Crop insurance amount will be deposit ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರಲ್ಲಿ ಯಾವ ರೈತರಿಗೆ ಜಮೆಯಾಗಿದೆ? ಯಾವ ರೈತರಿಗೆ ಜಮೆಯಾಗಿಲ್ಲ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರು ತಮಗೆ ಬೆಳೆ ವಿಮೆ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೆ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
Crop insurance amount will be deposit ಬೆಳೆ ವಿಮೆ ಜಮೆ ಚೆಕ್ ಮಾಡುವುದು ಹೇಗೆ?
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ ರೈತರು ಮುಂಗಾರು ಹಂಗಾಮಿನ ಬೆಳೆ ವಿಮೆ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
https://www.samrakshane.karnataka.gov.in/Premium/CheckStatusMain_aadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮೊಬೈಲ್ ನಂಬರ್ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನೀವು ಬೆಳೆ ವಿಮೆ ಪಾವತಿಸಿದ ಮಾಹಿತಿ ಕಾಣಿಸುತ್ತದೆ. ನಿಮಗೆ ಬೆಳೆ ವಿಮೆ ಜಮೆಯಾಗಿದ್ದರೆ ಯಾವ ಬೆಳೆಗೆ ಎಷ್ಟು ಜಮೆಯಾಗಿದೆ? ಎಷ್ಟು ಎಕರೆಗೆ ಜಮೆಯಾಗಿದೆ ಎಂಬ ಮಾಹಿತಿ ಇರುತ್ತದೆ.
ಒಂದು ವೇಳೆ ನಿಮಗೆ ಬೆಳೆ ವಿಮೆ ಜಮೆಯಾಗಿಲ್ಲವಾದಲ್ಲಿ ಅಲ್ಲಿ ನಿಮ್ಮ ಹೆಸರಿನ ಮುಂದೆ ವಿಮಾ ಕಂಪನಿಯಿಂದ ನಿಮ್ಮ ಅರ್ಜಿ ಸ್ವೀಕೃತವಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಇದರೊಂದಿಗೆ ಅದರ ಮುಂದುಗಡೆಯಿರುವ ಸೆಲೆಕ್ಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಮತ್ತೊಂದು ಪೇಜ್ ಓಪನ್ ಆಗುತ್ತದೆ. ನಂತರ ಅಲ್ಲಿ ಕಾಣುವ View Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರು ಊರು, ವಿಳಾಸ ಯಾವ ಬೆಳೆಗೆ ವಿಮೆ ಮಾಡಿಸಿದ್ದೀರಿ? ಎಷ್ಟು ಎಕರೆಗೆ ಬೆಳೆ ವಿಮೆ ಮಾಡಿಸಿದ್ದೀರಿ ಎಂಬಿತ್ಯಾದಿ ಮಾಹಿತಿ ಕಾಣಿಸುತ್ತದೆ.
ಇದನ್ನೂ ಓದಿ : ನಿಮ್ಮ ಯಾವ ಸರ್ವೆ ನಂಬರ್ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ನೀವು ಬೆಳೆ ವಿಮೆ ಮಾಡಿಸಿದ್ದರೂ ನಿಮ್ಮ ಅರ್ಜಿ ಸ್ವೀಕೃತವಾಗಿಲ್ಲವಾದಲ್ಲಿ ನೀವು ನಿಮ್ಮ ಬೆಳೆ ವಿಮಾ ಕಂಪನಿಗೆ ಸಂಪರ್ಕಿಸಬೇಕು. ಆಗ ನಿಮಗೆ ಬೆಳೆ ವಿಮೆ ಜಮೆಯಾಗಲು ತಡವೇಕೆ ಆಗುತ್ತಿದೆ? ಅದಕ್ಕೆ ಕಾರಣವೇನು? ಎಂಬುದನ್ನು ಬೆಳೆ ವಿಮೆ ಉಚಿತ ಸಹಾಯವಾಣಿ ನಂಬರಿಗೆ ಕರೆ ಮಾಡಿ ವಿಚಾರಿಸಬಹುದು.
ಬೆಳೆ ವಿಮೆ ಉಚಿತ ಸಹಾಯವಾಣಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರು 1800 180 1551 ಗೆ ಕರೆ ಮಾಡಬೇಕು. ಆಗ ಸಿಬ್ಬಂದಿ ಕರೆ ಸ್ವೀಕರಿಸುತ್ತಾರೆ. ಆಗ ನೀವು ಬೆಳೆ ವಿಮೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು. ನಿಮ್ಮ ಜಿಲ್ಲೆಯಲ್ಲಿ ಯಾವ ಬೆಳೆ ವಿಮಾ ಕಂಪನಿಗೆ ನಿಯೋಜಿಸಲಾಗಿದೆ. ಹಾಗೂ ಅವರ ಸಂಪರ್ಕದ ಮೊಬೈಲ್ ನಂಬರ್ ನ್ನು ರೈತರು ಉಚಿತ ಸಹಾಯವಾಣಿಯಿಂದ ಪಡೆಯಬಹುದು.
ಬೆಳೆ ವಿಮೆ ಮಾಡಿಸಿದ ಕೆಲವು ರೈತರಿಗೆ ಈಗಾಗಲೇ ಒಂದು ಹಂತದ ಹಣ ಜಮೆ ಮಾಡಲಾಗಿದೆ. ಇನ್ನೂ ಕೆಲವು ರೈತರಿಗೆ ಬೆಳೆ ವಿಮೆ ಹಣ ಜಮೆಯಾಗಿಲ್ಲ. ಆ ರೈತರಿಗೆ ಅತೀ ಶೀಘ್ರದಲ್ಲಿ ಬೆಳೆ ವಿಮೆ ಹಣ ಜಮೆಯಾಗುವುದು. ಬೆಳೆ ಹಾಳಾದಾಗ ವಿಮಾ ಕಂಪನಿಗೆ ತಿಳಿಸಿದ್ದರೆ ವಿಮೆ ಹಣ ಜಮೆಯಾಗುತ್ತದೆ. ವಿಮಾ ಕಂಪನಿಗೆ ತಿಳಿಸದಿದ್ದರೆ ಜಮೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ.