ಬೆಳೆ ವಿಮೆಗೆ ಅರ್ಜಿ ಆಹ್ವಾನ: ಇಲ್ಲೆ ಚೇಕ್ ಮಾಡಿ

Written by Ramlinganna

Updated on:

Crop insurance Application invited ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು 2023ನೇ ಸಾಲಿನ ಹಿಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಠಾನ ಗೊಳಿಸಸಲಾಗಿದೆ. ರಾಜ್ಯದ ರೈತರು ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕೆಂದು ಕೋರಲಾಗಿದೆ.

ಜೋಳ (ಮಳೆಯಾಶ್ರಿತ) ಜೋಳ (ನೀರಾವರಿ), ಕಡಲೆ (ಮಳೆಯಾಶ್ರಿತ) ಹಾಗೂ ಕುಸುಮೆ (ಮಳೆಯಾಶ್ರಿತ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್1 ಕೊನೆಯ ದಿನಾಂಕವಾಗಿರುತ್ತದೆ.

ಕಡಲೆ (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ. ಸೂರ್ಯಕಾಂತಿ (ಮಳೆಯಾಶ್ರಿತ), ಸೂರ್ಯಕಾಂತಿ (ನೀರಾವರಿ) ಹಾಗೂ ಭತ್ತ (ನೀರಾವರಿ) ಬೆಳೆಗಳಿಗೆ ನೋಂದಣಿ ಮಾಡಿಕೊಳ್ಳಲು ನವೆಂಬರ್ 15 ಕೊನೆಯ ದಿನವಾಗಿದೆ. ಗೋಧಿ (ಮಳೆಯಾಶ್ರಿತ) ಹಾಗೂ ಗೋಧಿ (ನೀರಾವರಿ) ಬೆಳೆಗೆ ನೋಂದಣಿ ಮಾಡಿಕೊಳ್ಳಲು ಡಿಸೆಂಬರ್ 30 ಕೊನೆಯ ದಿನವಾಗಿದೆ.

ಪ್ರಸಕ್ತ ಸಾಲಿನ ಮತ್ತು ಹಿಂಗಾರು ಹಂಗಾಮಿನಲ್ಲಿ ಮಳೆ ಅಭಾವ ಅಥವಾ ಇತರೆ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಥವಾ ಸ್ಥಳ, ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆ ಮುಳುಗಡೆ, ಮೇಘಸ್ಫೋಟ ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಘಡ ಸಂದರ್ಭದಲ್ಲಿ ಬೆಳೆ ನಷ್ಟ ಉಂಟಾದಲ್ಲಿ ಬೆಳೆ ವಿಮೆಯ ಸದುಪಯೋಗಪಡೆದುಕೊಳ್ಳಬಹುದು.

ರೈತರು ನೋಂದಣಿಗಾಗಿ ತಮ್ಮ ಹತ್ತಿರದ ಬ್ಯಾಂಕುಗಳಿಗೆ ಅಥವಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಸಂಪರ್ಕಿಸಿ ಬೆಳೆ ವಿಮೆ ನೋಂದಣಿಯ ಸದುಪಯೋಗ ಪಡೆದುಕೊಳ್ಳಬಹುದು.

Crop insurance Application invited ಯಾವ ಬೆಳೆಗೆ ಎಷ್ಟು ವಿಮೆ ಜಮೆಯಾಗುತ್ತದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಯಾವ ಬೆಳೆಗೆ ಎಷ್ಟು ರೂಪಾಯಿಯವರೆಗೆ ಬೆಳೆ ವಿಮೆ ಹಣ ಜಮೆಯಾಗುತ್ತದೆ ಎಂಬುದನ್ನು ಚೆಕ್ ಮಾಡಲು ಈ

https://samrakshane.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಬೆಳೆ ವಿಮೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ಮಾಡಬೇಕು. ನಂತರ Premium Calculator ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮ ಆಯ್ಕೆ ಮಾಡಿಕೊಳ್ಳಬೇಕು. ನಂತರ crop ನಲ್ಲಿ ನೀವು ಯಾವ ಬೆಳೆಗೆ ವಿಮೆ ಮಾಡಿಸಬೇಕೆಂದುಕೊಂಡಿದ್ದೀರೋ ಆ ಬೆಳೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಎಕರೆ ನಮೂದಿಸಬೇಕು.  ಇದಾದ ನಂತರ Show Premium ಮೇಲೆ ಕ್ಲಿಕ್ ಮಾಡಬೇಕು. ಆಗ ಒಂದು ಎಕರೆಗೆ ಎಷ್ಟು  ವಿಮೆ ಹಣ ಜಮೆಯಾಗಬಹುದು ಎಂಬುದು ಕಾಣಿಸುತ್ತದೆ. ಫಾರ್ಮರ್ ಶೇರ್ ನಲ್ಲಿ ನೀವು ಎಷ್ಟು ವಿಮೆ ಹಣ ಪಾವತಿಸಬಹುದು ಎಂಬುದು ಕಾಣಿಸುತ್ತದೆ.

ಬೆಳೆ ವಿಮೆ ಕುರಿತಂತೆ ಯಾರಿಗೆ ಸಂಪರ್ಕಿಸಬೇಕು?

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800 200 5142, ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ / ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ, ಬೆಂಗಳೂರಿನ ಯುನಿವರ್ಸಲ್ ಸೋಂಪೋ ಜನರಲ್ ಇನ್ಸುರೆನ್ಸ್ ವಿಮಾ ಸಂಸ್ಥೆಯ ಪ್ರತಿನಿಧಿಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ ಕೊನೆಗೂ ಬರಗಾಲ ಪರಿಹಾರ ಹಣ ಬಿಡುಗಡೆಃ ನಿಮಗೆಷ್ಟು ಜಮೆಯಾಗಿದೆ? ಇಲ್ಲೇ ಚೆಕ್ ಮಾಡಿ

ಕಲಬುರಗಿ ಜಿಲ್ಲೆಯ ರೈತರು ಬೆಳೆ ವಿಮೆ ಕುರಿತಂತೆ ಮಾಹಿತಿ ಪಡೆಯಲು 8867508750 ಅಥವಾ 7349388212 ಗೆ ಸಂಪರ್ಕಿಸಬಹುದು. ಚಿತ್ತಾಪುರ ತಾಲೂಕಿನ ರೈತರು 7996369510, ಅಫಜಲ್ಪುರ ತಾಲೂಕಿನ ರೈತರು 9902356434, ಜೇವರ್ಗಿ ತಾಲೂಕಿನ ರೈತರು 9845661193, ಆಳಂದ ತಾಲೂಕಿನ ರೈತರು 9702944943, ಕಲಬುರಗಿ ತಾಲೂಕಿನ ರೈತರು 8147603315, ಚಿಂಚೋಳಿ ತಾಲೂಕಿನ ರೈತರು 8095384057, ಸೇಡಂ ತಾಲೂಕಿನ ರೈತರು 7204579007, ಕಾಳಗಿ ತಾಲೂಕಿನ ರೈತರು 90004814498, ಕಮಲಾಪುರ ತಾಲೂಕಿನ ರೈತರು 7259754689, ಶಹಾಬಾದ್ ತಾಲೂಕಿನ ರೈತರು 9113985051 ಹಾಗೂ ಯಡ್ರಾಮಿ ತಾಲೂಕಿನ ರೈತರು 9880222988ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment