Whose crop insurance application rejected ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರ ಅರ್ಜಿ ತಿರಸ್ಕೃತಗೊಂಡಿದ್ದರೆ, ಬೆಳೆ ವಿಮೆ ಜಮೆಯಾಗದಿದ್ದರೆ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಹೌದು, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ 2021-22ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆ ವಿಮೆಗೆ ನೋಂದಾಯಿಸಿ ಬೆಳೆ ಸಮೀಕ್ಷೆಯಲ್ಲಿ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯಿಂದ ತಿರಸ್ಕೃತಗೊಂಡ ರೈತರ ಪ್ರಸ್ತಾವನೆಗಳನ್ನು ಚಿಕ್ಕಮಗಳೂರು ಜಿಲ್ಲೆಯ ತಾಲೂಕಿನ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪ್ರದರ್ಶಿಸಲಾಗಿರುತ್ತದೆ.
ತಿರಸ್ಕೃತಗೊಂಡ ಪ್ರಸ್ತಾವನೆಗಳೊಂದಿಗೆ ಆಕ್ಷೇಪಣೆಯನ್ನು 2021-22ನೇ ಸಾಲಿನಲ್ಲಿ ಬೆಳೆ ನಮೂದಾಗಿರುವ ಬಗ್ಗೆ ಪಹಣಿ, ಕನಿಷ್ಠ ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ರಸೀದಿ, ಎಪಿಎಂಸಿ ಕೇಂದ್ರಗಳಲ್ಲಿ ಬೆಳೆ ಉತ್ಪನ್ನ ಮಾರಾಟ ಮಾಡಿರುವ ಬಗ್ಗೆ ದಾಖಲೆಗಳನ್ನು ಸಂಬಂಧಿಸಿದ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಚಿಕ್ಕಮಗಳೂರು ಇವರಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Whose crop insurance application rejected ಬೆಳೆ ವಿಮೆಗೆ ಜಮೆಯಾಗಿಲ್ಲವೇ? ಆಕ್ಷೇಪಣೆಗೆ ಅರ್ಜಿ ಸಲ್ಲಿಸಿ
2021-2022 ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ಯಾದಗಿರಿ ಜಿಲ್ಲೆಯ ಸುರಪುರ ಹಾಗೂ ಹಣಸಗಿ ತಾಲೂಕಿನ ಕೆಲವು ರೈತರ ಅರ್ಜಿಗಳು ತಿರಸ್ಕೃತಗೊಂಡಿವೆ.
ಸುರಪುರ ಮತ್ತು ಹಣಸಗಿ ತಾಲೂಕಿನ ಮುಂಗಾರು ಹಂಗಾಮಿನ 143 ಹಾಗೂ ಹಿಂಗಾರು ಹಂಗಾಮಿನ ಹಣಸಗಿ ತಾಲೂಕಿನ1ಪ್ರಸ್ತಾವನೆ ತಾಳೆಯಾಗದೆ ತಿರಸ್ಕೃತಗೊಂಡಿದೆ. ರೈತರ ಪಟ್ಟಿಯನ್ನು ಆಯಾ ತಾಲೂಕಿನ ವ್ಯಾಪ್ತಿಯಲ್ಲಿರುವ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯತ್ ನೋಟಿಸ್ ಬೋರ್ಡ್ ಗಳಲ್ಲಿ ಪ್ರಕಟಿಸಲಾಗಿದೆ.
ಇದನ್ನೂ ಓದಿ : ಈ ಲಿಸ್ಟ್ ನಲ್ಲಿರುವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲ್ಲ ಇಲ್ಲೇ ಚೆಕ್ ಮಾಡಿ
ಆಕ್ಷೇಪಣೆಗಳಿದ್ದರೆ ಮೇ 11 ರೊಳಗೆ ಆಯಾ ತಾಲೂಕಿನ ವ್ಯಾಪ್ತಿಯಲ್ಲಿರುರುವ ಹೋಬಳಿಮಟ್ಟದ ರೈತ ಸಂಪರ್ಕ ಕೇಂದ್ರಗಳಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಜಮೀನಿನ ಪಹಣಿ, ಬೆಂಬಲ ಬೆಲೆ ಪ್ರಯೋಜನ ಪಡೆದಿದ್ದಲ್ಲಿ ಅದರ ರಸೀದಿ, ನೋಂದಾಯಿತ ಬೆಳೆಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡಿರುವ ರಸೀದಿಗಳನ್ನು ಲಗತ್ತಿಸಬೇಕು.
ನಿಮಗೆ ಬೆಳೆ ವಿಮೆ ಜಮೆಯಾಗಿಲ್ಲವೇ? ನಿಮ್ಮಅರ್ಜಿ ತಿರಸ್ಕೃತಗೊಂಡಿದೆಯೇ? ಇಲ್ಲೇ ಚೆಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಬೆಳೆ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿ ತಿರಸ್ಕೃತಗೊಂಡಿದೆಯೇ? ಯಾವ ಕಾರಣಕ್ಕಾಗಿ ಅರ್ಜಿ ತಿರಸ್ಕೃತಗೊಂಡಿದೆ ಹಾಗೂ ಅರ್ಜಿಯ ಸ್ಟೇಟಸ್ ಹೇಗಿದೆ ಎಂಬುದನ್ನು ಚೆಕ್ ಮಾಡಲು ಈ
https://www.samrakshane.karnataka.gov.in/Premium/CheckStatusMain_aadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸಂರಕ್ಷಣೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ Proposal, Mobile No. Aadhaar ಹೀಗೆ ಮೂರು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ನೀವು ಮೊಬೈಲ್ ನಂಬರ್ ಬಾಕ್ಸ್ ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಒಂದು ವೇಳೆ ನಿಮಗೆ ಕ್ಯಾಪ್ಚ್ಯಾ ಕೋಡ್ ಸರಿಯಾಗಿ ಕಾಣಿಸದಿದ್ದರೆ ರಿಫ್ರೆಸ್ ಬಟನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಕ್ಯಾಪ್ಚ್ಯಾ ಕೋಡ್ ಬದಲಾಗುತ್ತದೆ. ನಂತರ ಕ್ಯಾಪ್ಚ್ಯಾ ಕೋಡ್ ಹಾಕಿ Search ಮೇಲೆ ಕ್ಲಿಕ್ ಮಾಡಬೇಕು.ಆಗ ನೀವು ಬೆಳೆ ಪಾವತಿಸಿದ ಬೆಳೆಯ ಅರ್ಜಿ ಸ್ಟೇಟಸ್ ಕಾಣಿಸುತ್ತದೆ. ನಿಮ್ಮ ಅರ್ಜಿ ವಿಮಾ ಕಂಪನಿಯಿಂದ ಸ್ವೀಕೃತವಾಗಿದೆಯೋ? ಇಲ್ಲವೋ? ನೀವು ಯಾವಾಗ ವಿಮೆ ಹಣ ಪಾವತಿಸಿದ್ದೀರಿ? ಎಲ್ಲಿ ಪಾವತಿಸಿದ್ದೀರಿ? ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು.