Aadharcard ದಿಂದ ಇಕೆವೈಸಿ ಹೀಗೆ ಚೆಕ್ ಮಾಡಿ

Written by Ramlinganna

Published on:

Aadharcard FID ekyc check : ರೈತರು ತಮ್ಮ ಬಳಿಯಿರುವ ಆಧಾರ್ ಕಾರ್ಡ್ ಸಹಾಯದಿಂದ ಏನೇನು ಚೆಕ್ ಮಾಡಬಹುದು. ಅಂದರೆ ಸರ್ಕಾರದ ಯಾವ ಯಾವ ಯೋಜನೆಗಳ ಮಾಹಿತಿ ಚೆಕ್ ಮಾಡಬಹುದು ಎಂಬುದರ ಮಾಹಿತಿ ಇಲ್ಲಿದೆ.

ಯೂಟೂಬ್ ಚಾನೆಲಿಗೆ ಸಬಸ್ಕ್ರೈಬ್ ಮಾಡಿ

ರೈತರು ಮನೆಯಲ್ಲಿಯೇ ಕುಳಿತು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ನಮೂದಿಸಿ ಸರ್ಕಾರದ ಯಾವ ಯಾವ ಯೋಜನೆಗಳಿಂದ ಏನೇನು ಸೌಲಭ್ಯಗಳು ಸಿಗುತ್ತಿವೆ ಎಂಬುದನ್ನು ಕೇವಲ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು.

Aadharcard FID ekyc check ಇಕೆವೈಸಿ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಪಿಎಂ ಕಿಸಾನ್ ಇಕೆವೈಸಿಯನ್ನು ಚೆಕ್ ಮಾಡಬಹುದು. ಹೌದು, ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಓಟಿಪಿ ಬೇಸ್ಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಧಾರ್ ಕಾರ್ಡ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಗೆ ಇಕೆವೈಸಿ ಆಗಿಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಇಕೆವೈಸಿ ಆಗದಿದ್ದರೆ ಕೂಡಲೇ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರದಲ್ಲಿ ಇಕವೈಸಿ ಮಾಡಿಸಿಕೊಳ್ಳಬಹುದು.

ನಿಮ್ಮ ಎಫ್ಐಡಿ ಆಗಿದೆಯೋ ಇಲ್ಲವೋ ಚೆಕ್ ಮಾಡಿ

ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರು ನೋಂದಣಿಯಾಗಿ ಎಫ್ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಫ್ರೂಟ್ಸ್ ಪಿಎಂ ಕಿಸಾನ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಹೆಸರಿಗೆ ಎಫ್ಐಡಿ ಆಗಿದ್ದರೆ ಫ್ರೂಟ್ಸ್ ಐಡಿ ಕಾಣಿಸುತ್ತದೆ. ನಿಮ್ಮ ಹೆಸರು ಕಾಣಿಸುತ್ತದೆ.

ಆಧಾರ್ ಕಾರ್ಡ್ ನಮೂದಿಸಿ ಬೆಳೆ ಹಾನಿ ಪರಿಹಾರ ಚೆಕ್ ಮಾಡುವುದು ಹೇಗೆ?

ರೈತರು ತಮ್ಮ ಆಧಾರ್ ಕಾರ್ಡ್ ನಮೂದಿಸಿ ಬೆಳೆ ಹಾನಿ ಪರಿಹಾರ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈ

https://landrecords.karnataka.gov.in/PariharaPayment/

ಲಿಂಕ್ ಮೇಲೆ ಕ್ಲಿಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಓಪನ್ ಆಗುವ ಪೇಜ್ ನಲ್ಲಿನೀವು ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ಇಯರ್ ನಲ್ಲಿಯೂ 2023-24 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮಆಧಾರ್ ಕಾರ್ಡ್ ಹಾಕಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಪ್ರಸಕ್ತ ಸಾಲಿನ ಬರಗಾಲ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ :  ನಿಮ್ಮ ಜಮೀನಿಗೆ ಮುಟೇಶನ್ ಆಗಿದೆಯೇ? ಇಲ್ಲೇ ಚೆಕ್ ಮಾಡಿ

Leave a Comment