Conditions for drought compensation ಬರಗಾಲ ಪರಿಹಾರ ಹಣ ಯಾವ ರೈತರಿಗೆ ಜಮೆಯಾಗುತ್ತದೆ? ಯಾವ ರೈತರಿಗೆ ಎಷ್ಟು ಜಮೆಯಾಗುತ್ತದೆ? ಬರ ಪರಿಹಾರ ಜಮೆಯಾಗಲು ಯಾವ ಷರತ್ತುಗಳಿವೆ ಎಂಬುದರ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ 202-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಾಗೂ ಬರದಿಂದ ಉಂಟಾದ ಬೆಳೆ ಹಾನಿಗೆ ಘೋಷಿಸಸಲಾಗಿದ್ದ ಗರಿಷ್ಠ 2000 ರೂಪಾಯಿವರೆಗಿನ ತಾತ್ಕಾಲಿಕ ಬೆಳೆ ಪರಿಹಾರವನ್ನು ಅರ್ಹ ರೈತರಿಗೆ ನೀಡಲು ರಾಜ್ಯ ಸರ್ಕಾರ ಶುಕ್ರವಾರ 105 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರದಿಂದ ಈ ವರೆಗೂ ರಾಜ್ಯಕ್ಕೆ ಬೆಳೆ ಹಾನಿ ಪರಿಹಾರದ ಅನುದಾನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಸದ್ಯಕ್ಕೆ ಅರ್ಹ ರೈತರಿಗೆ ಗರಿಷ್ಠ 2000 ರೂಪಾಯಿವರೆಗೆ ಪಾವತಿಸಲು ಎಸ್.ಡಿ.ಆರ್.ಎಫ್ ಅಡಿ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರದ ಈರವರೆಗೂ ರಾಜ್ಯಕ್ಕೆ ಬೆಳೆ ಹಾನಿ ಪರಿಹಾರದ ಅನುದಾನ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಬೆಳೆ ಹಾನಿ ಪರಿಹಾರದ ಮೊದಲನೇ ಕಂತಾಗಿ ಅಥವಾ ಸದ್ಯಕ್ಕೆ ಅರ್ಹ ರೈತರಿಗೆ ಗರಿಷ್ಠ 2000 ರೂಪಾಯಿಯವರೆಗೆ ಪಾವತಿಸಲು ಎಸ್.ಡಿ.ಆರ್.ಎಫ್ ಅಡಿ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪರಿಹಾರ ತಲುಪಿಸಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕೆಂದು ಸೂಚಿಸಿದೆ.
ಯಾವ ಬೆಳೆಗೆ ಎಷ್ಟು ಪರಿಹಾರ ಹಣ ಜಮೆಯಾಗಲಿದೆ?
ಕೇಂದ್ರ ಸರ್ಕಾರದ ರಾಷ್ಟ್ರೀಯ ಪ್ರಕೃತಿ ವಿಕೋಪ ಪರಿಹಾರ ನಿಧಿ (ಎನ್.ಡಿ.ಆರ್.ಎಫ್) ಮಾರ್ಗಸೂಚಿ ಪ್ರಕಾರ ಮಳೆಯಾಶ್ರಿತ ಬೆಳೆಗೆ ಪ್ರತಿ ಹೆಕ್ಟೇರಿಗೆ 8500 ರೂಪಾಯಿ ನೀಡಲಾಗುವುದು. ನೀರಾವರಿ ಬೆಳೆಗೆ 17000 ರೂಪಾಯಿ ಪರಿಹಾರ ನೀಡಲಾಗುವುದು. ಅದೇ ರೀತಿ ಬಹುವಾರ್ಷಿಕ ಬೆಳೆಗೆ 22500 ರೂಪಾಯಿ ಪರಿಹಾರ ನೀಡಲು ನಿಗದಿ ಮಾಡಲಾಗಿದೆ. ಆ ಪ್ರಕಾರ ಕೇಂದ್ರದಿಂದ ಬೆಳೆ ಹಾನಿ ಪರಿಹಾರ ಅನುದಾನ ಬಂದ ಬಳಿಕ ಹೆಚ್ಚುವರಿ ಮೊತ್ತಕ್ಕೆ ಅರ್ಹರಾಗಿರುವ ರೈತರಿಗೆ ಹೆಚ್ಚುವರಿ ಬೆಳೆ ಹಾನಿ ಪರಿಹಾರ ಬಿಡುಗಡೆಗೊಳಿಸಲಾಗುವುದು ಎಂದು ಕೂಡ ಸರ್ಕಾರ ಭರವಸೆ ನೀಡಿದೆ.
Conditions for drought compensation ಬರ ಪರಿಹಾರ ನೀಡಲು ಯಾವ ಯಾವ ಷರತ್ತುಗಳಿವೆ?
ಬೆಳೆ ಹಾನಿ ಪರಿಹಾರ ನೀಡಲು ಯಾವುದೇ ರೈತರಿಂದ ಅರ್ಜಿ ಆಹ್ವಾನಿಸುಂತಿಲ್ಲ. ಬದಲಿಗೆ ಇ ಆಡಳಿತ ಇಲಾಖೆಯ ಫ್ರೂಟ್ಸ್ (ಎಫ್.ಆರ್.ಐ.ಟಿ.ಎಸ್) ದತ್ತಾಂಶದ ಮತ್ತು ಕಂದಾಯ ಇಲಾಖೆಯ 2023ನೇ ಸಾಲಿನ ಮುಂಗಾರು ಋತುವಿನ ಬೆಳೆ ಸಮೀಕ್ಷೆ ದತ್ತಾಂಶದ ಅನುಸಾರ ಭೂಮಿ ಸೆಲ್ ನವರು ಪರಿಹಾರ ವಿತರಿಸಬೇಕು.
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಐಡಿಯೊಂದಿಗೆ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಅರ್ಹ ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಪರಿಹಾರ ಪಾವತಿಸಬೇಕು.
ಇದನ್ನೂ ಓದಿ : ನೀವು ಯಾವ ವಾರ ಹುಟ್ಟಿದ್ದೀರಿ? ಮೊಬೈಲ್ ನಲ್ಲೇ ಚೆಕ್ ಮಾಡಿ
ಪರಿಹಾರವನ್ನು ಆರೋಹಣ ಮಾದರಿಯಲ್ಲಿ ಅಂದರೆ ಅತೀ ಕಡಿಮೆ ಭೂಮಿ ಹೊಂದಿರುವ ರೈತನಿಂದ ಪ್ರಾರಂಭಿಸಿ ಅತೀ ಹೆಚ್ಚು ಭೂಮಿಯನ್ನು ಹೊಂದಿರುವ ಅರ್ಹ ರೈತನವರೆಗೆ ಪಾವತಿಸಬೇಕು. ಇದರಲ್ಲಿಯೂ ಮೊದಲು ಮಳೆಯಾಶ್ರಿತ ಬೆಳೆ, ನಂತರ ನೀರಾವರಿ ಬೆಳೆ, ತದನಂತರ ಬಹು ವಾರ್ಷಿಕ ಬೆಳೆಗೆ ಪರಿಹಾರ ನೀಡಬೇಕು. ಕೃಷಿಯೇತರ ಉದ್ದೇಶಕ್ಕಾಗಿ ಕೃಷಿ ಜಮೀನು ಭೂ ಪರಿವರ್ತನೆಗಾಗಿ ಬೆಳೆ ಸಮೀಕ್ಷೆಯಲ್ಲಿ ಸೇರ್ಪಡೆಯಾದರೂ ಕೂಡ ಇಂತಹ ಪ್ರಕರಣಗಳನ್ನು ಭೂಮಿ ಸೆಲ್ ರವರು ಬೆಳೆಹಾನಿ ಪರಿಹಾರಕ್ಕೆ ಪರಿಗಣಿಸಕೂಡದು ಎಂಬುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಲಾಗಿದೆ.
ಬರ ಪರಿಹಾರ ಜಮೆಯ ಸ್ಟೇಟಸ್ ಎಲ್ಲಿ ಚೆಕ್ ಮಾಡಬೇಕು?
ಬರ ಪರಿಹಾರ ಜಮೆಯ ಸ್ಟೇಟಸ್ ಚೆಕ್ ಮಾಡಲು ಈ
https://landrecords.karnataka.gov.in/PariharaPayment/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಆಧಾರ್ ಸಂಖ್ಯೆ ಆಯ್ಕೆ ಮಾಡಿ, ಸೆಲೆಕ್ಟ್ ಕಾಲಾಮಿಟಿ ಟೈಪ್ ನಲ್ಲಿ Drought ಆಯ್ಕೆ ಮಾಡಿಕೊಳ್ಳಬೇಕು. ನಂತರ 2023-24 ಆಯ್ಕೆ ಮಾಡಬೇಕು. ನಂತರ ಆಧಾರ್ ಕಾರ್ಡ್ ನಮೂದಿಸಬೇಕು. ಅಲ್ಲಿ ಕಾಣುವ ಕ್ಯಾಪ್ಚ್ಯಾಕೋಡ್ ಹಾಕಿ ವಿವರಗಳನ್ನು ಪಡೆಯಲು ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.