free sand policy ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಜನಸಾಮಾನ್ಯರಿಗೆ ಸುಲಭವಾಗಿ ಮರಳು ಲಭಿಸುವುದಕ್ಕಾಗಿ ಹೊಸ ಮರಳು ನೀತಿಯನ್ನು (New sand policy) ಜಾರಿಗೆ ತರಲು ಮುಂದಾಗುತ್ತಿದೆ.
ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಸರ್ಕಾರದ ವತಿಯಿಂದಲೇ ಮರಳು ಮಾರಾಟ ಮಾಡುವುದಕ್ಕಾಗಿ ಹೊಸ ಮರಳು ನೀತಿಯ ಯೋಜನೆಯನ್ನು ಜಾರಿಗೆ ತರಲಾಗುವುದು, ಇದೀಗ ಯೋಜನೆಯ ಪ್ರಸ್ತಾವನೆಯೂ ಸಿದ್ದವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಮುರುಗೇಶ ನಿರಾಣಿ ತಿಳಿಸಿದ್ದಾರೆ.
free sand policy ರಾಜ್ಯದಲ್ಲಿ ಚೀಲಗಳಲ್ಲಿ ಸಿಗಲಿದೆ ಮರಳು
ಅವರು ಬುಧವಾರ ವಿಕಾಸಸೌಧದಲ್ಲಿ ಕಲ್ಲು ಗಣಿಗಾರಿಕೆ ಮತ್ತು ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವೀಡಿಯೋ ಸಂವಾದಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಿದ್ದಾರೆ.
ರಾತ್ರೋರಾತ್ರಿ ಟ್ರ್ಯಾಕ್ಟರ್ ಗಳಲ್ಲಿ, ಟಿಪ್ಪರ್ ಗಳಲ್ಲಿ ಅಕ್ರಮವಾಗಿ ಮರಳು ಸಾಗಿಸುವುದನ್ನು ತಡೆಯುವುದಕ್ಕಾಗಿ ಹಾಗೂ ಜನಸಾಮಾನ್ಯರಿಗೆ ಸುಲಭವಾಗಿ ಮತ್ತು ಕಡಿಮೆ ದರದಲ್ಲಿ ಒದಗಿಸುವುದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು, ಈ ಯೋಜನೆಯಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗಗಳಲ್ಲಿ ಮರಳು ಲಭ್ಯವಾಗಲಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತನ್ನದೆ ಆದ ಸಂಸ್ಥೆಯ ಮೂಲಕ ಗ್ರೇಡಿಂಗ ಮಾಡಿ ಚೀಲಗಳಲ್ಲಿ ಮರಳು ಮಾರಾಟ ಮಾಡಲು ನಿರ್ಧರಿಸಿದೆ. ಜನರಿಗೆ ಮರಳು ಸುಲಭವಾಗಿ ಸಿಗುವಂತೆ ಮಾಡುವದೇ ಈ ಯೋಜನೆಯ ಉದ್ದೇಶವಾಗಿದೆ. ಗ್ರೇಡ್ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಿಸಿ 50 ಕೆಜಿ ಬ್ಯಾಗ್ ನಿಂದ ಹಿಡಿದು ಟನ್ ನಷ್ಟು ಮರಳನ್ನು ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮಾರಾಟ ಮಾಡಲಾಗುವುದು. 50 ಕೆಜಿಯ ಬ್ಯಾಗ್ ಗಳನ್ನು ವಾಹನಗಳಲ್ಲಿ ಸುಲಭವಾಗಿ ಸಾಗಿಸಲು ಅನುಕೂಲವಾಗುತ್ತದೆ. ಇದರಿಂದ ಶೇ. 25-30 ರಷ್ಟು ಮರಳು ಅನುಪಯುಕ್ತವಾಗುವುದು ತಪ್ಪುತ್ತದೆ.
ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗುಗಳಲ್ಲಿ ಮರಳು ಸಂಗ್ರಹಿಸಿಟ್ಟರೆ ವರ್ಷಪೂರ್ತಿ ಬಳಕೆ ಮಾಡಬಹುದು.ಜೊತೆಗೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್ ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಇತರ ಜಿಲ್ಲೆಗಳಲ್ಲಿಯೂ ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಆರಂಭಿಸಬೇಕೆಂದು ಅಧಿಕಾರಿಗಳಿಗೂ ಸೂಚಿಸಿದ್ದಾರೆ.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ರಾಜ್ಯದ ಐದು ಕಡೆ ಮೊದಲು ಪ್ರಾಯೋಗಿಕವಾಗಿ ಈ ಘಟಕಗಳನ್ನು ಆರಂಬಿಸಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್ ಗಳನ್ನು ಸಿದ್ದಪಡಿಸುವಿಕೆ ಹಾಗೂ ಸಾಗಾಣಿಕೆ ಕುರಿತು ತರಬೇತಿ ನೀಡಲಾಗುವುದು ಎಂದಿದ್ದಾರೆ.
5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ (free sand) ಉಚಿತವಾಗಿ ಮರಳನ್ನು ವಿತರಿಸಲಾಗುವುದು ಎಂದಿದ್ದಾರೆ.