ಗೃಹ ಲಕ್ಷ್ಮೀ ಯೋಜನೆಯ ಹಣ ಈ ಪಟ್ಟಿಯಲ್ಲಿರುವವರಿಗೆ ಜಮೆ

Written by Ramlinganna

Updated on:

Gruhalakshmi will be release  ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳಾ ಕುಟುಂಬದ ಮುಖ್ಯಸ್ಥರ ಖಾತೆಗೆ ಇದೇ ತಿಂಗಳ ಆಗಸ್ಟ್ 27 ರಂದು ಜಮೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೌದು, ಗೃಹಲಕ್ಷ್ಮೀ ಯೋಜನೆಯ ಬಿಡುಗಡೆ ದಿನಾಂಕವನ್ನು ಎರಡು ಸಲ ಮುಂದೂಡಲಾಯಿತು.ಈಗ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27 ರಂದು ಫಲಾನುಭವಿಗಳ ಖಾತೆಗೆ 2000 ರೂಪಾಯಿ ಜಮೆಯಾಗಗಲಿದೆ. ಯಾರಿಗೆ ಜಮೆಯಾಗಲಿದೆ? ಯಾರಿಗೆ ಜಮೆಯಾಗುವುದಿಲ್ಲ ಎಂಬುದನ್ನು ಫಲಾನುಭವಿಗಳು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ.

Gruhalakshmi will be release  ಗೃಹಲಕ್ಷ್ಮೀ ಯೋಜನೆಯ ಅರ್ಹತೆಯ ಫಲಾನುಭವಿಗಳ ಹೆಸರು ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಯಡಿ 2000 ರೂಪಾಯಿ ಹಣ ಪಡೆಯಲು ಯಾವ ಯಾವ ಮಹಿಳೆಯರು ಅರ್ಹರಾಗಿದ್ದಾರೆ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/Home/EServices

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಅಲ್ಲಿ ಕಾಣುವ ಇ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿದಾಗ ಇನ್ನೂ ಕೆಲವು ಆಯ್ಕೆಗಳು ಕಾಣಿಸುತ್ತವೆ. ಅದರಲ್ಲಿ ಹಳ್ಳಿ ಪಟ್ಟಿ ಮೇಲೆ ಕ್ಲಿಕ್ ಮಾಡಬೇಕು. ಆಗ ಓಪನ್ ಆಗುವ ಪೇಜ್ ನಲ್ಲಿ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಂಡ ನಂತರ ನಿಮ್ಮ ಊರು ಸೆಲೆಕ್ಟ್ ಮಾಡಿಕೊಂಡು ಗೋ ಮೇಲೆ ಕ್ಲಿಕ್ ಮಾಡಬೇಕು.  ಅಲ್ಿಲಿ ನಿಮ್ಮ ಪಡಿತರ ಚೀಟಿ ನಂಬರ್ ಕಾಣಿಸುತ್ತದೆ. ಅದರ ಮುಂದೆ ಪಡಿತರ ಚೀಟಿಯ ಮುಖ್ಯಸ್ಥರ ಹೆಸರು ಕಾಣಿಸುತ್ತದೆ. ಅಲ್ಲಿ ಮಹಿಳಾ ಹೆಸರು ಇದ್ದರೆ ಅವರು ಗೃಹಲಕ್ಷ್ಮೀ ಯೋಜನೆಯ 2 ಸಾವಿರ ರೂಪಾಯಿ ಹಣ ಪಡೆಯಲು ಅರ್ಹರಾಗಿದ್ದಾರೆಂದರ್ಥ.

ಈ ಪಡಿತರ ಚೀಟಿಯಲ್ಲಿ ಹೆಸರಿದ್ದರೆ ಸಾಲದು, ಈ ಪಡಿತರ ಚೀಟಿಯಲ್ಲಿ ಹೆಸರಿದ್ದ ಕುಟುಂಬದ ಮುಖ್ಯಸ್ಥೆ ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಬೇಕು. ಆಗ ಮಾತ್ರ ಅವರ ಖಾತೆಗೆ 2 ಸಾವಿರ ರೂಪಾಯಿ ಹಣ ಜಮೆಯಾಗಲಿದೆ. ಒಂದು ವೇಳೆ ಇಲ್ಲಿ ಪುರುಷರ ಅಂದರೆ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರ ಹೆಸರು ಪುರುಷರಾಗಿದ್ದರೆ ಆ ಕುಟುಂಬದ ಮಹಿಳಿಗೆ ಗೃಹಲಕ್ಷ್ಮೀ ಯೋಜನೆ ಹಣ ಸಿಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.

ಗೃಹಲಕ್ಷ್ಮೀ ಯೋಜನೆಯ ನಿಯಮಗಳು ಹಾಗೂ ಷರತ್ತುಗಳು

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಮಹಿಳಾ ಯಜಮಾನಿಯ ಖಾತೆಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು.  ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.

ಇದನ್ನೂ ಓದಿ :  ಈ ಲಿಸ್ಟ್ ನಲ್ಲಿರುವವರಿಗೆ ಪಿಎಂ ಕಿಸಾನ್ ರಾಜ್ಯದ ಹಣ ಜಮೆಯಾಗಲ್ಲ- ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ.  ಫಲಾನುಭವಿಯು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿರಬೇಕು. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯು ಬ್ಯಾಂಕ್ ಖಾತೆ ಮತ್ತು ಆಧಾರ್ ಕಾರ್ಡ್ ಗಳನ್ನು ಜೋಡಣೆ ಮಾಡಿರಬೇಕು. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಒಂದು ವೇಳೆ ಆದಾಯ ತೆರಿಗೆ ಪಾವತಿರಾಗಿದ್ದಲ್ಲಿ ಆ ಮಹಿಳೆಯ 2 ಸಾವಿರ ರೂಪಾಯಿ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇರುತ್ತದೆ.ಏಕೆಂದರೆ ಆದಾಯಪಾವತಿ ದಾರರಾಗಿದ್ದಲ್ಲಿ ಆ ಮಹಿಳೆ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುವುದಿಲ್ಲ.  ಕುಟುಂಬದ ಯಜಮಾನಿ ಅಥವಾ ಪತವಿ ಜಿಎಸ್ಟಿ ರಿಟರ್ನ್ಲ್ ಪಾವತಿದಾರರಾಗಿದ್ದರೂ ಆ ಮಹಿಳಾ ಯಜಮಾನಿಗೆ ಹಣ ಬರುವ ಸಾಧ್ಯತೆ ಕಡಿಮೆಯಿದೆ.

Leave a Comment