PUC Result announced ಮಾರ್ಚ್ 9 ರಿಂದ 29 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು (ಶುಕ್ರವಾರ) ಪ್ರಕಟಗೊಳ್ಳಲಿದೆ. ಹೌದು, ಬೆಳಗ್ಗೆ 11 ಗಂಟೆಯಿಂದಲೇ ನಿಮ್ಮ ರಿಸಲ್ಟ್ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.
ಮಾರ್ಚ್9 ರಿಂದ 29 ರವರೆಗೆ ನಡೆದಿದ್ದ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 10 ಗಂಟೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ಕರೆಯಲಾಗಿದೆ. ಸುದ್ದಿಗೋಷ್ಠಿಯ ನಂತರ ಫಲಿತಾಂಶ ಪ್ರಕಟವಾಗಲಿದೆ.
PUC Result announced ಚೆಕ್ ಮಾಡುವುದು ಹೇಗೆ?
ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ರಿಸಲ್ಟ್ ಚೆಕ್ ಮಾಡಲು ಈ
https://karresults.nic.in
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕರ್ನಾಟಕ ಪರೀಕ್ಷಾ ಫಲಿತಾಂಶಗಳ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಪದವಿ ಪೂರ್ಣ ಶಿಕ್ಷಣ ಇಲಾಖೆಯ ನಡೆಸಿದ ಪರೀಕ್ಷೆಗಳ ಫಲಿತಾಂಶ ಕಾಣಿಸಲಿದೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ 2023 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ರಿಜಿಸ್ಟರ್ ನಂಬರ್ ಹಾಕಬೇಕು. ನಂತರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಈ ಮೂರರಲ್ಲಿ ನೀವು ಯಾವ ವಿಭಾಗದ ವಿದ್ಯಾರ್ಥಿ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ನಿಮಗೆ ಪಿಯುಸಿ ದ್ವಿತೀಯ ಪರೀಕ್ಷೆಯಲ್ಲಿ ಎಷ್ಟು ಅಂಕಗಳು ಬಂದಿದೆ ಎಂಬುದನ್ನು ಚೆಕ್ ಮಾಡಬಹುದು.
ಇಲ್ಲೂ ಪಿಯುಸಿ ದ್ವಿತೀಯ ಪರೀಕ್ಷಾ ಫಲಿತಾಂಶ ಚೆಕ್ ಮಾಡಬಹುದು (Check here also with using link)
ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡುವ ಮೇಲಿನ ಲಿಂಕ್ ಓಪನ್ ಆಗದಿದ್ದರೆ ಈ
https://kseab.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮತ್ತೊಂದು ಪೇಜ್ ಓಪನ್ ಆಗುತ್ತದೆ. ನಂತರ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕರು. ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮಗೆ ಫಲಿತಾಂಶ ಓಪನ್ ಆಗುತ್ತ್ತದೆ. ಈ ಪೇಜ್ ನ್ನು ನೀವು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.
ಮೌಲ್ಯಮಾಪನ ಪೂರ್ಣಗೊಂಡಿದೆ
ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದೆ. ಹಾಗಾಗಿ ಏಪ್ರೀಲ್ 21 ರಂದು ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ : ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರ ಪ್ರಕಟ: ನೀವು ಬರೆದ ಪ್ರಶ್ನೆಗಳಿಗೆ ಎಷ್ಟು ಅಂಕ ಬಂದಿದೆ? ಇಲ್ಲೇ ಚೆಕ್ ಮಾಡಿ
ವಿಧಾನಸಭಾ ಚುನಾವಣೆ ಪ್ರಕ್ರಿಯೆಗಳ ಮಧ್ಯೆಯೇ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರನ್ನು ಬಳಿಸಿಕೊಂಡು ಮೌಲ್ಯಮಾಪನ ಕಾರ್ಯವನ್ನು ಮಂಡಳಿ ಸುಸೂತ್ರವಾಗಿ ಪೂರ್ಣಗೊಳಿಸಿದೆ.
2023-24 ನೇ ಸಾಲಿನಲ್ಲಿ ಎಷ್ಟುವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು?
ಪ್ರಸಕ್ತ ವರ್ಷ ರಾಜ್ಯದಲ್ಲಿ 7,26,195 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ನಂತರ ಮರುಪರಿಶೀಲಿಸಲು ಬಯಸುವವರು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು. ಅಥವಾ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.