toilet construction subsidy ಕೇಂದ್ರ ಸರ್ಕಾರದ ಪುರಸ್ಕೃತ ಸ್ವಚ್ಛ ಭಾರತ ಅಭಿಯಾನದ 2.0 ಯೋಜನೆ ಅಡಿಯಲ್ಲಿ ಪಟ್ಟಣ ಪಂಚಾಯತಿಗೆ ಸುಮಾರು 50 ವೈಯಕ್ತಿಕ ಶೌಚಾಲಯಗಳ ನಿರ್ಮಾಣ ಮಾಡಲು ಮಂಜೂರಾಗಿದೆ.
ಹೌದು, ಈ ಶೌಚಾಲಯಗಳ ನಿರ್ಮಾಣಕ್ಕೆ ವಿಜಯಪುರ ಜಿಲ್ಲೆಯ ದೇವನ ಹಿಪ್ಪರಗಿ ತಾಲೂಕಿನ ಅರ್ಹ ಫಲಾನುಭವಿಗಳಿಂದ ಅರ್ಜಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಜನವರಿ 25 ಕೊನೆಯ ದಿನವಾಗಿದೆ.
ಅರ್ಜಿ ಫಾರಂಗಳನ್ನು ಪಟ್ಟಣ ಪಂಚಾಯತಿ ಆರೋಗ್ಯ ಶಾಖೆಯಲ್ಲಿ ಲಭ್ಯವಿದ್ದು, ಸೂಕ್ತ ದಾಖಲೆಗಳೊಂದಿಗೆ ಹಾಗೂ ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
toilet construction subsidy ಹಾವೇರಿ ಜಿಲ್ಲೆಯವರಿಂದ ಸಹ ಅರ್ಜಿ ಆಹ್ವಾನ
ಹಾವೇರಿ ನಗರ ಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಲು ಜನವರಿ 20 ರ ವರೆಗೆ ವಿಸ್ತರಿಸಲಾಗಿದೆ. ವೈಯಕ್ತಿಕ ಶೌಚಾಲಯ ಹೊಂದದೆ ಇರುವ ಹಾಗೂ ಈ ಹಿಂದೆ ಶೌಚಾಲಯ ನಿರ್ಮಾಣಕ್ಕೆ ನಗರಸಭೆಯಿಂದ ಯಾವುದೇ ಅನುದಾನ ಪಡೆದ ಅಭ್ಯರ್ಥಿಗಳು ತಮ್ಮ ಸ್ವಂತ ಶೌಚಾಲಯ ನಿರ್ಮಾಣಕ್ಕೆ ಧನ ಸಹಾಯ ಸೌಲಭ್ಯಕ್ಕೆ ಜನವರಿ 20 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ಆಸಕ್ತರು ಹಾವೇರಿ ನಗರಸಭೆ ಕಚೇರಿಗೆ ಅರ್ಹ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗೆ ನಗರಸಭೆ ಕಚೇರಿ ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೆಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ
ಸಮರ್ಥ ಫೌಂಡೇಶನ್ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ 17-42 ವರ್ಷ ವಯಸ್ಸಿನ ಎಲ್ಲಾ ವರ್ಗದ ನಿರುದ್ಯೋಗಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ಮತ್ತು ಸೀರೆಗೆ ಕುಚ್ಚು ಹಾಕುವ ತರಬೇತಿಯನ್ನು ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇದಕ್ಕೆ ಯಾವುದೇ ವಿದ್ಯಾಭ್ಯಾಸದ ನಿರ್ಬಂಧವಿಲ್ಲ. 17-42 ವರ್ಷದ 10ನೇ ತರಗಗತಿ ಪಾಸಾದ ಎಸ್ಸಿ, ಎಸ್ಟಿ ಮಹಿಳೆಯರಿಗೆ ಕಂಪ್ಯೂಟರ್, ಟೈಲರಿಂಗ್, ಸೀರೆಗೆ ಕುಚ್ಚು ಹಾಕುವ ಮೂರು ತರಬೇತಿಗಳನ್ನು ಉಚಿತವಾಗಿ ನೀಡಲಾಗುವುದು. ತರಬೇತಿಯ ಅವಧಿ 2 ತಿಂಗಳು, ತರಬೇತಿಯನ್ನು ಮುಗಿಸಿದವರಿಗೆ ಪ್ರಯಾಣ ಪತ್ರವನ್ನು ನೀಡಲಾಗುವುದು.
ಇದನ್ನೂ ಓದಿ : ನನ್ನ ಖಾತೆಗೆ ಬೆಳೆ ಹಾನಿ ಪರಿಹಾರ ಜಮೆ: ನಿಮಗೆಷ್ಟು ಜಮೆ? ಇಲ್ಲೇ ಚೆಕ್ ಮಾಡಿ
ಉದ್ಯೋಗ ಮಾಡಲು ಮಾರ್ಗದರ್ಶನ ನೀಡಲಾಗುವುದು. ಆಸಕ್ತರು ಈ ಕೂಡಲೇ ಸಮರ್ಥ ಫೌಂಡೇಶನ್, ಎಂ.ಜಿ. ರೋಡ್ ತುಮಕೂರು, ದೂರವಾಣಿ ಸಂಖ್ಯೆ 9986824210ಗೆ ಸಂಪರ್ಕಿಸಲು ಕೋರಲಾಗಿದೆ.
ಸರ್ಕಾರದ ವತಿಯಿಂದ ಅರ್ಜಿ ಕರೆಯುವಾಗ ಆಯಾ ದಿನಗಳಲ್ಲಿಯೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು. ತಡವಾಗಿ ಅರ್ಜಿ ಸಲ್ಲಿಸಿದರೆ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಹಾಗಾಗಿ ಆಸಕ್ತ ರೈತರು ಆಾ ಜಿಲ್ಲೆಯಲ್ಲಿ ಆಯಾ ದಿನಗಳಲ್ಲಿ ಕೂಡಲೇ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಲು ಕೋರಲಾಗಿದೆ.