ಉಚಿತವಾಗಿ ಕುರಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

Written by Ramlinganna

Updated on:

free goat farm training ಪಶುಪಾಲನೆ, ಎರೆಹುಳು ಗೊಬ್ಬರ ತಯಾರಿಕೆ, ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ. ಗುಡನ್ ನ್ಯೂಸ್, ಹೌದು, ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರಿಗೆ 10 ದಿನಗಳ ಕಾಲ ಉಚಿತ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕೊಪ್ಪಳ ವತಿಯಿಂದ ಉಚಿತವಾಗಿ 10 ದಿನಗಳ ಕಾಲ ಕುರಿ ಸಾಕಾಣಿಕೆ ಕುರಿತು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕುರಿ ಸಾಕಾಣಿಕೆಯೊಂದಿಗೆ ಹೈನುಗಾರಿಕೆ ಹಾಗೂ ಎರೆಹುಳು ಗೊಬ್ಬರ ತಯಾರಿಕೆ ಕುರಿತು ಉಚಿತವಾಗಿ ತರಬೇತಿ ನೀಡಲಾಗುವುದು. ಇದರೊಂದಿಗೆ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ವಿದ್ಯುತ್ ಮೋಟಾರ್ ದುರಸ್ತಿ ಮತ್ತು ಸರ್ವೀಸ್, ಬ್ಯೂಟಿ ಪಾರ್ಲರ್ ತರಬೇತಿ ನೀಡಲಾಗುವುದು.

30 ದಿನಗಳ ಕಾಲ ಬ್ಯೂಟಿ ಪಾರ್ಲರ್ ಕುರಿತು ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು.

ಉಚಿತ ತರಬೇತಿ ಪಡೆಯಲು ಕನಿಷ್ಟ 8ನೇ ತರಗತಿ ಉತ್ತೀರ್ಣರಾಗಿರಬೇಕು. 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ ನಿಮ್ಮ ಜಮೀನು ಹಿಂದೆ ಯಾರ ಯಾರ ಹೆಸರಿನಲ್ಲಿತ್ತು? ಇಲ್ಲೇ ಚೆಕ್ ಮಾಡಿ

ಅರ್ಜಿದಾರರು ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಫೆಬ್ರವರಿ  5 ರಂದು ಸಂದರ್ಶನ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಬ್ರವರಿ 7 ರಿಂದ ತರಬೇತಿ ಆರಂಭಿಸಲಾಗುವುದು.

ಆಸಕ್ತರು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಮಾರ್ಕ್ಸ್ ಕಾರ್ಡ್ಗಳ ಝರಾಕ್ಸ್ ಪ್ರತಿಗಳು ಹಾಗೂ 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539 231038,9483618178, 9481085217, 7259073827, 9448941414 ಗೆ ಸಂಪರ್ಕಿಸಬಹುದು ಎಂದು ಎಸ್.ಬಿ.ಐ ಆರ್ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

free goat farm training ಇಂದು ರೈತರಿಗೆ ಸಮಗ್ರ ಕೃಷಿ ಪದ್ದತಿ ವಿಷಯಗಳ ತರಬೇತಿ

ವಿಜಯಪುರ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಫೆಬ್ರವರಿ 2 ರಂದು ಮಧ್ಯಾಹ್ನ 3 ರಿಂದ 4 ಗಂಟೆಯವರೆಗೆ ಸಮಗ್ರ ಕೃಷಿ ಪದ್ಧತಿ ವಿಷಯಗಳ ಕುರಿತು ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.

ಆಸಕ್ತ ರೈತರು  ಈ ಗೂಗಲ್ ಮಿಟ್ ಲಿಂಕ್

https://meet.google.com/xjy&juqo&mxy

ಬಳಸಿ ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಳ್ಳಬಹುದು.

ಮಾಹಿತಿಗಾಗಿ ಕೃಷಿ ಅಧಿಕಾರಿ ಲಕ್ಷ್ಮೀ ಕಾಮಗೊಂಡ ಮೊಬೈಲ್ ನಂಬರ್ 8277930619 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment