Good news to farmers – ಈ ರೈತರಿಗೆ ಪಿಎಂ ಕಿಸಾನ್ ಹಣ ಜಮೆ

Written by Ramlinganna

Updated on:

Good news to farmers: ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಗುಡ್ ನ್ಯೂಸ್. ಹೌದು ಇದೇ ತಿಂಗಳ ಜುಲೈ 27 ರಂದು ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಜಮೆಯಾಗಲಿದೆ. ಹಾಗಾದರೆ ಯಾವ ಯಾವ ರೈತರಿಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ? ಯಾವ ರೈತರಿಗೆ ಜಮೆಯಾಗುವುದಿಲ್ಲ? ಪಿಎಂ ಕಿಸಾನ್ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರು ಚೆಕ್ ಮಾಡುವುದು ಹೇಗೆ ? ಎಲ್ಲದಕ್ಕೂ ಇಲ್ಲಿದೆ ಉತ್ತರ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ 2 ಸಾವಿರ ರೂಪಾಯಿ ಜಮೆಯಾಗುತ್ತದೆ. ಕಳೆದ ನಾಲ್ಕು ತಿಂಗಳ ಹಿಂದೆ ಫೆಬ್ರವರಿ 27 ರಂದು 13ನೇ ಕಂತು ಜಮೆ ಮಾಡಲಾಗಿತ್ತು. ಈಗ ಇದೇ ತಿಂಗಳು 14ನೇ ಕಂತಿನ ಹಣ ಜಮೆ ಮಾಡಲಾಗುವುದು. ಆದರೆ ಈ ಸಲ ಜಮೆ ಬಹುತೇಕ ರೈತರಿಗೆ ಜಮೆಯಾಗುವ ಸಾಧ್ಯತೆ ಕಡಿಮೆ ಇರುತ್ತದೆ. ಏಕೆಂದರೆ ಈ ಸಲ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಇದರೊಂದಿಗೆ ಸ್ಟೇಟಸ್ ನಲ್ಲಿ ಲ್ಯಾಂಡ್ ಸೀಡಿಂಗ್ ಆಗಿರಲೇಬೇಕು. ಲ್ಯಾಂಡ್ ಸೀಡಿಂಗ್ ಆಗಿರದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುವ ಸಾಧ್ಯತೆ ತುಂಬ ಕಡಿಮೆಯಿದೆ.

Good news to farmers ಪಿಎಂ ಕಿಸಾನ್ ಹಣ ನಿಮಗೆ ಜಮೆಯಾಗುತ್ತೋ ಇಲ್ಲವೋ ಚೆಕ್ ಮಾಡಿ?

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಜಮೆಯಾಗುತ್ತೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ

https://pmkisan.gov.in/BeneficiaryStatus_New.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಅಂದರೆ ರೆಜಿಸ್ಟರ್ ನಂಬರ್ ನಮೂದಿಸಬೇಕು. ನಂತರ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿದಾಗ ಸ್ಟೇಟಸ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಇಕೆವೈಸಿ ಹಾಗೂ ಲ್ಯಾಂಡ್ ಸೀಡಿಂಗ್ ಮುಂದೆ ಯಸ್ ಇದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ ಎಂದರ್ಥ.

ಪಿಎಂ ಕಿಸಾನ್ ಹಣ ಯಾವಾಗ ಜಮೆಯಾಗಲಿದೆ?

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣವನ್ನು ಇದೇ ತಿಂಗಳು ಜುಲೈ 27 ರಂದು ಜಮೆಯಾಗಲಿದೆ. ಅಂದು ರಾಜಸ್ಥಾನದ ನಗೌರ್ ನಲ್ಲಿ ನಡೆಯುವ ರೈತರ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ 9 ಕೋಟಿಗೂ ಅಧಿಕ ರೈತರ ಖಾತೆಗೆ ಸುಮಾರು 18 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಹಣ ಜಮೆಯಾಗಲು ಇನ್ನೂ ಕೇವಲ 10 ದಿನ ಉಳಿಯಿತು.  ನಿಮ್ಮ ಹೆಸರಿರುವುದನ್ನು ಹಾಗೂ ಇಕೆವೈಸಿ ಮತ್ತು ಲ್ಯಾಂಡ್ ಸಿಡೀಂಗ್ ಸರಿಯಿದೆಯೋ ಇಲ್ಲವೋ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಜಮೆಗೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ

ಲ್ಯಾಂಡ್ ಸೀಡಿಂಗ್ ಹಾಗೂ ಇಕೆವೈಸಿ ಎದುರು ಯಸ್ ಇರದಿದ್ದರೂ ಕೂಡಲೇ ಗ್ರಾಮ ಒನ್ ಕೇಂದ್ರ ಅಥವಾ ರೈತರಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಬಯೋಮೆಟ್ರಿಕ್ ಆಧಾರಿತ ಇಕೆವೈಸಿಯನ್ನು ಮಾಡಿಸಿಕೊಳ್ಳಬೇಕು. ಅದೇ ರೀತಿ ನಿಮ್ಮ ಜಮೀನಿನ ದಾಖಲೆಯನ್ನು ಸರಿಯಾಗಿ ಅಪ್ಲೋಡ್ ಮಾಡಲಾಗಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.

ಪಿಎಂ ಕಿಸಾನ್ ಯೋಜನೆ ಕುರಿತಂತೆ ಏನಾದರು ಅನುಮಾನವಿದ್ದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ವಿಚಾರಿಸಬಹುದು ಅಥವಾ  ಪಿಎಂ ಕಿಸಾನ್ ಯೋಜನೆಯ ಸಹಾಯವಾಣಿ 155261 ಅಥವಾ 011 24300606 ಗೆ ಕರೆ ಮಾಡಿ ವಿಚಾರಿಸಬಹುದು. ಕಳೆದ ಕಂತು ಅಂದರೆ 12 ಅಥವಾ 13ನೇ ಕಂತು ಜಮೆಯಾಗದಿದ್ದರೆ ನಿಮಗೇಕೆ ಜಮೆಯಾಗಿಲ್ಲ ಹಾಗೂ ಮುಂದಿನ 14ನೇ ಕಂತು ಜಮೆ ಏಕಾಗಿಲ್ಲಎಂಬುದನ್ನು ಸಹ ರೈತರು ಮನೆಯಲ್ಲಿಯೇ ಕುಳಿತು ವಿಚಾರಿಸಿಕೊಳ್ಳಬಹುದು.

Leave a Comment