Ambigara chouday abhivrudhi nigama (ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ) ದ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು,ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ, ನೇರ ಸಾಲ ಮತ್ತು ಸಹಾಯಧನ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ -1 ರ ಅರ್ಜಿದಾರರಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಅರ್ಜಿ ಸಲ್ಲಿಸಬೇಕು. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ)
ಗಂಗಾ ಕಲ್ಯಾಣ ನೀರಾವರಿ ಯೋಜನೆ
ಗಂಗಾ ಕಲ್ಯಾಣ ನೀರಾವರಿ ಯೋಜನೆಗೆ ಸೌಲಭ್ಯ ಪಡೆಯುವ ರೈತರಿಗೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ 98 ಸಾವಿರ ರೂಪಾಯಿಗಳ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ2 ಎಕರೆ ಜಮೀನು ಹೊಂದಿರಬೇಕು.
ಇದನ್ನೂ ಓದಿ ಪಿಎಂ ಕಿಸಾನ್ ಜಮೆ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. 24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ 3.75 ಲಕ್ಷ (ವಿದ್ಯುದೀಕರಣ ಸೇರಿದಂತೆ), ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ 4.75 ಲಕ್ಷ (ವಿದ್ಯುದೀಕರಣ ಸೇರಿದಂತೆ)ಹಾಗೂ ಅವಶ್ಯವಿದ್ದಲ್ಲಿ 50 ಸಾವಿರ ರೂಪಾಯಿ ಸಾಲವನ್ನು ಶೇ. 40 ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು.
ಸ್ವಾವಲಂಬಿ ಸಾರಥಿ ಯೋಜನೆ
ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಟ್ಯಾಕ್ಸಿ, ಟಾಟಾ ಎಸಿ ಗೂಡ್ಸ್ ವಾಹನ ಖರೀದಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಅರ್ಜಿದಾರರು ನಿರುದ್ಯೋಗಿ ಆಗಿರಬೇಕು. ಅರ್ಜಿದಾರರು ಸ್ವಯಂ ಟ್ಯಾಕ್ಸಿ ಚಾಲನೆ (ಯೆಲ್ಲೋ ಬೋರ್ಡ್)ಉದ್ದೇಶಕ್ಕೆ ವಾಹನವನ್ನು ನೋಂದಾಯಿಸತಕ್ಕದ್ದು. ನಾಲ್ಕು ಚಕ್ರ ವಾಹನ ಟ್ಯಾಕ್ಸಿ, ಟಾಟಾ ಎಸಿ, ಗೂಡ್ಸ್ ವಾಹನವನ್ನು ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್ / ಗ್ರಾಮೀಣ ಬ್ಯಾಂಕ್ ಗಳು ಮಂಜೂರು ಮಾಡಿದ ಸಾಲಕ್ಕೆ ಶೇ. 50 ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಇವುಗಳಲ್ಲಿ ಯಾವುದು ಕಡಿಮೆಯೋ ಅಷ್ಟು ಸಬ್ಸಿಡಿ ನೀಡಲಾಗುವುದು.
Ambigara chouday abhivrudhi nigama (ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ) ದ ವತಿಯಿಂದ ಕರೆಯಲಾದ ಇನ್ನಿತರ ಯೋಜನೆಗಳ ಕುರಿತು ತಿಳಿಯಲು ಈ
https://ambigaradevelopment.karnataka.gov.in/storage/pdf-files/2023-24Notification.pdf
ಲಿಂಕ್ ಮೇಲೆ ಕ್ಲಿಕ್ ಮಾಡಿ ಮಾಹಿತಿ ಪಡೆಯಬಹುದು.
ಅರ್ಹತೆಗಳು
ಅರ್ಜಿದಾದರು ಆಧಾರ್ ಕಾರ್ಡ್ ಹೊಂದಿರಬೇಕು. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ನಿಗಮದಿಂದ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರ್ಜಿ, ಸೌಲಭ್ಯ ಕುರಿತು ಇಲ್ಲಿ ಸಂಪರ್ಕಿಸಿ
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ / ನಿಗಮದ ವೆಬ್ಸೈಟ್
https://ambigaradevelopment.karnataka.gov.in/
ರಲ್ಲಿ ಪಡೆಯಬಹುದು. ನಿಗಮದ ಸಹಾಯವಾಣಿ ಸಂಖ್ಯೆ 080 22864099 ಗೆ ಕಚೇರಿ ಸಮಯದಲ್ಲಿ ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಗೆ ಸಂಪರ್ಕಿಸಬಹುದು.