ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ

Written by Ramlinganna

Updated on:

Pmkisan will be release this month ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಇದೇ ತಿಂಗಳು ಜಮೆಯಾಗಲಿದೆ. ಹೌದು, ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಜೂನ್ ತಿಂಗಳ 15 ರಂದು ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಫೆಬ್ರವರಿ ತಿಂಗಳ 17 ರಂದು ರಂದು ಜಮೆಯಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮ ದಿನದಂದು ಕರ್ನಾಟಕದಿಂದಲೇ ದೇಶದ ಎಲ್ಲಾ ರೈತರ ಖಾತೆಗೆ ಹಣ ಜಮೆಮಾಡಲಾಗಿತ್ತು.

ಪಿಎಂ ಕಿಸಾನ್ ಯೋಜನೆಯ ಹಣವನ್ನು ಪ್ರತಿ ವರ್ಷ ರೈತರ ಖಾತೆಗೆ ಮೂರು ಕಂತುಗಳಲ್ಲಿ ಜಮೆ ಮಾಡಲಾಗುವುದು. ನಾಲ್ಕು ತಿಂಗಳಿಗೊಮ್ಮೆ ತಲಾ 2 ಸಾವಿರ ರೂಪಾಯಿಯಂತೆ ಒಟ್ಟು 3 ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ಇಲ್ಲಿಯವರೆಗೆ ರೈತರಿಗೆ 13 ಕಂತುಗಳು ಜಮೆ ಯಾಗಿವೆ. 14ನೇ ಕಂತಿಗಾಗಿ ಕಾಯುತ್ತಿರುವ ರೈತರ ಖಾತೆಗೆ ಇದೇ ತಿಂಗಳು 15 ರಂದು ಜಮೆಯಾಗುವ ಸಾಧ್ಯತೆಯಿದೆ. ಏಕೆಂದರೆ ಕಳೆದ 13ನೇ ಕಂತು ಫೆಬ್ರವರಿ ತಿಂಗಳಲ್ಲಿ ರೈತರ ಖಾತೆಗೆ ಜಮೆಯಾಗಿತ್ತು. ಈ ಆಧಾರದ ಮೇಲೆ ಜೂನ್ 17ಕ್ಕೆ ನಾಲ್ಕು ತಿಂಗಳಾಗುತ್ತದೆ. ಹೀಗಾಗಿ 15 ರಂದು ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

Pmkisan will be release this month ಪಿಎಂ ಕಿಸಾನ್ ಯೋಜನೆಯ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ

ರೈತರು ಪಿಎಂ ಕಿಸಾನ್ ಯೋಜನೆಯ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಲು ಈ

https://pmkisan.gov.in/Rpt_BeneficiaryStatus_pub.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಬೆನಿಫಿಶಿಯರಿ ಲಿಸ್ಟ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಂಡು ಬ್ಲಾಕ್ ನಲ್ಲಿಯೂ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಇದಾದ ಮೇಲೆ ವಿಲೇಜ್  ಕಾಲಂ ನಲ್ಲಿ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಅಂದರೆ ನೀವು ಆಯ್ಕೆ ಮಾಡಿದ ಗ್ರಾಮದಲ್ಲಿ ಯಾವ ಯಾವ ರೈತರ ಹೆಸರಿದೆ ಎಂಬ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಯಾವ ಯಾವ ತಿಂಗಳಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಜಮೆಯಾಗಲಿದೆ?

ಪ್ರತಿ ವರ್ಷ ಪಿಎಂ ಕಿಸಾನ್ ಯೋಜನೆಯ ಹಣ ಮೊದಲ ಕಂತು ಡಿಸೆಂಬರ್ ಮಾರ್ಚ್ ಅವಧಿಯಲ್ಲಿ ಮೊದಲ ಕಂತು ಜಮೆ ಮಾಡಿದರೆ ಏಪ್ರೀಲ್ ಟು ಜುಲೈ ತಿಂಗಳ ಅವಧಿಯಲ್ಲಿ ಎರಡನೇ ಕಂತು ಜಮೆಯಾಗುತ್ತದೆ. ಅದೇ ರೀತಿ ಆಗಸ್ಟ್ ಟು ನವೆಂಬರ್ ತಿಂಗಳ ಅವಧಿಯಲ್ಲಿ ಮೂರನೇ ಕಂತಿನ ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಇದನ್ನೂ ಓದಿ : ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಅರ್ಜಿ ಸಲ್ಲಿಸಿ

ಕಳೆದ 13ನೇ ಕಂತು ಜಮೆಯಾದ ಆಧಾರದ ಮೇಲೆ ಇದೇ ತಿಂಗಳ 15 ರಂದು ರೈತರ ಖಾತೆಗೆ ಜಮೆಯಾಗಲಿದೆ ಎಂಬುದು ಲೆಕ್ಕಾಚಾರವಾಗಿದೆ.

ಇಕೆವೈಸಿ ಮಾಡಿಸುವುದು ಕಡ್ಡಾಯ

ಒಂದು ವೇಳೆ ನೀವು ಇಕೆವೈಸಿ ಮಾಡಿಸದಿದ್ದರೆ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬಹುದು.ಏಕೆಂದರೆ ಇಕೆವೈಸಿ ಮಾಡಿಸದಿದ್ದರೆ ನಿಮಗೆ ಮುಂದಿನ 14ನೇ ಕಂತಿನ ಹಣ ಜಮೆಯಾಗುವುದಿಲ್ಲ ಇಕೆವೈಸಿಯನ್ನು ಮೊಬೈಲ್ ನಲ್ಲಿಯೂ ಮಾಡಿಸಿಕೊಳ್ಳಬಹುದು. ಅಥವಾ ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಗಳಲ್ಲಿ, ಗ್ರಾಮ ಒನ್ ಕೇಂದ್ರಗಳಲ್ಲಿಯೂ ಇಕೆವೈಸಿ ಮಾಡಿಸಿ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆದುಕೊಳ್ಳಬಹುದು.

Leave a Comment