Application free chick distribution ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ 20 ಗಿರಿರಾಜ ಹಾಗೂ ನಾಟಿಕೋಳಿ ಮರಿಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತದ ವತಿಯಿಂದ ಗಿರಿರಾಜ / ನಾಟಿ ಕೋಳಿ ಮರಿಗಳನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮಹಿಳಾ ಸ್ವ ಸಹಾಯ ಸಂಘದ 85 ಸದಸ್ಯರುಗಳಿಗೆ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಯ್ಕೆಯಾದ ಮಹಿಳಾ ಫಲಾನುಭವಿಗಳಿಗೆ 5 ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು. ಈ ಯೋಜನೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಮೀಸಲಾತಿ ಆದೇಶಗಳನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಮತ್ತು ಅಂಗವಿಕಲರನ್ನು ಪರಿಗಣಿಸಲಾಗುವುದು. ಫಲಾನುಭವಿಗಳನ್ನು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಪಶು ಆಸ್ಪತ್ರೆ, ಕುಣಿಗಲ್ ಇವರಿಗೆ ದ್ವಿ ಪ್ರತಿಯಲ್ಲಿ ಜನವರಿ 20 ರೊಳಗೆ ಸಲ್ಲಿಸಬೇಕೆಂದು ಕುಣಿಗಲ್ ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ, ಡಾ. ದಿವಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Application free chick distribution ಪಶು ಪಾಲನೆ ಕುರಿತು ಮಾಹಿತಿ ಬೇಕೆ?
ಕುರಿ, ಮೇಕೆ, ಮೊಲ, ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿಯಿದೆಯೇ? ಹೈನುಗಾರಿಕೆಯಲ್ಲಿಯೂ ಆಸಕ್ತಿಯಿದ್ದವರಿಗೆ ಸರ್ಕಾರವು ಪಶುಪಾಲನೆ ಕುರಿತಂತೆ ಮಾಹಿತಿ ನೀಡಲು ಉಚಿತ ಸಹಾಯವಾಣಿಯನ್ನು ಆರಂಭಿಸಿದೆ. ಹೌದು, ರೈತರು ಪ್ರಾಣಿ ಕಲ್ಯಾಣ ಸಹಾಯವಾಣಿ ನಂಬರ್ 8277100200 ಗೆ ಕರೆ ಮಾಡಿದರೆ ಸಾಕು, ನಿಮಗೆ ಕುಳಿತಲ್ಲಿಯೇ ಪಶುಪಾಲನೆಯ ಮಾಹಿತಿ ಸಿಗಲಿದೆ.ಈ ಉಚಿತ ಸಹಾಯವಾಣಿ ದಿನದ 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುತ್ತದೆ. ಹಾಗಾಗಿ ರೈತರು ಯಾವಾಗ ಸಮಯ ಅನುಕೂಲವಾಗುತ್ತದೆಯೋ ಆಗ ಕರೆ ಮಾಡಿ ಮಾಹಿತಿ ಪಡೆಯಬಹುದು.
ಇದನ್ನೂ ಓದಿ : ನಿಮ್ಮ ಜಮೀನಿನ ಒರಿಜಿನಲ್ ಟಿಪ್ಪಣಿ ಮೊಬೈಲ್ ನಲ್ಲೇ ಚೆಕ್ ಮಾಡಿ
ಪಶುಪಾಲನೆಯಲ್ಲಿ ಪಶುಗಳಿಗೆ ಬರುವ ರೋಗಗಳು, ರೋಗಗಳ ನಿಯಂತ್ರಣ ಕ್ರಮಗಳ ಕುರಿತಂತೆ ಉಚಿತವಾಗಿ ಮಾಹಿತಿ ನೀಡಲಾಗುವುದು..
ಕುರಿ ಮತ್ತು ಮೇಕೆ ಸಾಕಾಣಿಕೆಗೆ ಉಚಿತ ತರಬೇತಿ ನೀಡಲು ಅರ್ಜಿ ಆಹ್ವಾನ
ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ತರಬೇತಿ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇದೇ ತಿಂಗಳ ಡಿಸೆಂಬರ್ 18 ರಿಂದ 27 ರವರೆಗೆ 10 ದಿನಗಳ ಕಾಲ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ ಆರ್.ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ : ಬರ ಪರಿಹಾರ ಯಾವ ಬೆಳೆಗೆ ಯಾರಿಗೆ ಎಷ್ಟು ಜಮೆ? ಇಲ್ಲಿದೆ ಮಾಹಿತಿ
ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವಯೋಮಾನದೊಳಗಿನ ಬಿಪಿಎಲ್, ಅಂತ್ಯೋದಯ ರೇಶನ್ ಕಾರ್ಡ್, ಎಮ್.ಜಿ.ಎನ್.ಆರ್.ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಡಿಸೆಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿಇದೇ ಡಿಸೆಂಬರ್16 ರಿಂದ ಮಧ್ಯಾಹ್ನ3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಹಾಜರಾಗದಿದ್ದರೆ ತರಬೇತಿ ನೀಡಲಾಗುವುದಿಲ್ಲ..
ಆಸಕ್ತ ರೈತರು ಪಶುಪಾಲನೆ ಕುರಿತಂತೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, ಮೊಬೈಲ್ ಸಂಖ್ಯೆ 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.