Bele Darshak App check

Written by Ramlinganna

Updated on:

Bele Darshak App check: ಮುಂಗಾರು ಹಂಗಾಮಿಗೆ ಬೆಳೆ ಸಮೀಕ್ಷೆ ಮಾಡಿದ ರೈತರು ತಮ್ಮ ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಬೆಳೆ ದರ್ಶಕ್ ಆ್ಯಪ್ ಮೂಲಕ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಹೌದು, ರೈತರು ಮತ್ತು ಖಾಸಗಿ ನೀವಾಸಿಗಳು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಅಪ್ಲೋಡ್ ಮಾಡಿರುವ ಮಾಹಿತಿ ಸರಿಯಾಗಿ ಅಪ್ಲೋಡ್ ಆಗಿರುವುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ, ಬೆಳೆ ವಿಮೆ ಹಣ, ಬೆಂಬಲ ಬೆಲೆ ಯೋಜನೆಯ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಮಾಡುವುದು ಕಡ್ಡಾಯಗೊಳಿಸಲಾಗಿತ್ತು. ಬೆಳೆ ಸಮೀಕ್ಷೆ ಮಾಡಿದರೆ ಮಾತ್ರ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ನೀಡಲು ಅನುಕೂಲವಾಗಲಿದೆ ಎಂಬುದನ್ನು ರೈತರಿಗೆ ಮಾಹಿತಿ ನೀಡಲಾಗಿತ್ತು.

ಬೆಳೆ ಸಮೀಕ್ಷೆಯನ್ನು ರೈತರು ತಮ್ಮ ಮೊಬೈಲ್ ನಿಂದಲೇ ಮಾಡಿರುತ್ತಾರೆ. ಕೆಲ ರೈತರು ಖಾಸಗಿ ವ್ಯಕ್ತಿಗಳಿಂದ ಬೆಳೆ ಸಮೀಕ್ಷೆ ಮಾಡಿಸಿರುತ್ತಾರೆ. ಆದರೆ ನೀವು ಮಾಡಿದ ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನುಚೆಕ್ ಮಾಡಿಕೊಳ್ಳಬಹುದು.

Bele Darshak App check ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವುದು ಹೇಗೆ?

ಬೆಳೆ ಸಮೀಕ್ಷೆ ಮಾಡಿದ ರೈತರು ತಮ್ಮ ಬೆಳೆ ಸಮೀಕ್ಷೆ ಸರಿಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://play.google.com/store/apps/details?id=com.crop.offcskharif_2021

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಥವಾ ಗೂಗಲ್ ಪ್ಲೇ ಸ್ಟೋರ್ ನಲ್ಲಿ Bele darshak 2023-24 ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಬೆಳೆ ದರ್ಶಕ್ ಆ್ಯಪ್ ಕಾಣಿಸುತ್ತದೆ. ಅಲ್ಲಿ install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಬೆಳೆ ದರ್ಶಕ್ 23-24 ಕೆಳಗಡೆ ಬೆಳೆ ಸಮೀಕ್ಷೆ ಮಾಹಿತಿ ವೀಕ್ಷಣೆ  ಕಾಣಿಸುತ್ತದೆ. ಅದರ ಕೆಳಗಡೆ  ಸರ್ಕಾರಿ ಸಿಬ್ಬಂದಿ ಪ್ರೈವೆಟ್ ರೆಸಡೆಂಟ್ಸ್  ಹಾಗೂ ರೈತ ಎಂಬ ಆಯ್ಕೆಗಳು ಕಾಣಿಸುತ್ತವೆ.  ರೈತ ಮೇಲೆ ಕ್ಲಿಕ್ ಮಾಡಬೇಕು. ವೈಲ್ ಯೂಸಿಂಗ್ ದಿಸ್ ಆ್ಯಪ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ಸರ್ವೆ ನಂಬರ್ ಆಯ್ಕೆ ಕೆಳಗಡೆ ಕೆಲವು ಆಯ್ಕೆಗಳು ಕಾಣಿಸುತ್ತವೆ.  ವರ್ಷ, ಋತು, ಜಿಲ್ಲೆ, ತಾಲೂಕು,  ಹೋಬಳಿ, ಗ್ರಾಮ, ಸರ್ವೆನಂಬರ್ ಹೀಗೆ ಆಯ್ಕೆಗಳು ಕಾಣಿಸುತ್ತವೆ. ಅಲ್ಲಿ ನೀವು ಒಂದೊಂದಾಗಿ ಸರಿಯಾಗಿ ಮಾಹಿತಿಗಳನ್ನು ಭರ್ತಿ ಮಾಡಬೇಕು.

ಇದನ್ನೂಓದಿ ಪಿಎಂ ಕಿಸಾನ್ 15 ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ವರ್ಷ 2023-24 ಆಯ್ಕೆ ಮಾಡಿಕೊಳ್ಳಬೇಕು.  ಋತು- ಮುಂಗಾರು ಆಯ್ಕೆ ಮಾಡಿಕೊಳ್ಳಬೇಕು. ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು.ನಂತರ ನಿಮ್ಮ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ಸರ್ವೆ ನಂಬರ್ ನಮೂದಿಸಿ ವಿವರ ಪಡೆಯಿರಿ ಮೇಲೆ ಕ್ಲಿಕ್ ಮಾಡಬೇಕು.

ಸರ್ವೆ ನಂಬರ್ ಹಿಸ್ಸಾ ನಂಬರ್ ಆಯ್ಕೆ ಮಾಡಿಕೊಂಡು ಮಾಲಿಕ ವಿವರ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಸರ್ವೆ ನಂಬರ್ ನಲ್ಲಿರುವ ಮಾಲಿಕರ ಹೆಸರು ಕಾಣಿಸುತ್ತದೆ. ನಿಮ್ಮ ಹೆಸರು ಆಯ್ಕೆ ಮಾಡಿಕೊಳ್ಳಬೇಕು. ಸಮೀಕ್ಷೆಯ ವಿವರಗಳನ್ನು ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ನೀವು ಅಪ್ಲೋಡ್ ಮಾಡಿದ ಮಾಹಿತಿ ಏನೇನಿದೆ ಎಂಬುದು ಕಾಣಿಸುತ್ತದೆ.

ಒಂದು ವೇಳೆ ನೀವು ಬೆಳೆ ಸಮೀಕ್ಷೆ ಮಾಡಿರದಿದ್ದರೆ ಈಸರ್ವೆ ನಂಬರ್ ಬೆಳೆ ಸಮೀಕ್ಷೆ ಇನ್ನೂ ಪೂರ್ಣಗೊಂಡಿಲ್ಲ ಎಂಬ ಮೆಸೆಜ್ ಕಾಣಿಸುತ್ತದೆ.  ಬೆಳೆಸಮೀಕ್ಷೆ ಇನ್ನೂ ಮಾಡಿಸಿಲ್ಲವಾದರೆ ಕೂಡಲೇ ನಿಮ್ಮ ಜಮೀನಿಗೆ ಹೋಗಿ ಅಲ್ಲಿಂದಲೇ ಬೆಳೆ ಸಮೀಕ್ಷೆ ಪೂರ್ಣಗೊಳಿಸಬಹುದು.

Leave a Comment