PM Kisan ಯೋಜನೆಯ ಫಲಾನುಭವಿಗಳಿಗೆ 15ನೇ ಕಂತಿನ ಹಣ ಯಾವ ಯಾವ ರೈತರಿಗೆ ಹಾಗೂ ಯಾವಾಗ ಜಮೆಯಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ.
ಪಿಎಂ ಕಿಸಾನ್ 15ನೇ ಕಂತಿಗಾಗಿ ಕಾಯುತ್ತಿರುವ ಫಲಾನುಭವಿಗಳಿಗಿಲ್ಲಿದೆ ಸುದ್ದಿ. ಪಿಎಂ ಕಿಸಾನ್ ಯೋಜನೆಗೆ ಈಗಾಗಲೇ ನೋಂದಣಿ ಮಾಡಿಸಿಕೊಂಡವರು ಮುಂದಿನ ಕಂತಿಗಾಗಿ ಕಾಯುತ್ತಿರುವರ ಎಲ್ಲಾ ರೈತರಿಗೆ 15ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಜಮೆಯಾಗುವ ಸಾಧ್ಯತೆಯಿದೆ. ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯ ಸೌಲಭ್ಯ ಒದಗಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿಯೇ ಪಿಎಂ ಕಿಸಾನ್ ಫಲಾನುಭವಿಗಳಿಗೆ ಇಕೆವೈಸಿ ಕಡ್ಡಾಯಗೊಳಿಸಿತು. ಯಾವ ಯಾವ ರೈತರು ಇಕೆವೈಸಿ ಮಾಡಿಸಿದ್ದಾರೋ ಅಂತಹ ರೈತರಿಗೆ ಮುಂದಿನ ಕಂತು ಜಮೆಯಾಗುವ ಸಾಧ್ಯತೆಯಿದೆ.
Pm kisan money credit ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/Rpt_BeneficiaryStatus_pub.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ಕರ್ನಾಟಕ ರಾಜ್ಯ ಆಯ್ಕೆ ಮಾಡಿಕೊಳ್ಳಬೇಕು. ನಂತರ ಜಿಲ್ಲೆ, ತಾಲೂಕು ಹಾಗೂ ಹೋಬಳಿ ಆಯ್ಕೆ ಮಾಡಿಕೊಂಡ ನಿಮ್ಮ ಊರು ಆಯ್ಕೆ ಮಾಡಿಕೊಳ್ಳಬೇಕು. ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆ ಗ್ರಾಮದ ಫಲಾನುಭವಿಗಳ ಪಟ್ಟಿ ಕಾಣಿಸುತ್ತದೆ. ಅಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು.
ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದರೂ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುತ್ತಿಲ್ಲವೇ?
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಎಲ್ಲರಿಗೂ ಹಣ ಜಮೆಯಾಗುವುದಿಲ್ಲ. ಏಕೆಂದರೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇಕೆವೈಸಿ ಆಗಿರುವುದರೊಂದಿಗೆ ನಿಮ್ಮ ಜಮೀನಿನ ದಾಖಲೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನಲ್ಲಿ ಹೆಸರು ಒಂದೇ ರೀತಿಯಾಗಿರಬೇಕು . ಹೆಸರು ವ್ಯತ್ಯಾಸವಾಗಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮೆಯಾಗುವ ಸಾಧ್ಯತೆ ತುಂಬಾ ಕಡಿಮೆ ಇದೆ.
Pm kisan money credit ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಿ
ರೈತರು ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ
https://pmkisan.gov.in/BeneficiaryStatus_New.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ರಿಜಿಸ್ಟರ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ ಗೆಟ್ ಡಾಟಾ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು.
ನಿಮ್ಮ ರಿಜಿಸ್ಟರ್ ನಂಬರ್ ನಿಮಗೆ ನೆನಪಿಲ್ಲದಿದ್ದರೆ ಅಲ್ಲಿ ಕಾಣುವ Know your registration no. ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ನಂತರ ಗೆಟ್ ಮೊಬೈಲ್ ಓಟಿಪಿ ಮೇಲೆ ಕ್ಲಿಕ್ ಮಾಡಬೇಕು. ಅಗ ನಿಮ್ಮಮೊಬೈಲಿಗೆ ಓಟಿಪಿ ಬರುತ್ತದೆ. ಆ ಓಟಿಪಿ ನಮೂದಿಸಿ ನಂತರ ಗೆಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ರಿಜಿಸ್ಟರ್ ನಂಬರ್ ಹಾಗೂ ನಿಮ್ಮ ಹೆಸರು ಕಾಣಿಸುತ್ತದೆ. ನಿಮ್ಮ ರೆಜಿಸ್ಟರ್ ನಂಬರ್ ಕಾಪಿ ಮಾಡಿಕೊಂಡು ಬ್ಯಾಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸ್ಟೇಟಸ್ ಪೇಜ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ರಿಜಿಸ್ಟರ್ ನಂಬರ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ಗೆಟ್ ಡಿಟೇಲ್ ಮೇಲೆ ಕ್ಲಿಕ್ ಮಾಡಿದರೆ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಹೆಸರು, ತಂದೆಯ ಹೆಸರು, ಹಾಗೂ ಎಲಿಜಿಬಿಲಿಟಿ ಸ್ಟೇಟಸ್ ಕಾಣಿಸುತ್ತದೆ. ಇಲ್ಲಿಯವರೆಗೆ ಎಷ್ಟು ಕಂತುಗಳು ನಿಮ್ಮ ಖಾತೆಗೆಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಎಲಿಜಿಬಿಲಿಟಿ ಸ್ಟೇಟಸ್ ಮೇಲೆಕ್ಲಿಕ್ ಮಾಡಿ ಚೆಕ್ ಮಾಡಬಹುದು. ನಂತರ ರೀಸನ್ ಆಫ್ ಎಲಿಜಿಬಿಲಿಟಿ ಮೇಲೆ ಕ್ಲಿಕ್ ಮಾಡಿದರೆ ಯಾವ ಕಾರಣಕ್ಕಾಗಿ ನಿಮ್ಮ ಹಣ ಜಮೆಯಾಗುವುದನ್ನು ತಡೆಹಿಡಿಯಲಾಗಿದೆ ಎಂಬುದನ್ನು ನಮೂದಿಸಲಾಗಿರುತ್ತದೆ.