Application for hen farming ಹತ್ತು ದಿನಗಳ ಕಾಲ ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ 2024ರ ಜನವರಿ 4 ರಿಂದ 13 ರವರೆಗೆ 10 ದಿನಗಳ ಕಾಲ ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರಸೆಟ್ ನಿರ್ದೇಶಕರು ತಿಳಿಸಿದ್ದಾರೆ.
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿಪಿಎಲ್ , ಅಂತ್ಯೋದಯ , ರೇಶನ್, ಎಮ್.ಜಿಎನ್.ಆರ್.ಇ.ಜಿ.ವಿ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಜನವರಿ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2024 ರ ಜನವರಿ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ಅರ್ಹ,ಅನರ್ಹ ರೈತರ ಪಟ್ಟಿ ಬಿಡುಗಡೆ- ನಿಮ್ಮ ಹೆಸರು ಚೆಕ್ ಮಾಡಿ
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 990013570705 ಗೆ ಸಂಪರ್ಕಿಸಲು ಕೋರಲಾಗಿದೆ.
Application for hen farming ಪಶುಪಾಲನೆ ಕುರಿತು ಮಾಹಿತಿ ಬೇಕೇ?
ಪಶುಪಾಲನೆ ಕುರಿತು ಮಾಹಿತಿ ಕೇಳಲು ಹಾಗೂ ಪಶುಪಾಲನೆ ತರಬೇತಿ ಹಾಗೂ ಪಶುಪಾಲನೆಗೆ ಸರ್ಕಾರದ ವತಿಯಿಂದ ಸಿಗುವ ಸೌಲಭ್ಯಗಳ ಮಾಹಿತಿ ಪಡೆಯಲು ಸರ್ಕಾರ ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ಪಶುಪಾಲಕರ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. 8277 100 200 ಈ ಉಚಿತ ಸಹಾಯವಾಣಿಗೆ ಕರೆ ಮಾಡಿ ನೀವು ಪಶುಪಾಲನೆಯ ಮಾಹಿತಿ ಪಡೆಯಬಹುದು.
ಪಶುಪಾಲನೆ ಕುರಿತು ತರಬೇತಿ ನೀಡಲು ರಾಜ್ಯದಲ್ಲಿ 25 ಕೇಂದ್ರಗಳಿವೆ. ಯಾವ ಜಿಲ್ಲೆಯಲ್ಲಿ ಎಲ್ಲೆಲ್ಲಿ ತರಬೇತಿ ಕೇಂದ್ರಗಳಿವೆ ಎಂಬುದನ್ನು ನೋಡಲು
https://www.ahvs.kar.nic.in/kn-institutionstrg.html
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಯಾವ ಯಾವ ಜಿಲ್ಲೆಯಲ್ಲಿ ತರಬೇತಿ ಕೇಂದ್ರಗಳಿವೆ ಎಂಬ ಪಟ್ಟಿ ಕಾಣಿಸುತ್ತದೆ.
Application for hen farming ಕೋಳಿ ಸಾಕಾಣಿಕೆಯಲ್ಲಿ ಏನೇನು ತರಬೇತಿ ನೀಡಲಾಗುವುದು?
ಕೋಳಿ ಸಾಕಾಣಿಕೆಯಲ್ಲಿ ಮೊದಲ ದಿನ ಕೋಳಿಯ ಮೊಟ್ಟೆ ಮತ್ತು ಮಾಂಸದ ಪೌಷ್ಟಿಕತೆ, ಕೋಳಿ ಸಾಕಾಣಿಕೆಯ ಅನುಕೂಲತೆಗಳು ಹಾಗೂ ಕೋಳಿ ಮರಿಗಳ ನಿರ್ವಹಣೆ ಕುರಿತು ಮಾಹಿತಿ ನೀಡಲಾಗುವುದು.
2ನೇ ದಿನ ಕೋಳಿಗಳ ಮನೆಗಳ ವಿನ್ಯಾೀಸ, ದೇಶಿಯ ಗಿರಿರಾಜ ಮತ್ತು ಸ್ವರ್ಣಧಾರ ಕೋಳಿಗಳು, ಮಾಂಸದ ಕೋಳಿಗಳ ಸಾಕಾಣಿಕೆಯಲ್ಲಿ ಸುಧಾರಿತ ಪದ್ಧತಿಗಳು, ಕೋಳಿಗಳ ಸಾಂಕ್ರಾಮಿಕ ರೋಗಗಳು ಮತ್ತು ಅವುಗಳ ಪ್ರತಿಬಂಧನಾ ಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು.
ಇದನ್ನೂ ಓದಿ : ಆಧಾರ್ ನಂಬರ್ ಹಾಕಿ ಮೊಬೈಲ್ ನಲ್ಲಿ ಸಾಲಮನ್ನಾ ಸ್ಟೇಟಸ್ ಚೆಕ್ ಮಾಡಿ
3ನೇ ದಿನ ಕುಕ್ಕುಟೋಧ್ಯಮದ ಸಮಗ್ರ ಪರಿಚಯ ಮಾರುಕಟ್ಟೆ ವ್ಯವಸ್ಥೆ ಹಾಗೂ ಒಪ್ಪಂದ ಕೋಳಿ ಸಾಕಾಣಿಕೆ ಪದ್ಧತಿ ಕುರಿತು ತರಬೇತಿ ನೀಡಲಾಗುವುದು.
ರಾಜ್ಯದಲ್ಲಿರುವ ಗ್ರಾಮೀಣ ರೈತರಿಗೆ ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಕ್ಷೇತ್ರಗಳಲ್ಲಿ ನಿರಂತರವಾಗಿ ತರಬೇತಿ ನೀಡಲಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ 25 ತರಬೇತಿ ಕೇಂದ್ರಗಳಿರುತ್ತವೆ ಕೂಡಲೇ ಅರ್ಜಿ ಸಲ್ಲಿಸಿ ಕೋಳಿ ಸಾಕಾಣಿಕೆ ತರಬೇತಿಯ ಸೌಲಭ್ಯ ಪಡೆದುಕೊಳ್ಳಲು ಕೋರಲಾಗಿದೆ.