Drip and sprinkler subsidy 2023-24ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಘಟಕ ಅಳವಡಿಸಲು ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳಲು ರೈತ ಬಾಂಧವರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಕೋಟೆ ತಾಲೂಕು ತೋಟಗಾರಿಕೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಮೊಬೈಲ್ ಸಂಖ್ಯೆ 8217210320, 9483478162, ಅನಗೊಂಡನಹಳ್ಳಿ ಹೋಬಳಿ ಮೊಬೈಲ್ ನಂಬರ್ 94810 74896, ಜಡಿಗೇನಹಳ್ಳಿ ಹೋಬಳಿ ಮೊಬೈಲ್ ನಂಬರ್ 8722117133, ಸೂಲಿಬೆಲೆ ಹೋಬಳಿ ಮೊಬೈಲ್ ನಂಬರ್ 9620208798, ನಂದಗುಡಿ ಹಾಗೂ ಕಸಬಾ ಹೋಬಳಿ ಮೊಬೈಲ್ ನಂಬರ್ 78290 31017 ಗೆ ಸಂಪರ್ಕಿಸಲು ಕೋರಲಾಗಿದೆ.
ತುಂತುರು ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ದುಂಡಶಿ, ಶಿಗ್ಗಾಂವಿ, ಬಂಕಾಪುರ, ಹೋಬಳಿಗಳಲ್ಲಿ ತುಂತುರು ನೀರಾವರಿ ಘಟಕ ಅಳವಡಿಸಿಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ರೈತರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕ ಸ್ಥಾಪಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರೈತರು ಎಫ್ಐಡಿ ಸಂಖ್ಯೆ, ಆಧಾರ್ ಕಾರ್ಡ್ ಝರಾಕ್ಸ್ , ಬ್ಯಾಂಕ್ ಪಾಸ್ ಬುಕ್, ಜಮೀನಿನ ದಾಖಲೆಗಳು, ಪಹಣಿ (ಉತಾರ್)ಪ್ರತಿ ಸಲ್ಲಿಸಬೇಕು. ಆರ್.ಡಿ ಸಂಖ್ಯೆಯಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ನೀರಾವರಿ ಪ್ರಮಾಣ ಪತ್ರ (ಜಿಪಿಎಸ್ ಫೋಟೋ) 20 ರೂಪಾಯಿ ಬಾಂಡ್ (ಜಂಟಿ ಇದ್ದಲ್ಲಿ ಬಾಂಡ್ ನಲ್ಲಿ ಒಪ್ಪಿಗೆ ಪತ್ರ) 2 ಫೋಟೋಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ : ನಿಮ್ಮ ಜಮೀನಿಗೆ ಹೋಗಲು ದಾರಿಯಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಹಿಂದಿನ 7 ವರ್ಷಗಳಲ್ಲಿ ಸದರಿ ಸೌಲಭ್ಯ ಪಡೆಯದೆ ಇರುವ ರೈತರು ಅರ್ಜಿ ಸಲ್ಲಿಸಬಹುದು. ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ಕೃಷಿ ನಿರ್ದೇಶಕ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಾಬುರಾವ ದಿಕ್ಸಿತ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Drip and sprinkler subsidy ತುಂತುರು ಹಾಗೂ ಹನಿ ನೀರಾವರಿ ಘಟಕಕ್ಕೆ ಏಕೆ ಸಬ್ಸಿಡಿ ನೀಡಲಾಗುತ್ತಿದೆ?
ರಾಜ್ಯದ ರೈತರಲ್ಲಿ ನೀರಿನ ಮಿತ ಬಳಕೆ ಮಾಡುವಂತೆ ಪ್ರೋತ್ಸೋಹಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮದಡಿ ಲಭ್ಯವಿರುವ ನೀರನ್ನು ಸಮರ್ಥ ಬಳಕೆ ಮಾಡುವಲ್ಲಿ ಅನುವಾಗುವಂತೆ ಸೂಕ್ಷ್ಮ ನೀರಾವರಿ ಘಟಕ ಮತ್ತು ಹನಿ ನೀರಾವರಿ ಘಟಕಗಳನ್ನು ರೈತರು ಅಳವಡಿಸಿಕೊಳ್ಳಲು ಲ್ಲಾ ವರ್ಗದ ರೈತರಿಗೆ 2.0 ಹೆಟ್ಕೇಟರ್ ಪ್ರದೇಶದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. 2.0 ಕ್ಕಿಂತ ಮೇಲ್ಪಟ್ಟು 5.0 ಹೆಕ್ಟೇರ್ ಪ್ರದೇಶದವರಿಗೆ ಶೇ. 45 ರಷ್ಟು ಸಹಾಯಧನ ಸಹಾಯಧನ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಿದ ನಂತರ ಹಿರಿತನ ಆಧರಿಸಿ ಮೊದಲು ಅರ್ಜಿ ಸಲ್ಲಿಸಿದವರಿಗೆ ಆದ್ಯತೆ ನೀಡಲಾಗುವುದು. ಇದರೊಂದಿಗೆ ಈ ಹಿಂದೆ ಈ ಸೌಲಭ್ಯ ಪಡೆಯದೆ ಇರುವ ರೈತರಿಗೆ ಮಹತ್ವ ನೀಡಲಾಗುವುದು.
ಸೂಕ್ಷ್ಮಹಾಗೂ ಹನಿ ನೀರಾವರಿ ಘಟಕ ಪಡೆಯಲು ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಾಯಿಸಿ ಎಫ್ಐಡಿ ಪಡೆದಿರಬೇಕು.
ರೈತರಿಗೆ ಎಫ್ಐಡಿ ಇದೆಯೋ ಇಲ್ಲವೋ ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರು ತಮ್ಮ ಹೆಸರಿಗೆ ಎಫ್ಐಡಿ ಇದೆಯೋ ಇಲ್ಲವೋ ಎಂಬುದುನ್ನು ಚೆಕ್ ಮಾಡಲು ಈ
https://fruitspmk.karnataka.gov.in/MISReport/GetDetailsByAadhaar.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ಆಧಾರ್ ಕಾರ್ಡ್ ನಮೂದಿಸಿದ ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಿ ಎಫ್ಐಡಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.