Pmkisan village wise list ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಜಮೆಗಾಗಿ ಕಾಯುತ್ತಿರುವ ರೈತರು ತಮ್ಮೂರಿನ ಪಟ್ಟಿಯಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
Pmkisan village wise list ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ರಾಜ್ಯ ಕರ್ನಾಟಕ ಆಯ್ಕೆ ಮಾಡಿಕೊಳ್ಳಬೇಕು. ನಂತರ ನೀವು ಯಾವ ಜಿಲ್ಲೆಗೆ ಸಂಬಂಧಿಸಿದ್ದೀರೋ ಆ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡ ನಂತರ ಬ್ಲಾಕ್ ನಲ್ಲಿಯೂ ನಿಮ್ಮ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದಮೇಲೆ ನಿಮ್ಮ ಗ್ರಾಮ ಆಯ್ಕೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ.
ಈ ಪಟ್ಟಿಯಲ್ಲಿರುವ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆಯೇ?
ಪಿಎಂ ಕಿಸಾನ್ ಯೋಜನೆಯ ಗ್ರಾಮವಾರು ಪಟ್ಟಿಯಲ್ಲಿರುವ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಹಣ ಜಮೆಯಾಗುತ್ತದೆ ಎಂದು ಹೇಳಲಿಕ್ಕಾಗುವುದಿಲ್ಲ. ಏಕೆಂದರೆ ಈಗ ಯೋಜನೆಯ ಲಾಭ ಪಡೆಯಲು ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುವುದಿಲ್ಲ. ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೆಂದು ನಿರ್ಲಕ್ಷ ಮಾಡಮಾಡಬಾರದು.
ಇಕೆವೈಸಿ ಆಗಿದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಗೆ ನಿಮ್ಮ ಹೆಸರು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು. ಇಕೆವೈಸಿ ಆಗಿದ್ದರೆ ಇಕೆವೈಸಿ ಇಸ್ ಆಲರಡಿ ಡನ್ ಎಂಬ ಮೆಸೆಜ್ ಬರುತ್ತದೆ. ಇಲ್ಲದಿದ್ದರೆ ನೀವು ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ನಂತರ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ ಮೊಬೈಲ್ ನಲ್ಲೇ ಆನ್ಲೈನ್ ನಲ್ಲಿ ಇಕೆವೈಸಿ ಮಾಡಿಸಬಹುದು.
ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಲು ಸಮಸ್ಯೆಯಾಗುತ್ತಿದ್ದರೆ ನಿಮ್ಮ ಹತ್ತಿರದ ಗ್ರಾಮ ಒನ್, ಸಿ.ಎಸ್.ಸಿ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬೇಕು. ಇಕೆವೈಸಿ ಮಾಡಿಸದಿದ್ದರೆ ನಿಮಗೆ ಮುಂದಿನ ಕಂತಿನ ಹಣ ಜಮೆಯಾಗುವ ಸಾಧ್ಯತೆಯಿರುವುದಿಲ್ಲ.
ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗಬಹುದು?
ಪಿಎಂ ಕಿಸಾನ್ ಯೋಜನೆಯ 14ನೇ ಕಂತು ಏಪ್ರೀಲ್ ಟು ಜುಲೈ ತಿಂಗಳ ಅವಧಿಯಲ್ಲಿ ಯಾವುದೇ ತಿಂಗಳಲ್ಲಿ ಜಮೆಯಾಗಬಹುದು. ಏಕೆಂದರೆ ಪ್ರತಿ ನಾಲ್ಕು ತಿಂಗಳಿಗೆ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆ ಮಾಡಲಾಗುವುದು. ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಫೆಬ್ರವರಿ ತಿಂಗಳಲ್ಲಿ ಜಮೆಯಾಗಿತ್ತು. ಹಾಗಾಗಿ ಮೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗಳ ಆರಂಭದಲ್ಲಿ ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಜಮೆ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೇ ತಿಂಗಳ ಅಂತ್ಯ ಅಥವಾ ಜೂನ್ ತಿಂಗ ಆರಂಭ ರೈತರು ಬಿತ್ತಣಿಕೆಯಲ್ಲಿ ತೊಡಗುವ ಸಾಧ್ಯತೆಯಿರುವುದರಿಂದ ರೈತರಿಗೆ ನೆರವಾಗಲು ಅದೇ ಅವಧಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.