tools to migrant shepherds and fishers ಕುರಿಗಾರರಿಗೆ ವಿವಿಧ ಉಪಕರಣ ಹಾಗೂ ಮೀನುಗಾರರಿಗೆ ಉಪಕರಣಗಳ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸಾಮಾನ್ಯ ಯೋಜನೆಯಡಿ ನಿಗಮದಲ್ಲಿ ನೋಂದಣಿಯಾಗಿರುವ ಚಿತ್ರದುರ್ಗ ಜಿಲ್ಲೆಯ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಜಿಲ್ಲೆಯ ವಲಸೆ (ಅರೆ ಸಂಚಾರಿ ಮತ್ತು ವಲಸೆ ಕುರಿಗಾರರು) ಕುರಿಗಾರರಿಗೆ ರಕ್ಷಣಾ ಪರಿಕರ ಕಿಟ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಜೂನ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಲಸೆ ಕುರಿಗಾರರು ತಮ್ಮ ಕುರಿ ಹಾಗೂ ಮೇಕೆಗಳನ್ನು ಮೇವನ್ನರಸಿ ವಲಸೆ ಹೋದ ಸಂದರ್ಭದಲ್ಲಿ ನೈಸರ್ಗಿಕ ವಿಕೋಪಗಳಿಂದ ರಕ್ಷಣೆ ಪಡೆಯಲು ಸಂಚಾರಿ ಟೆಂಟ್ ಸೋಲಾರ್ ಟಾರ್ಚ್, ರಬ್ಬರ್ ಪ್ಲೋರ್ ಮ್ಯಾಟ್, ರೈನ್ ಕೋಟ್ ಒದಗಿಸಲು ಉದ್ದೇಶಿಸಲಾಗಿದೆ.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ವಲಸೆ ಕುರಿಗಾರರು ಕರ್ನಾಟಕ ಕುರಿ ಮತ್ತು ಉಣ್ಣೆಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ, ಅವರಣ, ಚಿತ್ರದುರ್ಗ ಇಲ್ಲಿ ಅರ್ಜಿಗಳನ್ನು ಪಡೆದು ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಸಲ್ಲಿಸಬಹುದು.
ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದಲ್ಲಿ ಸದಸ್ಯತ್ವ ಹೊಂದಿದ ವಲಸೆ ಕುರಿಗಾರರು ಮಾತ್ರ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಪಶು ವೈದ್ಯರಿಂದ ಸಂಚಾರಿ, ವಲಸೆ ಕುರಿಗಾರರೆಂದು ದೃಢೀಕರಿಸಲ್ಪಟ್ಟಿರಬೇಕು ಎಂದು ಚಿತ್ರದುರ್ಗದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರಿಗೆ ತರಬೇತಿ ನೀಡಲು ಅರ್ಜಿ ಆಹ್ವಾನ
ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ವಿವಿಧ ಪಶುಪಾಲನೆ, ಕುರಿ ಹಾಗೂ ಮೇಕೆ, ಕೋಳಿ ಸಾಕಾಣಿಕೆ ಕುರಿತು ಆಸಕ್ತ 25 ಜನ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಎಂದು ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ಹೌದು, ತುಮಕೂರು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಜೂನ್ 12 ಮತ್ತು 13 ರಂದು, ಹೈನುಗಾರಿಕೆ ತರಬೇತಿಯನ್ನು ಜೂನ್ 16 ಮತ್ತು 17 ರಂದು ಹಾಗೂ ಕೋಳಿ ಸಾಕಾಣಿಕೆ ತರಬೇತಿಯನ್ನು ಜೂನ್ 19 ಹಾಗೂ 20 ರಂದು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ : ಲಿಸ್ಚ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ
ನಿಗದಿಪಡಿಸಿದ ದಿನಾಂಕದಂದು ಬೆಳಗ್ಗೆ 10 ಗಂಟೆಗೆ ತರಬೇತಿಗೆ ಹಾಜರಾಗಬಹುದು. ತರಬೇತಿಗೆ ಹಾಜರಾಗಲು ಇಚ್ಚಿಸುವವರು 2 ಪಾಸ್ಪೋರ್ಟ್ ಅಳತೆ ಭಾವಚಿತ್ರ, ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ (ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದಲ್ಲಿ) ವನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶು ವೈದ್ಯಕೀಯ ಸಂಸ್ಥೆ / ದೂರವಾಣಿ ಸಂಖ್ಯೆ 0816 2251214 ನ್ನು ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
tools to migrant shepherds and fishers ಮೀನುಗಾರರಿಗೆ ಸೌಲಭ್ಯ ನೀಡಲು ಅರ್ಜಿ ಆಹ್ವಾನ
2023-24ನೇ ಸಾಲಿಗೆ ರಾಜ್ಯವಲಯ ಯೋಜನೆಗಳಡಿ ಸೌಲಭ್ಯ ಪಡೆಯಲು ಕೋಲಾರ ಜಿಲ್ಲೆಯ ಅರ್ಹ ಮೀನುಗಾರ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಹಿಡಿಯಲು ಬಲೆ ಅಥವಾ ಫೈಬರ್ ಗ್ಲಾಸ್ ಹರಿಗೋಲು ವಿತರಣೆ, ಕೆರೆ / ಜಲಾಶಯಗಳಿಂದ ಅಂಚಿನಲ್ಲಿ ಕೊಳ ನಿರ್ಮಿಸಿ ಮೀನುಮರಿ ಪಾಲನೆಗೆ ನೆರವು ಮೀನುಮರಿ ಖರೀದಿಸುವುದಕ್ಕೆ ಸಹಾಯಧನ ನೀಡಲಾಗುವುದು.
ಅರ್ಹರು ಆನ್ಲೈನ್ ನಲ್ಲಿ ಆಯಾ ತಾಲೂಕು ಮೀನುಗಾರಿಕೆ ಕಚೇರಿಯಲ್ಲಿ ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮೀನುಗಾರರಿಗೆ ಸೌಲಭ್ಯ ನೀಡಲು ಅರ್ಜಿ ಆಹ್ವಾನ
2023-24ನೇ ಸಾಲಿನಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಕೊಟ್ಟೂರು ಹಾಗೂ ಹಗರಿಬೊಮ್ಮನಹಳ್ಳಿ ತಾಲೂಕಿನ ಕೆರೆಗಳ (ಏತ ನೀರಾವರಿ ಕೆರೆಗಳನ್ನು ಹೊರತುಪಡಿಸಿ) ಮೀನು ಪಾಶುವಾರು ವಿಲೇವಾರಿಗಾಗಿ ಅರ್ಹ ಮೀನುಗಾರರ ಸಹಕಾರ ಸಂಘ, ಮೀನುಗಾರರ ಉತ್ಪಾದಕರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಸಹಾಯಕ ನಿರ್ದೇಶಕ ಹುಸೇನ್ ಸಾಬ್ ತಿಳಿಸಿದ್ದಾರೆ.
ಜೂನ್ 28 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮೊ. 9449593156 ಅಥವಾ ಮೊ. 9538823067 ಗೆ ಸಂಪರ್ಕಿಸಲು ಕೋರಲಾಗಿದೆ.