weather forecast ಇದೇ ತಿಂಗಳು ಅಕ್ಟೋಬರ್ 29 ಹಾಗೂ 30 ರಂದು ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಿರು ಬಿಸಿಲಿನಿಂದ ತತ್ತರಿಸಿದ ಜನತೆಗೆ ಮಳೆ ಸ್ವಲ್ಪ ತಂಪು ನೀಡಲಿದೆ ಎಂಬ ನಿರೀಕ್ಷೆಯಿದೆ. ಹೌದು ಕರ್ನಾಟಕದ ಕರಾವಳಿ ಪ್ರದೇಶಗಳು ಹಾಗೂ ದಕ್ಷಿಣ ಆಂತರಿಕ ಕರ್ನಾಟಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ತಮಿಳುನಾಡು, ಪಾಂಡಿಚೇರಿ, ಕಾರೈಕಲ್, ಕೇರಳು ಮತ್ತು ಮಾಹೆ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಮಿಂಚು ಸಹಿತ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಮಳೆ ಎರಡು ದಿನಗಳ ಕಾಲ ಅಲ್ಲಲ್ಲಿ ಸುರಿಯುವ ಸಾಧ್ಯತೆಯಿದೆ ಎಂದು ನಿರೀಕ್ಷಿಸಲಾಗಿದೆ.
weather forecast ನಿಮ್ಮ ಜಿಲ್ಲೆಯ ಮಳೆಯ ಮಾಹಿತಿ ಬೇಕೆ? ಈ ನಂಬರಿಕೆ ಕರೆ ಮಾಡಿ
ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ರೈತರು ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ಮಳೆಯ ಮಾಹಿತಿ ಪಡೆಯಬಹುದು. ಹೌದು, ರೈತರು ವರುಣಮಿತ್ರ ಸಹಾಯವಾಣಿ ನಂಬರ್ 92433 45433 ನಂಬರಿಗೆ ಕರೆ ಮಾಡಿದರೆ ಸಾಕು, ತಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ ಎಂಬುದನ್ನು ಒಂದು ಕರೆ ಮಾಡಿ ತಿಳಿದುಕೊಳ್ಳಬಹುದು. ಈ ಉಚಿತ ಸಹಾಯವಾಣಿಯು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವಾಗ ಬೇಕಾದರೆ ಕರೆ ಮಾಡಿ ಹವಾಮಾನದ ವರದಿಯನ್ನು ಪಡೆಯಬಹುದು.
ಐದು ದಿನ ಮೊದಲೇ ಮಳೆಯ ಮಾಹಿತಿ ಬೇಕೇ?
ರೈತರು ಐದು ದಿನ ಮೊದಲೇ ತಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ ಪ್ಸೇ ಸ್ಟೋರ್ ನಲ್ಲಿ Meghdoot ಎಂದು ಟೈಪ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ಈ
https://play.google.com/store/apps/details?id=com.aas.meghdoot&hl=en_IN&gl=US
ಲಿಂಕ್ ಮೇಲ ಕ್ಲಿಕ್ ಮಾಡಿ ಮೇಘದೂತ್ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿದ ನಂತರ ಇನಸ್ಟಾಲ್ ಮೇಲೆ ಕ್ಲಿಕ್ ಮಾಡಿ ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ನೀವು ಯಾವ ಭಾಷೆಯಲ್ಲಿ ಮಾಹಿತಿ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಆ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
ನೀವು ಇಲ್ಲಿ ಕನ್ನಡ ಭಾಷೆ ಆಯ್ಕೆ ಮಾಡಿಕೊಳ್ಳಬಹುದು. ನಂತರ ನೀವು ಯಾವ ಯಾವ ಮಾಹಿತಿಗಳನ್ನು ಚೆಕ್ ಮಾಡಬಹುದು ಎಂಬುದು ಕಾಣಿಸುತ್ತದೆ. ನಂತರ ಮುಂದೆ ಮೇಲೆ ಕ್ಲಿಕ್ ಮಾಡಿದ ಮೇಘದೂತ್ ಆ್ಯಪ್ ಲಾಗಿನ್ ಆಗಬೇಕು. ನಂತರ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಲಾಗಿನ್ ಆಗಬೇಕಾಗುತ್ತದೆ. ನಂತರ ವೈಲ್ ಯೂಸಿಂಗ್ ದ ಆ್ಯಪ್ ಮೇಲ ಕ್ಲಿಕ್ ಮಾಡಬೇಕು.
ಇದನ್ನೂ ಓದಿ : Gruhalakshmi scheme money ಈ ಮಹಿಳೆಯರಿಗೆ ಜಮೆ: ಮೊಬೈಲ್ ನಲ್ಲೇ ಇಲ್ಲೆ ಚೆಕ್ ಮಾಡಿ
ಆಗ ನಿಮಗೆ ಜಿಲ್ಲೆಯ ಕನಿಷ್ಠ, ಗರಿಷ್ಠ ತಾಪಮಾನ, ಗಾಳಿಯ ವೇಗ ಹಾಗೂ ಗಾಳಿಯ ದಿಕ್ಕು ತೇವಾಂಶದ ಮಾಹಿತಿ ಕಾಣಿಸುತತ್ದೆ. ಅಲ್ಲೇ ಕಾಣುವ ಮುನ್ಸೂಚನೆ ಮೇಲೆ ಕ್ಲಿಕ್ ಮಾಡಿದಾಗ ನಿಮಗೆ ಮುಂದಿನ ಐದು ದಿನಗಳ ಕಾಲ ಹವಾಮಾನದ ವರದಿ ಕಾಣಿಸುತ್ತದೆ.
ರೈತರು ಮಳೆಯ ಮಾಹಿತಿಯೊಂದಿಗೆ ಸಿಡಿಲಿನ ಮಾಹಿತಿಯನ್ನು ಸಹ ಪಡೆಯಬಹುದು. ಅಂದರೆ ತಮ್ಮ ಸುತ್ತಮುತ್ತಲು ಸಿಡಿಲು ಬೀಳುವ ಐದು ದಿನ ಮೊದಲೇ ಮಾಹಿತಿ ನೀಡುವ ಆ್ಯಪ್ ಸಹ ಇದೆ. ಸಿಡಿಲು ಹಾಗೂ ದಾಮಿನಿ ಆ್ಯಪ್ ಗಳ ಸಹಾಯದಿಂದ ರೈತರು ಮನೆಯಲ್ಲಿಯೇ ಕುಳಿತು ಸಿಡಿಲಿನ ಮಾಹಿತಿಯನ್ನು ಪಡೆಯಬಹುದು. ಈ ಆ್ಯಪ್ ಗಳನ್ನು ತಮ್ಮ ಮೊಬೈಲಿಗೆ ಇನಸ್ಟಾಲ್ ಮಾಡಿಕೊಂಡರೆ ಸಾಕು, ಐದು ನಿಮಿಷ ಮೊದಲೇ ಮಾಹಿತಿ ಪಡೆಯಬಹುದು.