ಪಿಎಂ ಕಿಸಾನ್ 975 ಕೋಟಿ ರೂ. ಬಿಡುಗಡೆ

Written by Ramlinganna

Updated on:

Pmkisan state fund release ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಕರ್ನಾಟಕದ  2022-23ನೇ ಸಾಲಿನ 2ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಿದ್ದಾರೆ.

ಹೌದು, ರೈತರಿಗೆ ಆರ್ಥಿಕ ನೆರವಾಗಲೆಂದು 975 ಕೋಟಿ ರೂಪಾಯಿ ಮೊತ್ತವನ್ನು 48,75,000 ರೈತರ ಖಾತೆಗಳಿಗೆ ಬಿಡುಗಡೆ ಮಾಡಲು ಚಾಲನೆ ನೀಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಿಂದ ರಾಜ್ಯದ ರೈತರ ಖಾತೆಗೆ ನೇರವಾಡಿ ಡಿಬಿಟಿ ಮೂಲಕ ಜಮೆಯಾಗಲಿದೆ. ಇದೇನಿದುಕಳೆದ ತಿಂಗಳು ಪಿಎಂ ಕಿಸಾನ್ ಹಣ ಜಮೆಯಾಗಿದೆಯಲ್ಲ? ಮತ್ತೇ ಸಾಧ್ಯವೇ ಅಂದುಕೊಂಡಿದ್ದೀರಾ? ಇದು ಪಿಎಂ ಕಿಸಾನ್ ಯೋಜನೆಯ ಕೇಂದ್ರ ಸರ್ಕಾರದ್ದಲ್ಲ, ರಾಜ್ಯ ಸರ್ಕಾರದ ಹೆಚ್ಚುವರಿ ಹಣ ಜಮೆಯಾಗುತ್ತಿದೆ.

ಯಾವ ವರ್ಷದಲ್ಲಿ ಎಷ್ಟು ಹಣ ಜಮೆಯಾಗುತ್ತಿದೆ?

ಕೇಂದ್ರ ಸರ್ಕಾರದ ಪ್ರತಿ ವರ್ಷ ಮೂರು ಕಂತುಗಳಲ್ಲಿ ಜಮೆ ಮಾಡುವ ತಲಾ ಎರಡು ಸಾವಿರರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿಯನ್ನು ಜಮೆ ಮಾಡುತ್ತಿದೆ. ಇದರೊಂದಿಗೆ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ ರಾಜ್ಯದ ರೈತರಿಗೆ 4 ಸಾವಿರ ರೂಪಾಯಿಯನ್ನು ತಲಾ ಎರಡು ಸಾವಿರ ರೂಪಾಯಿಯಂತೆ ಎರಡು ಕಂತುಗಳಲ್ಲಿ ರಾಜ್ಯದ ರೈತರ ಖಾತೆಗೆ ಜಮೆ ಮಾಡುತ್ತಿದೆ. ಹೀಗಾಗಿ ಕೇಂದ್ರ ಸರ್ಕಾರದ 6 ಸಾವಿರ ರೂಪಾಯಿ ಮತ್ತು ರಾಜ್ಯ ಸರ್ಕಾರದ 4 ಸಾವಿರ ರೂಪಾಯಿ ಸೇರಿ ಒಟ್ಟು 10 ಸಾವಿರ ರೂಪಾಯಿ ರೈತರ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮೂಲಕ ಜಮೆಯಾಗುತ್ತಿದೆ.

Pmkisan state fund release ಪಿಎಂ ಕಿಸಾನ್ ರಾಜ್ಯ ಸರ್ಕಾರದ ಹೆಚ್ಚುವರಿ ಪಟ್ಟಿಯಲ್ಲಿನಿಮ್ಮ ಹೆಸರಿದೆಯೇ?

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 4 ಸಾವಿರ ರೂಪಾಯಿ ಜಮೆಯಾಗುವ ಪಟ್ಟಿಯಲ್ಲಿ ನಿಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/FarmerDeclarationReport.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಇದಾದ ಮೇಲೆ ಗ್ರಾಮ ಆಯ್ಕೆ ಮಾಡಿಕೊಂಡು ವೀಕ್ಷಿಸು ಮೇಲೆ ಕ್ಲಿಕ್ ಮಾಡಿದರೆ ಸಾಕು, ರಾಜ್ಯ ಸರ್ಕಾರದ ಹೆಚ್ಚುವರಿ ಪಿಎಂ ಕಿಸಾನ್ ರೈತರ ಅರ್ಹರ ಪಟ್ಟಿ ಓಪನ್ ಆಗುತ್ತದೆ. ಈ ಪಟ್ಟಿಯಲ್ಲಿರುವ ರೈತರಿಗೆ ಇಂದು ಪಿಎಂ ಕಿಸಾನ್ ಯೋಜನೆಯ ಪ್ರಸಕ್ತ ಸಾಲಿನ 2ನೇ ಕಂತಿನ ಹಣ ಜಮೆಯಾಗಲಿದೆ.

ಇದನ್ನು ಓದಿ : ನಿಮ್ಮ ಜಮೀನಿನ ಮೇಲೆ ನಿಮಗೆ ಗೊತ್ತಿಲ್ಲದೆ ಬೆಳೆ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿದ ರೈತರೆಲ್ಲರೂ ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಹಾಗಾಗಿ ಇನ್ನೂ ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೆಸರು ನವೋಂದಣಿ ಮಾಡಿಸಿಲ್ಲದಿದ್ದಲ್ಲಿ ಕೂಡಲೇ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ನಿಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರದ ವತಿಯಿಂದ ಇಲ್ಲಿಯವರೆಗೆ ಎಷ್ಟು ರೈತರಿಗೆ ಜಮೆಯಾಗಿದೆ?

ಕರ್ನಾಟಕ ಸರ್ಕಾರದಿಂದ ಯೋಜನೆ ಪ್ರಾರಂಭವಾದಾದಾಗಿನಿಂದ ಅಂದರೆ ಆಗಸ್ಟ್ 2019 ರ ನಂತರ ಇಲ್ಲಿಯವರೆಗೆ ರಾಜ್ಯದ ರೈತರಿಗೆ ಸುಮಾರು 50.35 ಲಕ್ಷ ಫಲಾನುಭವಿಗಳಿಗೆ 4821.37 ಕೋಟಿ ರೂಪಾಯಿ ಆರ್ಥಿಕ ಸಹಾಯಧನವನ್ನು ನೀಡಲಾಗಿರುತ್ತದೆ.

ಏನಿದು ಪಿಎಂ ಕಿಸಾನ್ ಯೋಜನೆ?

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಭಾರತದಲ್ಲಿರುವ ಭೂ ಹಿಡುವಳಿ ಹೊಂದಿರುವ ರೈತರಿಗೆ ಆದಾಯ ಬೆಂಬಲವನ್ನು ಒದಗಿಸುವ ಭಾರತ ಸರ್ಕಾರದ ಯೋಜನೆಯಾಗಿದೆ.ಈ ಯೋಜನೆಯು ಕೃಷಿ ಹಾಗೂ ಪೂರಕ ಚಟುವಟಿಕೆಗಳು ಮತ್ತು ರೈತರ ಇತರೆ ಅಗತ್ಯಗಳಿಗೆ ಪೂರಕ ಹಣಕಾಸಿನ ಬೆಂಬಲವನ್ನು ಒದಗಿಸುತ್ತದೆ.

Leave a Comment