Application for poly house ಪಾಲಿ ಹೌಸ್ / ನೆರಳು ಮನೆ ಕಾರ್ಯಕ್ರಮದಡಿಯಲ್ಲಿ ಪಾಲಿ ಹೌಸ್ ನಿರ್ಮಾಣ ಮಾಡಲು ಫಲಾನುಭವಿಗಳನ್ನು ಆಯ್ಕೆ ಮಾಡಿ ಸಬ್ಸಿಡಿ ಹಾಗೂ ಸೌಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಭಾರತ ಸಂವಿಧಾನ ಅನುಚ್ಛೇದ 275 (1) ರಡಿ ಹಾಗೂ ಗಿರಿಜನ ಉಪಯೋಜನೆಗೆ ವಿಶೇಷ ಕೇಂದ್ರೀಯ ನೆರವು (SCA to TSS) ಯೋಜನೆಯಡಿ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ಪಾಲಿ / ನೆರಳು ಮನೆ ಕಾರ್ಯಕ್ರಮದಡಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಫಲಾನುಭವಿಗಳ ಅರ್ಜಿಗಳನ್ನು ಪರಿಶೀಲಿಸಲಾಗಿ ಸದರಿ ಅರ್ಜಿದಾರರು ಈ ಹಿಂದೆ ವಿವಿಧ ಇಲಾಖೆಗಳಲ್ಲಿ ಸಾಲ ಸೌಲಭ್ಯ ಯೋಜನೆಯಡಿ ಫಲಾನುಭವಿಗಳಾಗಿದ್ದುಹಾಗೂ ಅಪೂರ್ಣ ದಾಖಲೆಗಳನ್ನು ಸಲ್ಲಿಸಿರುವುದರಿಂದ ಪುನಃ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Application for poly house ಪಾಲಿಹೌಸ್ ನಿರ್ಮಾಣಕ್ಕೆ ಏನೇನು ಬೇಕು?
ಫಲಾನುಭವಿಯು ಪರಿಶಿಷ್ಟ ಪಂಗಡಕ್ಕೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ನೀರಾವರಿ ಸೌಲಭ್ಯ ಹೊಂದಿರಬೇಕು. ವಾರ್ಷಿಕ ಆದಾಯ 1.50 ಲಕ್ಷ ರೂಪಾಯಿ ರೊಳಗಿರಬೇಕು. ವಿದ್ಯುತ್ ಮಾರ್ಗ / ಸಂಪರ್ಕ ಹೊಂದಿರುವ ಕುರಿತ ಮಾಹಿತಿ, ಫಲಾನುಭವಿಯ ಹೆಸರಿನಲ್ಲಿರುವ ಪ್ರಸಕ್ತ ಸಾಲಿನ ಪಹಣಿ ಹೊಂದಿರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು.
ಇದನ್ನೂ ಓದಿ : ನಿಮ್ಮ ಎಲ್ಐಸಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ
ಫಲಾನುಭವಿಯು ಜಂಟಿ ಖಾತೆ ಹೊಂದಿದಲ್ಲಿ ಕುಟುಂಬದವರ ಒಪ್ಪಿಗೆ ಪತ್ರ / ಇತರೆ ಖಾತೆದಾರರು ಎನ್ಓಸಿ ಪಡೆದಿರಬೇಕು. ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ / ಮುಚ್ಚಳಿಕೆ ಪತ್ರ ನೀಡಬೇಕು. ಸದರಿ ಅರ್ಜಿದಾರರಾಗಲಿ ಕುಟುಂಬದ ಸದಸ್ಯರಾಗಲಿ ಯಾವುದೇ ಇಲಾಖೆ / ನಿಗಮದಿಂದ ಯಾವುದೇ ಯೋಜನೆಯಡಿಈ ಹಿಂದೆ ಸೌಲಭ್ಯ ಪಡೆದಿರಬಾರದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕ ಜನವರಿ 16 ರ ಸಂಜೆ 5.30 ಗಂಟೆಯೊಳಗಾಗಿ ಅವಶ್ಯಕ ದಾಖಲೆಗಳೊಂದಿಗೆ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಿನಿ ವಿಧಾನಸೌಧ ಎದುರುಗಡೆ ಕಲಬುರಗಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472 278621 ಹಾಗೂ ಮೊಬೈಲ್ ಸಂಖ್ಯೆ 92433 32555 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಇದನ್ನೂ ಓದಿ : ಪಿಎಂ ಕಿಸಾನ್ ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಚೆಕ್ ಮಾಡಿ
ಪಾಲಿಹೌಸ್ ನಿರ್ಮಾಣಕ್ಕಾಗಿ ಸರ್ಕಾರದ ವತಿಯಿಂದ ನೀಡಲಾಗುವ ಸೌಲಭ್ಯವನ್ನು ರೈತರು ಪಡೆದುಕೊಳ್ಳಬೇಕೆಂದು ಸರ್ಕಾರದ ವತಿಯಿಂದ ಆಗಾಗ ಅರ್ಜಿ ಆಹ್ವಾನಿಸಲಾಗುವುದು. ಯಾವಾಗ ಅರ್ಜಿ ಆಹ್ವಾನಿಸಲಾಗುತ್ತದೆಯೋ ಅಂದು ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬಹುದು. ಪಾಲಿಹೌಸ್ ನಿರ್ಮಾಣಕ್ಕೆ ಎಸ್.ಸಿ ಎಸ್.ಟಿ ರೈತರಿಗೆ ಹೆಚ್ಚಿನ ಸಬ್ಸಿಡಿ ನೀಡಲಾಗುವುದು. ಇತರ ವರ್ಗದವರಿಗೆ ಸ್ವಲ್ಪ ಕಡಿಮೆ ಸಬ್ಸಿಡಿ ಇರುತ್ತದೆ. ಒಟ್ಟಿನಲ್ಲಿ ಎಲ್ಲಾ ರೈತರಿಗೂ ಸಬ್ಸಿಡಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೂ ಭೇಟಿ ನೀಡಿ ಅರ್ಜಿಯನ್ನು ಪಡೆದುಕೊಳ್ಳಬಹುದು. ಅರ್ಜಿಯೊಂದಿಗೆ ಯಾವ ಯಾವ ದಾಖಲೆಗಳನ್ನು ಸಲ್ಲಿಸಬೇಕೆಂದು ಸರಿಯಾದ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬೇಕು. ಏಕೆಂದರೆ ಈ ಹಿಂದೆ ಅರ್ಜಿಗಳನ್ನುಸರಿಯಾಗಿ ಸಲ್ಲಿಸದೆ ಇರುವುದರಿಂದ ಹಲವಾರು ರೈತರ ಅರ್ಜಿಗಳು ತಿರಸ್ಕೃತವಾಗಿದೆ.
ಕಲಬುರಗಿ ಜಿಲ್ಲೆಯಂತೆ ಇತರ ಜಿಲ್ಲೆಗಳ ರೈತರಿಂದಲೂ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹಾಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ವಿಚಾರಿಸಿಕೊಳ್ಳಬಹುದು.