Is their land way : ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಮುಚ್ಚುಹೋಗಿದ್ದರೆ ಯಾರಿಗೆ ಸಂಪರ್ಕಿಸಬೇಕು ಎಂಬುದರ ಮಾಹಿತಿ ಇಲ್ಲಿದೆ.
ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ
ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲಿಕ ಮುಚ್ಚುವುದು ಕಾನೂನುಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚಿಸಿದೆ.
ರಾಜ್ಯದಲ್ಲಿ ರೈತರು ಕೃಷಿ ಸಲಕರಣೆ ಸಾಗಿಸಲು, ಬೆಳೆ ಸಾಗಿಸಲು ಅನ್ಯ ಭೂ ಮಾಲಿಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು ದಾರಿ ಸಮಸ್ಯೆ ಉಂಟಾಗುತ್ತಿದೆ.
ಈ ಬಗ್ಗೆ ಹಲವು ದೂರುಗಳು ಇಲಾಖೆಗೆ ಬಂದಿದ್ದು, ಗ್ರಾಮ ನಕಾಶೆ ಪ್ರಕಾರ ಗುರುತಿಸಿರುವ ಕಾಲುದಾರಿ, ಬಂಡಿದಾರಿಗಳಲ್ಲಿ ರೈತರು ಸಂಚರಿಸಲು ಯಾವುದೇ ಅಡ್ಡಿ ಮಾಡುವಂತಿಲ್ಲ.ಆದರೂ ಕೆಲ ಭೂ ಮಾಲಿಕರು ತಮ್ಮಭೂಮಿ ಮೂಲಕ ಹಾಗೂ ಹಾದು ಹೋಗಬೇಕಿರುವ ರೈತರಿಗೆ ತಿರುಗಾಡಲು ಅಡ್ಡಿಪಡಿಸುತ್ತಿದ್ದಾರೆ.
ರಸ್ತೆ ಗುರುತಿಸಿರುವ ಜಾಗಗಳನನ್ನು ಮುಚ್ಚಿಸುವುದು.ರೈತರು ಬಹುಕಾಲದಿಂದ ಬಳಸುವ ದಾರಿಗಳಲ್ಲಿ ತಿರುಗಾಡಲು ವೈಯಕ್ತಿಕ ದ್ವೇಷದಿಂದ ಅಡ್ಡಿಪಡಿಸುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ ಭೂ ಕಂದಾಯ ನಿಯಮಗಳು 1996 ರ ನಿಯಮ 59 ರ ಅಡಿ ದಾರಿಯ ಹಕ್ಕುಗಳು ಮತ್ತು ಇತರೆ ಅನುಭೋಗದ ಹಕ್ಕುಗಳ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ದಾರಿಬಿಡಲು ಸಂಬಂಧಪಟ್ಟ ಜಮೀನುಗಳವರು ಒಪ್ಪಿದರೆ ಹಕ್ಕುಗಳ ದಾಖಲೆ ರಿಜಿಸ್ಟರ್ನಲ್ಲಿ ನಮೂದಿಸಲು ಅವಕಾಶವಿದೆ.
ಇದನ್ನೂ ಓದಿ : ನಿಮ್ಮ ಜಮೀನಿನ ಮೇಲೆ ಸಾಲವೆಷ್ಟಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ
ಇಂಡಿಯನ್ ಈಸ್ ಮೆಂಟ್ ಆ್ಯಕ್ಟ್ 1882ರ ಪ್ರಕಾರ ಪ್ರತಿ ಜಮೀನಿನ ಮಾಲಿಕರು ಅಥವಾ ಜಮೀನಿನ ಅನುಭವದಲ್ಲಿರುವವರು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ಅವರ ಭೂಮಿಯನ್ನು ಪ್ರವೇಶಿಸುವ ಹಕ್ಕು ಮತ್ತು ವಹಿವಾಟಿನ (ಈಸ್ಮೆಂಟ್) ಹಕ್ಕನ್ನು ಹೊಂದಿದ್ದಾರೆ. ಇದಕ್ಕ ನೆರೆ ಹೊರೆಯ ಜಮೀನಿನವರು ಯಾವುದೇ ಧಕ್ಕೆತರುವಂತಿಲ್ಲ ಎಂದು ವಿವರಿಸಲಾಗಿದೆ.
ಇಂತಹ ಸಮಸ್ಯೆ ಬಗೆಹರಿಸಲು ಆಯಾ ತಾಲೂಕಿನ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು. ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿದಾರಿ ಅಥವಾ ಇತರೆ ರಸ್ತೆಗಳಲ್ಲಿ ಅನ್ಯ ಕೃಷಿ ಬಳಕೆದಾರರು ಬಳಸುವ ದಾರಿಯನ್ನು ಮುಚ್ಚಿರುವ ಪ್ರಕರಣಗಳು ಕಂಡು ಬಂದರೆಕೂಡಲೇ ತೆರವುಗೊಳಿಸಬೇಕು ಎಂದು ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಸ್ಪಷ್ಟಪಡಿಸಿದ್ದಾರೆ.
Is their land way ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಇದೆಯೇ?
ರೈತರು ತಮ್ಮ ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://landrecords.karnataka.gov.in/service3/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು.ಇದಾದ ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮ್ಯಾಪ್ ಟೈಪ್ ನಲ್ಲಿcadastral Maps ಆಯ್ಕೆ ಮಾಡಿಕೊಳ್ಳಬೇಕು ನಂತರ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮ್ಮ ಹೋಬಳಿಯಲ್ಲಿರುವ ಊರುಗಳ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಊರಿನ ಎದುರುಗಡೆ ಕಾಣುವ ಪಿಡಿಎಫ್ ಫೈಲ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ಊರಿನ ಮ್ಯಾಪ್ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಇದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಿಕೊಳ್ಳಬೇಕು. ಒಂದು ವೇಳೆನಿಮ್ಮ ಜಮೀನಿಗೆ ಹೋಗಲು ದಾರಿಯಿದ್ದು ಮುಚ್ಚುಹೋಗಿದ್ದು, ಒತ್ತುವರಿಯಾಗಿದ್ದರೆ ಅರ್ಜಿ ಸಲ್ಲಿಸಿ ದಾರಿ ಮಾಡಿಕೊಳ್ಳಬಹುದು.
ನಿಮ್ಮ ಜಮೀನಿಗೆ ಹೋಗುವ ದಾರಿ ಒತ್ತುವರಿಯಾಗಿದೆಯೇ?
ನಿಮ್ಮ ಜಮೀನಿಗೆ ಹೋಗುವ ದಾರಿ ಮುಚ್ಚುಹೋಗಿದ್ದರೆ ಕೂಡಲೇ ನಿಮ್ಮ ತಾಲೂಕಿನ ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಆಗ ಸಂಬಂಧಿಸಿದ ಅಧಿಕಾರಿಗಳು ನಿಮ್ಮ ಜಮೀನಿಗೆ ಬಂದು ದಾರಿ ಒತ್ತುವರಿಯಾಗಿದ್ದರೆ ಅವರ ಮೇಲೆ ಕ್ರಮಕೊಳ್ಳುತ್ತಾರೆ. ನಂತರ ನಿಮಗೆ ಜಮೀನಿಗೆ ಹೋಗಲು ದಾರಿ ಅನುವು ಮಾಡಿಕೊಡುತ್ತಾರೆ.