ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

Written by By: janajagran

Updated on:

heavy rain ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂನ್ 27 ರ ಬಳಿಕ ಮುಂಗಾರು ಮತ್ತೆ ಅಬ್ಬರಿಸಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನದಲ್ಲಿ ಭಾರೀ (Heavy rain) ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

heavy rain ಯಾವ ದಿನಾಂಕದವರೆಗೆ ಮಳೆಯಾಗಲಿದೆ?

ಕಳೆದ ಕೆಲವು ದಿನಗಳಿಂದ ಶಾಂತವಾಗಿದ್ದ ಮಳೆ ಮತ್ತೆ ಪ್ರಾರಂಭವಾಗಿದ್ದು, ಜೂನ್ 30ರವರೆಗೆ ಕರಾವಳಿ ಜಿಲ್ಲೆಗಳು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ..

ಮುಂಗಾರು ಆಗಮನದ ನಂತರ ಬಿರುಸುಪಡೆದುಕೊಂಡಿದ್ದ ಮಳೆ  ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿತ್ತು. ಆದರೆ, ಮತ್ತೆಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆಯಿರುವುದರಿಂದ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: ನಿಮ್ಮೂರಿನಲ್ಲಿ ಮಳೆಯಾಗುವ ಮುನ್ಸೂಚನೆ ನೀಡುತ್ತದೆ ಕೃಷಿ ಇಲಾಖೆಯ ಪ್ರೂಟ್ಸ್ ತಂತ್ರಾಂಶ, ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದ ಮಳೆಯೂ ಆಗುತ್ತಿದೆ. ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ..
ಜೂನ್ 28 ರಿಂದ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಚಾಮರಾಜನಗರ, ಮಂಡ್ಯ, ಮೈಸೂರು, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೇಘದೂತ್ ಆ್ಯಪ್ ಡೌನ್ಲೋಡ್ ಮಾಡಿ ನಿಮ್ಮ ಮೊಬೈಲ್ ನಲ್ಲೇ ಮಳೆಯ ಮಾಹಿತಿ ಪಡೆಯಿರಿ

ಮೇಘದೂತ್ ಆ್ಯಪ್ ಇನಸ್ಲಾಟ್ ಮಾಡಿಕೊಳ್ಳಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಿ ಆ್ಯಪ್ ಇನಸ್ಟಾಲ್ ಮಾಡಿಕೊಳ್ಳಬಹುದು. ಇದು ರೈತರಿಗೆ ಮಳೆಯ ಮಾಹಿತಿಯೊಂದಿಗೆ ಆ ಭಾಗದಲ್ಲಿ ಯಾವ ಬೆಳೆ ಸೂಕ್ತ ಎಂಬ ಮಾಹಿತಿಯನ್ನೂ ನೀಡುತ್ತದೆ.

ನಿಮ್ಮೂರಿನಲ್ಲಿ ಮಳೆಯ ಮಾಹಿತಿ ಮೊಬೈಲ್ ನಲ್ಲೇ ಪಡೆಯಿರಿ     

ಸಾರ್ವಜನಿಕರು ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬದನ್ನು ಈಗ ಮೊಬೈಲ್ ನಲ್ಲೇ ಮಾಹಿತಿ ಪಡೆಯಬಹುದು. ಹೌದು,  ರಾಜ್ಯ ಸರ್ಕಾರದ ವರುಣಮಿತ್ರ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಮ್ಮೂರಿನಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬುದನ್ನು ಮಾಹಿತಿ ಪಡೆಯಬಹುದು. ಈ ವರುಣಮಿತ್ರಿ ಉಚಿತ ಸಹಾಯವಾಣಿ 9243345433 ದಿನದ 24 ಗಂಟೆ ಕಾರ್ಯ ನಿರ್ವಹಿಸುತ್ತದೆ. ಈ ನಂಬರಿಗೆ ಕರೆ ಮಾಡಿ ತಮ್ಮೂರಿನ ಸುತ್ತಮುತ್ತಲಿನ ಹವಾಮಾನ, ಗಾಳಿಯ ವೇಗ, ಗಾಳಿಯ ದಿಕ್ಕು ಸೇರಿದಂತೆ ಹವಾಮಾನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಪಡೆಯಬಹುದು. ಹೌದು, ಇದಕ್ಕಾಗಿ ಸಾರ್ವಜನಿಕರು ರೈತರು ಯಾವುದೇ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಇದು ಸಂಪೂರ್ಣವಾಗಿ ರೈತರಿಗಾಗಿ ಉಚಿತವಾಗಿದೆ. ಒಮ್ಮೆ ಕರೆ ಮಾಡಿ ನೋಡಿ. ನಿಮಗೆ ಸರಿಯಾದ ಮಾಹಿತಿ ಸಿಗುತ್ತೋ ಇಲ್ಲವೋ ಎಂಬುದು ಒಂದೇ ಕ್ಷಣದಲ್ಲಿ ಗೊತ್ತಾಗುತ್ತದೆ.

Leave a Comment