EKYC : ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ರೈತರು ಇನ್ನೂ ಮುಂದೆ ಇಕೆವೈಸಿ ಮಾಡಿಸಿದರೆ ಮಾತ್ರ ಅವರಿಗೆ ಯೋಜನೆಯ ಮುಂದಿನ ಕಂತಿನ ಹಣ ಜಮೆಯಾಗಲಿದೆ.
ಹೌದು, ಪಿಎಂ ಕಿಸಾನ್ ಯೋಜನೆ ಆರಂಭವಾಗಿ ಇಲ್ಲಿಗೆ ಐದು ವರ್ಷ ಅವಧಿ ಮುಗಿದಿದೆ. 2018-19ನೇ ಸಾಲಿನಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಆರಂಭಿಸಲಾಯಿತು.
ಆರಂಭದಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಸಂಖ್ಯೆ ತುಂಬಾ ಕಡಿಮೆ ಇತ್ತು. ನಂತರದ ದಿನಗಳಲ್ಲಿ ಜನರಲ್ಲಿ ಯೋಜನೆಯ ಕುರಿತು ಜಾಗೃತಿ ಮೂಡತೊಡಗಿತು. ಹಾಗಾಗಿ 2019-20 ರಿಂದ 2020-21 ನೇ ಸಾಲಿನಲ್ಲಿ ಅತೀ ಹೆಚ್ಚು ರೈತರು ಪಿಎಂ ಕಿಸಾನ್ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡರು. ಆರಂಭದಲ್ಲಿ ಯಾವುದೇ ಷರತ್ತಿಲ್ಲದೆ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದವರೆಲ್ಲರಿಗೂ ಹಣ ಜಮೆ ಮಾಡಲಾಗುತ್ತಿತ್ತು.
ಪಿಎಂ ಕಿಸಾನ್ ಯೋಜನೆಗೆ EKYC ಏಕೆ ಕಡ್ಡಾಯಗೊಳಿಸಲಾಯಿತು?
ಪಿಎಂ ಕಿಸಾನ್ ಯೋಜನೆಗೆ ಅರ್ಹತೆ ಇಲ್ಲದ ರೈತರು ಸಹ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಸರ್ಕಾರಿ ನೌಕರರು, ಜನಪ್ರತಿನಿಧಿಗಳು ಹಾಗೂ ಒಂದು ಕುಟುಂಬದಲ್ಲಿ ಒಬ್ಬರಿಗಿಂತ ಹೆಚ್ಚಿನ ಸದಸ್ಯರು ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡಿದ್ದರು. ಹಾಗಾಗಿ ಪಾರದರ್ಶಕವಾಗಿ ನಿಜವಾದ ಫಲಾನುಭವಿಗಳಿಗೆ ಪಿಎಂ ಕಿಸಾನ್ ಯೋಜನೆಯನ್ನು ತಲುಪಿಸುವುದಕ್ಕಾಗಿ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಲಾಯಿತು.
ಅರ್ಹತೆ ಇದ್ದರೂ ಕೆಲವು ರೈತರಿಗೇಕೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗುತ್ತಿಲ್ಲ?
ಹೌದು, ಪಿಎಂ ಕಿಸಾನ್ ಯೋಜನೆಗೆ ಎಲ್ಲಾ ಅರ್ಹತೆ ಹೊಂದಿದ್ದರೂ ಸಹ ಕೆಲವು ರೈತರಿಗೆ ಯೋಜನೆಯ ಲಾಭ ತಲುಪುತ್ತಿಲ್ಲ. ಏಕೆಂದರೆ ದಾಖಲೆಗಳ ಸಮಸ್ಯೆ. ಅಂದರೆ ಆಧಾರ್ ಕಾರ್ಡ್ ನಲ್ಲಿರುವಂತೆ ಜಮೀನಿನ ದಾಖಲೆಗಳಲ್ಲಿ ಹೆಸರು ಇಲ್ಲ. ಇನ್ನೂ ಕೆಲವರದ್ದು ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಹಾಗೂ ಜಮೀನಿನ ಪಹಣಿಯ ದಾಖಲೆಗಳ ಹೆಸರು ತಾಳೆಯಾಗುತ್ತಿರಲಿಲ್ಲ. ಹಾಗಾಗಿ ಕೆಲವು ರೈತರಿಗೆ ಅರ್ಹತೆ ಇದ್ದರೂ ಯೋಜನೆಯ ಲಾಭ ಸಿಗುತ್ತಿರಲಿಲ್ಲ.
ಪಿಎಂ ಕಿಸಾನ್ ಯೋಜನೆಗೆ ನಿಮ್ಮದು EKYC ಆಗಿದೆಯೇ?
ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮ್ಮ ಹೆಸರಿಗೆ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ
https://pmkisan.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಅಲ್ಲಿ ನಿಮಗೆ e KYC ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಆಗ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಬೇಕು.
ನಿಮ್ಮ ಹೆಸರಿಗೆ ಇಕೆವೈಸಿ ಆಗಿದ್ದರೆ ekYC successfully done ಎಂಬ ಮೆಸೆಜ್ ಕಾಣಿಸುತ್ತದೆ. ಒಂದುವೇಳೆ ನಿಮ್ಮ ಹೆಸರಿಗೆ ಇಕೆವೈಸಿ ಆಗದೆ ಇದ್ದರೆ ನೀವು ನಿಮ್ಮ ಮೊಬೈಲ್ ನಂಬರ್ ನಮೂದಿಸಬೇಕು. ನಂತರ ಓಟಿಪಿ ಬರುತ್ತದೆ. ಓಟಿಪಿ ಹಾಕಿದ ನೀವು ಇಕೆವೈಸಿ ಮಾಡಿಕೊಳ್ಳಬಹುದು.
ಮೊಬೈಲ್ ನಲ್ಲಿ EKYC ಆಗದಿದ್ದರೆ ರೈತರೇನು ಮಾಡಬೇಕು?
ಮೊಬೈಲ್ ನಲ್ಲಿ ಇಕೆವೈಸಿ ಮಾಡಲು ಸಮಸ್ಯೆಯಾಗುತ್ತಿದ್ದರೆ ಕೂಡಲೇ ನಿಮ್ಮ ಹತ್ತಿರದ ಸಿಎಸ್ಸಿ ಕೇಂದ್ರಗಳಿಗೆ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಇಕೆವೈಸಿ ಮಾಡಿಕೊಳ್ಳಬಹುದು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಮೀನಿನ ದಾಖಲೆ ಸಲ್ಲಿಸಿ ರೈತರು ಇಕೆವೈಸಿ ಮಾಡಿಕೊಳ್ಳಲು ಕೋರಲಾಗಿದೆ.
ಇದನ್ನೂ ಓದಿ : ಈ ಅರ್ಹತೆಗಳಿದ್ದರೆ ಮಾತ್ರ ಈ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಜಮೆ
ಇಕೆವೈಸಿ ಮಾಡದ ರೈತರಿಗೆ ಮುಂದಿನ ಕಂತು ಅಂದರೆ 16ನೇ ಕಂತಿನ ಹಣ ಜಮೆಯಾಗುವುದಿಲ್ಲ. ಮುಂದಿನ ತಿಂಗಳು ರೈತರಿಗೆ ಪಿಎಂ ಕಿಸಾನ್ ಯೋಜನೆಯ ಹಣ ಜಮೆಯಾಗಲಿದೆ. ಕೂಡಲೇ ಇಕೆವೈಸಿ ಮಾಡಿಸಿಕೊಳ್ಳಬೇಕೆಂದು ಕೋರಲಾಗಿದೆ.