Application invited for anganawadi worker ಶಿಶು ಅಭಿವೃದ್ಧಿ ಯೋಜನೆ ಬೆಳಗಾವಿ (ನಗರ) ವ್ಯಾಪ್ತಿಯಲ್ಲಿ ಖಾಲಿಯಿರುವ 33 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜುಲೈ 19 ರಂದು ಸಾಯಂಕಾಲ 5.30 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅದೇ ವಾರ್ಡಿನ ಇಚ್ಚೆಯುಳ್ಳ ಅಭ್ಯರ್ಥಿಗಳು ಎಲ್ಲಾ ದಾಖಲಾತಿ ಒಳಗೊಂಡ ಅರ್ಜಿಯನ್ನು ಬೆಳಗಾವಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಜಿಲ್ಲಾ ಬಾಲ ಭವನ ಕಟ್ಟಡ, ಶ್ರೀನಗರ ಕಚೇರಿಗೆ ಖುದ್ದಾಗಿ ಬಂದು ಅರ್ಜಿ ಸಲ್ಲಿಸಬಹುದು.
Application invited for anganawadi worker ಎಲ್ಲೆಲ್ಲಿ ಅರ್ಜಿ ಕರೆಯಲಾಗಿದೆ?
ವಿಯ ಹಳೇ ಗಾಂಧಿನಗರ 137, ಮದ್ರಾಸ್ ಸ್ಟ್ರೀಟ್ 194, ಬಾಂಧುರಗಲ್ಲಿ 346 ರ ಕೇಂದ್ರಗಳಲ್ಲಿ ವರ್ಗಾವಣೆಗಾಗಿ ಅರ್ಜಿ ಸ್ವೀಕೃತವಾಗಿದ್ದು, ಈ 3 ಕೇಂದ್ರಗಳ ಅರ್ಜಿ ಆಹ್ವಾನವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ0831 2001723 ಗೆ ಸಂಪರ್ಕಿಸಲು ಕೋರಲಾಗಿದೆ.
ಜುಲೈ 4 ರಂದು ನೇರ ಸಂದರ್ಶನ
ಗದಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜುಲೈ 4 ರಂದು ಬೆಳಗ್ಗೆ 10 ರಿಂದ ಗದಗ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ರೂಂ ನಂಬರ್ 115 ರಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಶನದಲ್ಲಿ ಬೆಂಗಳೂರಿನ ಸ್ಟ್ರೈಡ್ ಫಾರ್ಮಾ ಸೈನ್ಸ್ ಲಿಂ. ಭಾಗವಹಿಸಲಿದೆ. ನೇರ ಸಂದರ್ಶನದಲ್ಲಿ ಪಿಯುಸಿ ಸೈನ್ಸ್ ಮತ್ತು ಕಾಮರ್ಸ್ ಮತ್ತು (1, 2ನೇ ವರ್ಷದ ಬಿಎಸ್ಸಿ, ಬಿಕಾಂ ಪದವಿ ಪಡೆದಿರುವ 18 ರಿಂದ 22 ವರ್ಷದೊಳಗಿನ ಪುರುಷ, ಮಹಿಳೆ ಅಭ್ಯರ್ಥಿಗಳಿಗೆ ಅವಕಾಶವಿದೆ.
ಇದನ್ನೂ ಓದಿ : ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ರಾಜ್ಯ ಸರ್ಕಾರದ ಪಿಎಂ ಕಿಸಾನ್ ಹಣ ಜಮೆ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ನೇರ ಸಂದರ್ಶನದಲ್ಲಿಪಾಲ್ಗೊಳ್ಳುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಯ ಅಂಕಪಟ್ಟಿಗಳ ನಕಲು ಪ್ರತಿಗಳು, 2 ರೆಸ್ಯೂಮ್ (ಬಯೋಡಾಟಾ) ಪ್ರತಿಗಳು ಮತ್ತು ಆಧಾರ್ ಕಾರ್ಡ್ ನಕಲು ಪ್ರತಿಯೊಂದಿಗೆ ಭಾಗವಹಿಸಬಹುದು. ನೇರ ಸಂದರ್ಶನದಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ನೋಂದಣಿ ಕಡ್ಡಾಯವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕಚೇರಿ ದೂರವಾಣಿ ಸಂಖ್ಯೆ 08372 220609, 6363330688 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಬಸವಂತ ಪಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ನೋಂದಣಿಯನ್ನು ನೇರ ಸಂದರ್ಶನದ ದಿನದಂದೇ ಮಾಡಿಸಬೇಕು.
ಬೆಳಗಾವಿಯಲ್ಲಿ ಜುಲೈ 1 ರಂದು ಉದ್ಯೋಗ ಮೇಳ
ಬೆಳಗಾವಿ ಕನ್ನಡ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ ವತಿಯಿಂದ ಹುಕ್ಕೇರಿ ತಾಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಜುಲೈ 1 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಸ್ಎಸ್ಎಲ್ಸಿ, ಐಟಿಐ, ಡಿಪ್ಲೋಮಾ ಹಾಗೂ ಡಿಇಡ್, ಬಿಎಡ್ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಯಿಂದ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂಬರ್ 7975856566 ಅಥವಾ 98801 49513ಗೆ ಸಂಪರ್ಕಿಸಲು ಕೋರಲಾಗಿದೆ.
ಬಾಗಲಕೋಟೆಯಲ್ಲಿ ಇಂದು ಉದ್ಯೋಗ ಮೇಳ
ಬಾಗಲಕೋಟೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 30 ರಂದು ಬೆಳಗ್ಗೆ 10.30 ರಿಂದ ಸಂಜೆ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೂಂ. ನಂಬರ್ 135, ಜಿಲ್ಲಾಡಳಿತ ಭವನ ನವನಗರ ಬಾಗಲಕೋಟೆಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂದರ್ಶನದಲ್ಲಿ ಹಲವಾರು ಖಾಸಗಿ ಕಂಪನಿಗಳು ಭಾಗವಹಿಸಿ, ಹಲವಾರು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಎಸ್ಎಲ್ಸಿ, ಐಟಿಐ, ಪಿಯುಸಿ ಹಾಗೂ ಯಾವುದೇ ಪದವೀಧರರು ತಮ್ಮ ಬಯೋಡಾಟಾ ಮತ್ತು ಮೂಲ ಅಂಕಪಟ್ಟಿಗಳ ಝರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಉದ್ಯೋಗ ಮೇಳ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08354 235337 ಗೆ ಸಂಪರ್ಕಿಸಲು ಕೋರಲಾಗಿದೆ.