Gruhalakshmi 2nd installment ಯಾರು ಯಾರಿಗೆ ಜಮೆಯಾಗಲಿದೆ ಎಂಬುದನ್ನು ಫಲಾನುಭವಿಗಳು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ಕಾಂಗ್ರೆಸ್ ಸರ್ಕಾರವು ಘೋಷಣೆ ಮಾಡಿದ ಐದು ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಗೃಹಲಕ್ಷ್ಮೀಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳು 2ನೇ ಕಂತಿನ ಹಣ ತಮಗೆ ಹಣ ಜಮೆಯಾಗುವುದೋ ಇಲ್ಲವೋ ಹಾಗೂ ಒಂದನೇ ಕಂತಿನ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋದಿ ಮಾಹಿತಿ.
ಗೃಹಲಕ್ಷ್ಮೀ ಯೋಜನೆಯ ಹಣ ಯಾರಿಗೆ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ
https://play.google.com/store/apps/details?id=com.dbtkarnataka
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಥವಾ ನೀವು ಗೂಗಲ್ ಪ್ಲೇ ಸ್ಟೋರ್ ಮೂಲಕ ಡಿಬಿಟಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲೋ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಸಲ ಅಲೋ ಮೇಲೆ ಕ್ಲಿಕ್ ಮಾಡಬೇಕು. ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಮಹಿಳೆಯ ಆಧಾರ್ ಕಾರ್ಡ್ ನಮೂದಿಸಬೇಕು.
ಐ ಅಗ್ರಿ ಬಾಕ್ಸ್ಆಯ್ಕೆ ಮಾಡಿಕೊಂಡು ಗೆಟ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮಆಧಾರ್ ಕಾರ್ಡಿಗೆ ಓಟಿಪಿ ಸಂಖ್ಯೆ ಬರುವುದು. ನಿಮ್ಮ ಮೊಬೈಲಿಗೆ ಬಂದ ಓಟಿಪಿಯನ್ನು ನಮೂದಿಸದ ನಂತರ ನೀವು ಪಿನ್ ನಂಬರ್ ಕ್ರಿಯೇಟ್ ಮಾಡಿಕೊಳ್ಳಬೇಕು. ಅಂದರೆ ನಿಮ್ಮ ಎಟಿಎಂ ಕಾರ್ಡ್ ನಂಬರ್ ನಂತೆ ನೀವು ಯಾವುದಾದರೂ ನಂಬರ್ ಗಳನ್ನು ನಮೂದಿಸಿ ಪಿನ್ ಕ್ರಿಯೇಟ್ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿದಾಗ ನಿಮ್ಮ ಭಾವಚಿತ್ರ ಕಾಣಿಸುತ್ತದೆ.
ಇದನ್ನೂ ಓದಿ : ಈ ಪಟ್ಟಿಯಲ್ಲಿರುವ ರೈತರಿಗೆ ಈ ದಿನ ಪಿಎಂ ಕಿಸಾನ್ ಹಣ ಜಮೆ- ನಿಮ್ಮ ಹೆಸರಿದೆಯೇ? ಚೆಕ್ ಮಾಡಿ
ಅಲ್ಲಿ ಆಧಾರ್ ಕಾರ್ಡ್ ನಲ್ಲಿರುವಂತೆ ನಿಮ್ಮ ಹೆಸರು, ನಿಮ್ಮ ಊರು, ನಿಮ್ಮ ಜನ್ಮ ದಿನಾಂಕ ಕಾಣಿಸುತ್ತದೆ. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಕೆ ಮೇಲೆ ಕ್ಲಿಕ್ ಮಾಡಬೇಕು. ಆಗ ಡಿಬಿಟಿ ಆ್ಯಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮಗೆ ಕಾಣುವ ಮೂರು ಆಯ್ಕೆಗಳಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಯಾವ ಯಾವ ಯೋಜನೆಗಳಿಂದ ಹಣ ಜಮೆಯಾಗಿದೆ. ಅಂದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಿಂದ ಎಷ್ಟು ಹಣ ಜಮೆಯಾಗಿದೆ? ಯಾವಾಗ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
Gruhalakshmi 2nd installment ಅರ್ಹತೆ ಚೆಕ್ ಮಾಡುವುದು ಹೇಗೆ?
ಗೃಹಲಕ್ಷ್ಮೀ ಯೋಜನೆಯ ಅರ್ಹತೆಯ ಪಟ್ಟಿಯಲ್ಲಿ ತಮ್ಮ ಹೆಸರಿರುವುದನ್ನು ಚೆಕ್ ಮಾಡಲು ಈ
https://ahara.kar.nic.in/Home/EServices
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ಅಲ್ಲಿ ಕಾಣುವ ಇ ರೇಶನ್ ಕಾರ್ಡ್ (ಈ ಪಡಿತರ ಚೀಟಿ) ಮೇಲೆ ಕ್ಲಿಕ್ ಮಾಡಿದ ನಂತರ ಅಲ್ಲಿ ಕಾಣುವ ವಿಲೇಜ್ ಲಿಸ್ಟ್ (ಹಳ್ಳಿ ಪಟ್ಟಿ) ಮೇಲೆಕ್ಲಿಕ್ ಮಾಡಬೇಕಾಗುತ್ತದೆ. ಇದಾದನಂತರ ಓಪನ್ ಆಗುವ ಪೇಜ್ ನಲ್ಲಿ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯತ್ ಹಾಗೂ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೋ ಮೇಲೆ ಕ್ಲಿಕ್ ಮಾಡಿದಾಗ ಪಡಿತರ ಚೀಟಿ ಹೊಂದಿರುವವರ ಪಟ್ಟಿ ಕಾಣಿಸುತ್ತದೆ. ಅಲ್ಲಿ ಪಡಿತರ ಚೀಟಿ ಸಂಖ್ಯೆ ಹಾಗೂ ಕುಟುಂಬದ ಮುಖ್ಯಸ್ಥರ ಹೆಸರು ಗೋಚರಿಸುತ್ತದೆ. ಅಲ್ಲಿ ಮಹಿಳೆಯ ಹೆಸರು ಕುಟುಂಬದ ಮುಖ್ಯಸ್ಥರ ಸ್ಥಳದಲ್ಲಿ ಕಾಣಬೇಕು. ಇದರೊಂದಿಗೆ ಬಿಪಿಲ್ ಕಾರ್ಡ್ ಹೊಂದಿದವರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆಯಾಗಲಿದೆ. ಆ ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿರಬೇಕು.