rain weather forecast ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ಕಾರಣ ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವು ಕಡೆ ಜೂನ್ 28 ರಂದು ಭಾರಿ ಮಳೆ (Heavy rain) ಯಾಗುವ ಸಾಧ್ಯತೆಯಿದೆ. ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ (orange alert) ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ ಎಂದು ಹವಾಮಾನಿ ಇಲಾಖೆ (weather forecast) ತಿಳಿಸಿದೆ.
ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 30ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮುಂಗಾರು ಆಗಮನದ ನಂತರ ಬಿರುಸುಪಡೆದುಕೊಂಡಿದ್ದ ಮಳೆ ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿತ್ತು. ಆದರೆ, ಮತ್ತೆಮಳೆಯ ಆರ್ಭಟ ಶುರುವಾಗಲಿದ್ದು, ಜುಲೈ 1ರವರೆಗೆ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
rain weather forecast ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದ ಮಳೆಯೂ ಆಗುತ್ತಿದೆ. ಜೂನ್ 28 ರಿಂದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ.
ಇದನ್ನೂ ಓದಿ DBT APP ನಲ್ಲಿ ಚೆಕ್ ಮಾಡಿ ಯಾವ ಯೋಜನೆಯಿಂದ ಹಣ ಜಮೆ?
ರಾಜ್ಯಾದ್ಯಂತ ಭಾನುವಾರ ವ್ಯಾಪಕ ಮಳೆಯಾಗಿದೆ. ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾನುವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. 9 ಗಂಟೆಯ ನಂತರ ಆರಂಭವಾದ ಜಿಟಿಜಿಟಿ ಮಳೆ ನಂತರ ರಭಸವಾಗಿ ಸುರಿಯತೊಡಗಿತು. ದಕ್ಷಿಣ ಕನ್ನಡ, ವಿಜಯಪುರ, ಬೆಂಗಳೂರು ನಗರ,ಬೀದರ್ ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ಮಳೆಯಾಗಿದೆ.
ನೆರೆಯ ರಾಜ್ಯ ತೆಲಂಗಾಣದ ಕರ್ನೂಲ್ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಮಂತ್ರಾಲಯ, ಎಮ್ಮಿಗನೂರ ನಡುವಿನ ರಾಂಪುರ ಹಳ್ಳ ಒಡೆದು ಮಂತ್ರಾಲಯಕ್ಕೆ ಭಾನುವಾರ ಬೆಳಗಿನ ಜಾನ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಳ್ಳುವಂತಾಗಿತ್ತು. ಗ್ರಾಮದಲ್ಲಿನನ ಮನೆಗಳಿಗೆ ನೀರು ನುಗ್ಗಿ ಜನರು ರಾತ್ರಿಯಿಡಿ ಜಾಗರಣೆ ನಡೆಸುವಂತಾಗಿತ್ತು.
ಮಳೆಯ ಮಾಹಿತಿ ಬೇಕೆ?
ನಿಮ್ಮೂರಿನಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದರ ಮಾಹಿತಿ ಬೇಕೇ? ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ. ಹೌದು 92433 45433 ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿದರೆ ಸಾಕು, ನಿಮಗೆ ನಿಮ್ಮೂರಿನ ಸುತ್ತಮುತ್ತ ಯಾವಾಗ ಮಳೆಯಾಗುತ್ತದೆ? ಹವಾಮಾನ ಹೇಗಿರುತ್ತದೆ? ಎಂಬುದರ ಮಾಹಿತಿ ಸಿಗುತ್ತದೆ. ಈ ಉಚಿತವಾಣಿ ದಿನದ 24 ಗಂಟೆ ಕಾರ್ಯನಿರ್ವಹಿಸಲಿದೆ.