10 month horticulture free training ಬಾಗಲಕೋಟೆ, ಚಿತ್ರದುರ್ಗ, ಹಾಸನ, ಗದಗ, ಚಾಮರಾಜನಗರ, ಮೈಸೂರು, ಕೊಡಗು, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ 10 ತಿಂಗಳ ಕಾಲ ಉಚಿತ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ ಬಾಗಲಕೋಟೆ ಜಿಲ್ಲೆಯ ರೈತರ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ.
2023 ರ ಮೇ 2 ರಿಂದ 2024 ರ ಫೆಬ್ರವರಿ 29 ರವರೆಗೆ ತರಬೇತಿ ಆಯೋಜಿಸಿದ್ದು, ಜಿಲ್ಲೆಯ ರೈತರು, ರೈತ ಮಹಿಳೆಯರು ಸಹ ಅರ್ಜಿ ಸಲ್ಲಿಸಬಹುದು. ಕನಿಷ್ಟ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅರ್ಜಿಗಳನ್ನು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಮಾರ್ಚ್ 11 ರಿಂದ ಏಪ್ರೀಲ್ 12 ರವರೆಗೆ ಪಡೆದುಕೊಳ್ಳಲು ಅವಕಾಶವಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10 month horticulture free training ಚಿತ್ರದುರ್ಗ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನ
ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಹೋಬಳಿ ವ್ಯಾಪ್ತಿಯ ಐಯ್ಯನಹಳ್ಳಿ ಗ್ರಾಮದಲ್ಲಿನ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2023 ರ ಮೇ 2 ರಿಂದ 2024ರ ಫೆಬ್ರವರಿ 29 ರವರೆಗೆ ರೈತರ ಮಕ್ಕಳಿಗೆ 10 ತಿಂಗಳ ವಸತಿ ಸಹಿತ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ: ನಿಮ್ಮ ಹೆಸರಿದೆಯೇ ಚೆಕ್ ಮಾಡಿ
ಏಪ್ರೀಲ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ತರಬೇತಿ ಅರ್ಜಿಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ಕಚೇರಿಯಲ್ಲಿ ಪಡೆಯಬಹುದು.
ತರಬೇತಿಗೆ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ತರಬೇತಿ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಚಿತ್ರದುರ್ಗ ದೂರವಾಣಿ ಸಂಖ್ಯೆ 08194 230895, 9980991048 ಗೆ ಸಂಪರ್ಕಿಸಲು ಕೋರಲಾಗಿದೆ.
ಹಾಸನ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಹಾಸನ ಜಿಲ್ಲೆಯ ತೋಟಗಾರಿಕೆ ತರಬೇತಿ ಕೇಂದ್ರ ಸೋಮನಹಳ್ಳಿ ಕಾವಲು ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿಗೆ ಜಿಲ್ಲೆಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 18 ರಿಂದ 33 ವಯೋಮಾನದೊಳಗಿರಬೇಕು. ಆಯ್ಕೆ ಪಟ್ಟಿಯನ್ನು ಏಪ್ರೀಲ್ 18 ರಂದು ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿತಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ರಾಜ್ಯವಲಯ, ಹಾಸನರವರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08172 269995 ಗೆ ಸಂಪರ್ಕಿಸಲು ಕೋರಲಾಗಿದೆ.
ಗದಗ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ
2023-24ನೇ ಸಾಲಿನ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಅವಧಿಗೆ ಮೇ 2 ರಿಂದ ಫೆರ್ಬವರಿ 29 ರವರೆಗೆ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ರೈತರ ಜಮೀನಿಗೆ ಹೋಗುವ ಕಾಲಾದಾರಿ, ಬಂಡಿದಾರಿ ಹಳ್ಳಕೊಳ್ಳಗಳ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಮಾರ್ಚ್ 11 ರಿಂದ ಅರ್ಜಿ ವಿತರಿಸಲಾಗುತ್ತಿದೆ. ಅರ್ಜಿ ಸಲ್ಲಿಸಲು ಏಪ್ರೀಲ್ 12 ಕೊನೆಯ ದಿನವಾಗಿದೆ. ಏಪ್ರೀಲ್ 15 ರಂದು ಬೆಳಗ್ಗೆ 11 ಗಂಟೆಗೆ ನಗರದ ಭೀಷ್ಮ ಕೆರೆಯ ಹತ್ತಿರ ಇರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಜರುಗಿಸಲಾಗುವುದು. ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಅಭ್ಯರ್ಥಿಗಳಿಗೆ ಸಂದರ್ಶನ ಸ್ಥಳವನ್ನು ಆಯಾ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕ ಕಚೇರಿಗಳಲ್ಲಿ ನಿಗದಿತ ಸಮಯದಲ್ಲಿ ಗುರಿಗೆ ತಕ್ಕಂತೆ ನಿಯಮಾನುಸಾರ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ನಿರ್ದೇಶಕರು ಮತ್ತು ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಚಾಮರಾಜನಗರ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಚಾಮರಾಜನಗರ ತೋಟಗಾರಿಕೆ ಇಲಾಖೆಯ ವತಿಯಿಂದಲೂ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರೀಲ್ 12 ಕಡೆಯ ದಿನವಾಗಿದೆ.
ಕೊಡಗು ಹಾಗೂ ಮೈಸೂರು ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ
ಮಡಿಕೇರಿ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತಬೇತಿ ಕೇಂದ್ರಗಳಲ್ಲಿ ರೈತರ ಮಕ್ಕಳಿಗೆ 10 ತಿಂಗಳ ಕಾಲ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8310687707 ಗೆ ಸಂಪರ್ಕಿಸಲು ಕೋರಲಾಗಿದೆ.
ಮೈಸೂರು ಜಿಲ್ಲೆಯ ರೈತರು 0821 2977572 ಗೆ ಸಂಪರ್ಕಿಸಬಹುದು.