pm kisan 14th installment ಪಿಎಂ ಕಿಸಾನ್ 14ನೇ ಕಂತಿನ ಹಣ ಜಮೆಗಾಗಿ ಕಾಯುತ್ತಿರುವ ರೈತರಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್. ಇದೇ ತಿಂಗಳ ಜುಲೈ 27 ರಂದು ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆಯಾಗಲಿದೆ.
ಹೌದು, ಈಗಾಗಲೇ ಪಿಎಂ ಕಿಸಾನ್ ಯೋಜನೆಯ ಇಲಾಖೆಯ ವತಿಯಿಂದ ಅಧಿಕೃತವಾಗಿ ಮಾಹಿತಿ ನೀಡಲಾಗಿದೆ. ಈಗಾಗಲೇ ಪಿಎಂ ಕಿಸಾನ್ ಯೋಜನೆಯ ವೆಬ್ ಪೇಜ್ ನಲ್ಲಿಯೂ ಈ ಕುರಿತು ಮಾಹಿತಿ ನೀಡಲಾಗಿದೆ. ಜುಲೈ 27 ರಂದು ಬೆಳಗ್ಗೆ 11 ಗಂಟೆಗೆ ರಾಜಸ್ಥಾನದ ಸೀಕರ್ ಸ್ಥಳದಿಂದ ಡಿಬಿಟಿ ಮೂಲಕ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಖಾತೆಗೆ 14ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಅಂದು ದೇಶದ 9 ಕೋಟಿಗೂ ಅಧಿಕ ರೈತರ ಖಾತೆಗೆ ಏಕಕಾಲದಲ್ಲಿ ಹಣ ಜಮೆಯಾಗಲಿದೆ. ಆದರೆ ಇನ್ನೂವರೆಗೆ ಇಕೆವೈಸಿ ಮಾಡಿಸದೆ ಇರುವ ರೈತರಿಗೆ ಜಮೆಯಾಗುವುದು ಇಲ್ಲವೋ ಈ ಕುರಿತು ಜುಲೈ 27 ರಂದೇ ತಿಳಿಯಲಿದೆ. ಈಗಾಗಲೇ ಸರ್ಕಾರವು, ಕೃಷಿ ಇಲಾಖೆಯ ಹಲವಾರು ಸಲ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದೆ. ಕಾರ್ಯಕ್ರಮದ ಮೂಲಕವೂ ರೈತರಿಗೆ ಇಕೆವೈಸಿ ಮಾಡಿಕೊಳ್ಳಲು ಮನವಿ ಮಾಡಿಕೊಂಡಿದೆ. ಆದರೆ ಇಕೆವೈಸಿ ಮಾಡಿಸದೆ ಇರುವ ರೈತರು ಇನ್ನೂ ನಾಲ್ಕೈದು ದಿನಗಳಲ್ಲಿ ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಲು ಅವಕಾಶವಿದೆ.
ಇಕೆವೈಸಿ ಮಾಡಲಾಗಿದೆಯೋ ಇಲ್ಲವೋ ಎಂಬುದು ಚೆಕ್ ಮಾಡುವುದು ಹೇಗೆ?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಮ್ಮ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://exlink.pmkisan.gov.in/aadharekyc.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಓಟಿಪಿ ಬೇಸಡ್ ಇಕೆವೈಸಿ ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಓಟಿಪಿ ಸಕ್ಸೆಸ್ ಆಗಿದ್ದರೆ ಈಗಾಗಲೇ ಓಟಿಪಿ ಆಗಿದೆ ಎಂಬ ಮೇಸೆಜ್ ಕಾಣಿಸುತ್ತದೆ. ಇಲ್ಲದಿದ್ದರೆ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಓಟಿಪಿ ಮೂಲಕ ಇಕೆವೈಸಿ ಮಾಡಿಸಿಕೊಳ್ಳಬಹುದು.
ಪಿಎಂ ಕಿಸಾನ್ 14ನೇ ಕಂತಿನ ಹಣವನ್ನು ದೇಶದ 8.5 ಗಿಂತ ಹೆಚ್ಚಿರ ರೈತರ ಖಾತೆಗೆ ಸುಮಾರು 18 ಸಾವಿರ ಕೋಟಿ ರೂಪಾಯಿಯವರೆಗೆ ರೈತರ ಖಾತೆಗೆ ಜಮೆ ಮಾಡಲಾಗುವುದು.
pm kisan 14th installment ರೈತರೊಂದಿಗೆ ನಡೆಯುವ ಸಂವಾದದಲ್ಲಿ ಪಾಲ್ಗೊಳ್ಳಬೇಕೇ?
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಹಸ್ತಾಂತರ ಕಾರ್ಯಕ್ರಮ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದಾರೆ. ಆನ್ಲೈನ್ ಮೂಲಕ ಪಾಲ್ಗೊಳ್ಲಬೇಕಾದರೆ ಈ
https://pmevents.ncog.gov.in/registration/index/109
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಒಂದು ಪೇಜ್ ಓಪನ್ ಆಗುವುದು. ಇಲ್ಲಿ ರೆಜಿಸ್ಟರ್ ಫಾರ್ ದ ಇವೆಂಟ್ ಕೆಳಗಡೆ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಟಿಪಿ ಭೇಜೆ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಮೊಬೈಲಿಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸದ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುವುದು. ಅಲ್ಲಿ ನಿಮ್ಮ ಹೆಸರು ಸೇರಿದಂತೆ ಇನ್ನಿತರ ಮಾಹಿತಿ ಭರ್ತಿ ಮಾಡಿ ನಿಮ್ಮ ಹೆಸರು ನೋಂದಣಿ ಮಾಡಿಕೊಂಡು ಪಿಎಂ ಕಿಸಾನ್ ಯೋಜನೆಯ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು.
ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಇಲ್ಲೇ ಚೆಕ್ ಮಾಡಿ
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಆನ್ಲೈನ್ ಮೂಲಕ ನೇರವಾಗಿ ಸಂವಾದ ಕಾರ್ಯಕ್ರಮದಲ್ಲಿಪಾಲ್ಗೊಳ್ಳಲು ಆಸಕ್ತಿಯಿದ್ದವರು ಮೇಲಿನ ಲಿಂಕ್ ಬಳಸಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಬಹುದು. ಇನ್ನೂ ಕೇವಲ ಐದು ದಿನ ಉಳಿದಿದೆ. ಹಾಗಾಗಿ ಆಸಕ್ತ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.