Check horticulture subsidy details ರೈತರಿಗೆ ಪ್ರತಿ ವರ್ಷ ತೋಟಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಸಿಗಲಿದೆ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ
ಹೌದು, ಯಾವ ಯಂತ್ರೋಪಕರಣಗಳಿಗೆ ಎಷ್ಟು ಸಬ್ಸಿಡಿ ಸಿಗಲಿದೆ? ಅರ್ಜಿ ಯಾವಾಗ ಸಲ್ಲಿಸಬೇಕು? ಅರ್ಜಿ ಸಲ್ಲಿಕೆಗೆ ಯಾವ ಯಾವ ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.
ತಮಗೆಲ್ಲಾ ಗೊತ್ತಿದ್ದ ಹಾಗೆ ಕೃಷಿ ಇಲಾಖೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ ಸೇರಿದಂತೆ ತೋಟಗಾರಿಕೆ ಇಲಾಖೆಯ ವತಿಯಿಂದಲೂ ಯಂತ್ರೋಪಕರಗಳನ್ನು ಸಬ್ಸಿಡಿಯಲ್ಲಿ ನೀಡಲಾಗುವುದು. ಹೌದು, ಬಿತ್ತನೆಯಿಂದ ಹಿಡಿದು ಕೊಯ್ಲುವರೆಗೆ ವಿವಿಧ ಯಂತ್ರೋಪಕರಣಗಳನ್ನು ರೈತರಿಗೆ ಸಬ್ಸಿಡಿ ರೂಪದಲ್ಲಿ ನೀಡಲಾಗುವುದು.
ತೋಟಗಾರಿಕೆಯಲ್ಲಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಸಿಗುವ ಸೌಲಭ್ಯಗಳು
20 ಹೆಚ್.ಪಿ ವರೆಗೆ ಟ್ರ್ಯಾಕ್ಟರ್ ಖರೀದಿಗೆ ರೈತರಿಗೆ ಸಹಾಯಧನ ನೀಡಲಾಗುವುದು. ಹೌದು, 20 ಹೆಚ್.ಪಿ ವರೆಗೆ ಟ್ರ್ಯಾಕ್ಟರ್ ಖರೀದಿಗೆ ಸಾಮಾನ್ಯ ವರ್ಗದವರಿಗೆ ಶೇ. 25 ರಂತೆ ಗರಿಷ್ಠ 75 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಮತ್ತು ಅತೀ ಸಣ್ಣ ಮಹಿಳೆಯರಿಗೆ ಶೇ. 35 ರಂತೆ ಗರಿಷ್ಠ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
8 ಹೆಚ್.ಪಿ ಗಿಂತ ಕಡಿಮೆ ಇರುವ ಪವರ್ ಟಿಲ್ಲರ್ ಖರೀದಿಗೆ ಸಹಾಯಧನ ನೀಡಲಾಗುುದು. ಸಾಮಾನ್ಯ ರೈತರಿಗೆ ಶೇ. 40 ರಂತೆ ಗರಿಷ್ಠ 40 ಸಾವಿರ ರೂಪಾಯಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ, ಅತೀ ಸಣ್ಣ ಮಹಿಳಾ ರೈತರಿಗೆ ಶೇ. 50 ರಷ್ಟು ಅಂದರೆ 50 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
20 ಹೆಚ್ ಪಿ ಯವರೆಗೆ ಟ್ರ್ಯಾಕ್ಟರ್ ಟ್ರಾಲಿ ಖರೀದಿಸಲು ಶೇ. 50 ರಷ್ಟು ಅಂದರೆ 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಅದೇ ರೀತಿ ತಾಳೆ ಹಣ್ಣುಗಳನ್ನು ಕಟಾವು ಏಣಿಗೆ 5 ಸಾವಿರ ರೂಪಾಯಿ ಸಬ್ಸಿಡಿ ನೀಡಲಾಗುವುದು.
ತಾಳೆ ಹಣ್ಣುಗಳ ಗೊಂಚಲು ಹಾಗೂ ತಾಳೆ ಗರಿಗಳನ್ನು ಕತ್ತರಿಸಲು ಶೇ. 50 ರಷ್ಟು ಸಹಾಯಧನ ಅಂದರೆ 15 ಸಾವಿರ ರೂಪಾಯಿಯವರೆಗೆ ಸಬ್ಸಿಡಿ ನೀಡಲಾಗುವುದು. ಚಾಪ್ ಕಟರ್ ಗೂ ಶೇ. 50 ರಷ್ಟು ಅಂದರೆ 50 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
Check horticulture subsidy details ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸಿಗುವ ಯಂತ್ರೋಪಕರಣಗಳು
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ಹನಿ ನೀರಾವರಿ ಅಳವಡಿಕೆಗೆ ಸಬ್ಸಿಡಿ ನೀಡಲಾಗುವುದು. ಹನಿ ನೀರಾವರಿ ಅಳವಡಿಕೆಗೆ ಪ್ರತಿ ಫಲಾನುಭವಿಗೆ ಗರಿಷ್ಠ 5 ಹೆಕ್ಟೇರ್ ಪ್ರದೇಶಕ್ಕೆ ಹಾಗೂ ತರಕಾರಿ ಮತ್ತು ವಾಣಿಜ್ಯ ಹೂವ ಬೆಳೆಗಳಿಗೆ ಗರಿಷ್ಠ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನ ನೀಡಲಾಗುವುದು. 2 ಹೆಕ್ಟೇರ್ ಪ್ರದೇಶಕ್ಕೆ ಇತರೆ ವರ್ಗದ ರೈತರಿಗೆ ಶೇ. 75 ರಷ್ಟು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ಸಿಗುವುದು.
ಇದನ್ನೂ ಓದಿ : ಪಹಣಿಗೆ ಆಧಾರ್ ಲಿಂಕ್ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ವೈಯಕ್ತಿಕ ಕೃಷಿ ಹೊಂಡ ನಿರ್ಮಾಣಕ್ಕೆ ಗರಿಷ್ಠ 75 ಸಾವಿರ ರೂಪಾಯಿಯವರೆಗೆ ಸಹಾಯಧನ ನೀಡಲಾಗುವುದು.
ಪಾಲಿ ಹೌಸ್ ನಿರ್ಮಾಣಕ್ಕೆ ಪ್ರತಿ ಫಲಾನುಭವಿಗೆ 798 ರಿಂದ 1094 ರೂಪಾಯಿ ಪ್ರತಿ ಚದರ ಮೀಟರ್ ನಂತೆ ಗರಿಷ್ಠ 4000 ಚದರ್ ಮೀಟರ್ ವರೆಗೆ ಸಹಾಯಧನ ನೀಡಲಾಗುವುದು.
ತೋಟಗಾರಿಕೆ ಇಲಾಖೆಯಿಂದ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗುವುದು. ಈ ಕುರಿತು ಪತ್ರಿಕಾ ಪ್ರಕಟಣೆ ಸಹ ನೀಡಲಾಗುವುದು. ಇಲಾಖೆ ಕಚೇರಿಯ ನೋಟಿಸ್ ಬೋರ್ಡ್ ನಲ್ಲಿಯೂ ಪ್ರಕಟಣೆ ಅಂಟಿಸಲಾಗುವುದು. ಆಗ ಅರ್ಜಿ ಸಲ್ಲಿಸಿ ಸಬ್ಸಿಡಿ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.