವಾಣಿ ಸಂಖ್ಯೆ 08272 298379 ಗೆ ಕರೆ ಮಾಡಲು ಕೋರಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 8 ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 7 ಅಂಗನವಾಡಿ ಕೇಂದ್ರಗಳ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 17 ಕೊನೆಯ ದಿನವಾಗಿದೆ. ಹೆಚ್ಚಿ ವಿವರಗಳಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಬೆಳ್ತಂಗಡಿ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.