Job fair three district ಮಡಿಕೇರಿ, ಹುಬ್ಬಳ್ಳಿ ಹಾಗೂ ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಪದವಿ ಪಾಸಾದವರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಮಡಿಕೇರಿಯಲ್ಲಿ ಸೆಪ್ಟೆಂಬರ್ 14 ರಂದು ಉದ್ಯೋಗ ಮೇಳ
ಮಡಿಕೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮಾಂಡವಿ ಮೋಟಾರ್ಸ್, ಮೈಸೂರು, ಆಟೋ ಲೈವ್, ಮೈಸೂರು, ಎಸ್ಎಲ್.ಎನ್. ಕಾಫಿ, ಕೂಡಿಗೆ, ಸಮರ್ಥ ನಿಧಿ ಲಿಮಿಟೆಡ್, ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐಡಿ, ಡಿಪ್ಲೋಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ ವಿವರಗಳು ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಲು ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08272 225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಕೋರಿದ್ದಾರೆ.
Job fair three district ಸೆಪ್ಟೆಂಬರ್ 15 ರಂದು ಉದ್ಯೋಗ ಮೇಳ
ಶಿವಮೊಗ್ಗ ಜಿಲ್ಲೆಯ ಸೈನ್ಸ್ ಮೈದಾನದಲ್ಲಿ ಸೆಪ್ಟೆಂಬರ್ 15 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ರಾಜ್ಯದ ಸುಮಾರು 50ಕ್ಕೂ ಹೆಚ್ಚಿನ ಬೃಹತ್ ಕಂಪನಿಗಳು ಭಾಗವಹಿಸುತ್ತಿದ್ದು, 5000 ಕ್ಕೂ ಹೆಚ್ಚಿನ ಜನರಿಗೆ ಉದ್ಯೋಗ ಸಿಗುವ ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬೃಹತ್ ಉದ್ಯೋಗ ಮೇಳದ ಪೂರ್ವ ಸಿದ್ದತಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದವರು,, ಐಟಿಐ, ಡಿಪ್ಲೋಮಾ ಸೇರಿದಂತೆ ಎಲ್ಲಾ ರೀತಿಯ ಉನ್ನತ ತರಬೇತಿ ಪಡೆದ ಯುವಕರು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ.
ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ನಲ್ಲಿ ಯಾರ ಯಾರ ಹೆಸರು ಸೇರಿಸಲಾಗಿದೆ? ಅವರಿಗೆಷ್ಟು ಜಮೀನಿದೆ? ಇಲ್ಲೇ ಚೆಕ್ ಮಾಡಿ
ಆನ್ಲೈನ್ ಮೂಲಕ ಹೆಸರು ನೊಂದಾಯಿಸಿಕೊಳ್ಳಬಹುದು. ಮೇಳ ನಡೆಯುವ ದಿನದಂದು ಆಕಾಂಕ್ಷಿಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಂಡು ಭಾಗವಹಿಸಲು ಸಹ ಅವಕಾಶ ಒದಗಿಸಲಾಗಿದೆ ಎಂದರು.
ಸಾಫ್ಟ್ ವೆರ್, ಆಟೋ ಮೊಬೈಲ್, ಫೌಂಡ್ರಿ, ರಿಟೇಲ್ ಫಾರ್ಮಸಿ, ಹಣಕಾಸು ವಿಮೆ, ಗಾರ್ಮೆಂಟ್ಸ್ ಸೇರಿದಂತೆ 50ಕ್ಕೂ ಹೆಚ್ಚಿನ ಸ್ಥಳೀಯ ಹಾಗೂ ರಾಜ್ಯಮಟ್ಟದ ಬೃಹತ್ ಕಂಪನಿಗಳು ಭಾಗವಹಿಸಲಿವೆ. ಈ ಮೇಳದಲ್ಲಿ ಅಪ್ರೆಂಟಿಸ್ ಶಿಪ್ ತರಬೇತಿ ಪಡೆಯಲಿಚ್ಚಿಸುವವರು, ಕೌಶಲ್ಯ ತರಬೇತಿ ಪಡೆಯುವವರು, ಸ್ವಯಂ ಉದ್ಯೋಗ ಆರಂಭಿಸಲಿಚ್ಚಿಸುವವರು ಹೆಸರು ನೋಂದಾಯಿಸಿಕೊಳ್ಳಬಹುದು.
ಕೌಶಲ್ಯಾಧಿಭಿವೃದ್ಧಿ ಇಲಾಖೆ ನಿರ್ದೇಶಕ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಮಾತನಾಡಿ, ಆಸಕ್ತ ಯುವರು ತಮ್ಮ ಹೆಸರನ್ನು ವೆಬ್ಸೈಟ್
https://skillconnect.kaushalkar.com/candidatereg
ನಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಹಾಗೂ ಯಾವುದೇ ಸರ್ಕಾರಿ ಐಟಿಐ ಕಚೇರಿಯನ್ನು ಸಂಪರ್ಕಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 084578 25088, 98800 05425, 08182 25593, 255294 ಇಲ್ಲಿಗೆ ಸಂಪರ್ಕಿಬಹುದು ಎಂದು ಮಾಹಿತಿ ನೀಡಿದರು.
ಸೆಪ್ಟೆಂಬರ್ 15 ರಂದು ತುಮಕೂರು ಜಿಲ್ಲೆಯಲ್ಲಿ ನೇರ ಸಂದರ್ಶನ
ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಸೆಪ್ಟೆಂಬರ್ 15 ರಂದು ಬೆಳಗ್ಗೆ 10.30 ರಿಂದ 1 ರವರೆಗೆ ನೇರ ಸಂದರ್ಶನ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08162278488 , 9606955152 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 17 ರೊಳಗೆ 2618 ಅಕ್ಷರ ಮಿತ್ರ ನೇಮಕ
ಕಲ್ಯಾಣ ಕರ್ನಾಟಕ ಮೊದಲ ಬಾರಿಗೆ ಅಕ್ಷರ ಆವಿಷ್ಕಾರ ಎಂಬ ಯೋಜನೆಯಡಿಯಲ್ಲಿ ಇದೇ ಸೆಪ್ಟೆಂಬರ್ 17 ರಂದು ಅಕ್ಷರ ಮಿತ್ರ ಎಂಬ ವಿಶೇಷವಾದ ಹೆಸರಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಕಲ್ಯಾಣ ಕರ್ನಟಾಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷಡಾ. ಅಜಯಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪ್ರಾಥಮಿಕ ಶಿಕ್ಷಕರಿಗೆ 10 ಸಾವಿರ ಮತ್ತು ಪ್ರೌಢ ಶಿಕ್ಷಕರಿಗೆ 10.500 ರೂಪಾಯಿ ಮಾಸಿಕವಾಗಿ ಗೌರವಧನ ರೂಪದಲ್ಲಿ ಪ್ರತಿ ತಿಂಗಳು ಹಣ ನೀಡಲಾಗುವುದು ಎಂದು ತಿಳಿಸಿದ್ದಾರೆ.