Monsoon Interim Insurance Compensation 2019ರ ಸಾಲಿನಲ್ಲಿ ಬೆಳೆವಿಮೆ ಕಟ್ಟಿದ ರೈತರಿಗೆ ಸಂತಸದ ಸುದ್ದಿ. ಹೌದು 2019 ರ ಮುಂಗಾರು ಹಂಗಾಮಿನಲ್ಲಿ ಬೆಳೆವಿಮೆ ಕಟ್ಟಿದ ಧಾರವಾಡ ಜಿಲ್ಲೆಯ ರೈತರಿಗೆ ವಿಮಾ ಪರಿಹಾರ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ತಿಳಿಸಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿನ 2019ರ ಮುಂಗಾರು ಹಂಗಾಮಿನ ಮಧ್ಯಂತರ ಬೆಳೆ ವಿಮಾ ಪರಿಹಾರ ಒಟ್ಟು 45.05 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿ ನಿರ್ದೇಶನ ಅನುಸಾರ ಧಾರವಾಡ ಜಿಲ್ಲೆಯ ಒಟ್ಟು 197 ವಿಮಾ ಘಟಕಗಳಲ್ಲಿ 45.05 ಕೋಟಿ ರೂಪಾಯಿಗಳಲ್ಲಿ 59728 ರೈತ ಫಲಾನುಭವಿಗಳಿಗೆ ಬಿಡುಗಡೆಯಾಗಿದೆ. ಸಂರಕ್ಷಣಾ ತಂತ್ರಾಂಶದ ಮೂಲಕ ರೈತರ ಖಾತೆಗಳಿಗೆ ಮೊತ್ತ ಜಮೆ ಪ್ರಕ್ರಿಯೆ ನಡೆದಿದೆ.
2019 ರ ಮುಂಗಾರು ಹಂಗಾಮಿಗೆ ರಾಜ್ಯದ ನೆರೆಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಬೆಳೆಗೆ ಯೋಜನೆಯ ಮಾರ್ಗಸೂಚಿ ಮತ್ತು ಜಿಲ್ಲಾಡಳಿತದ ವರದಿಯಂತೆ ಹಾವೇರಿ, ವಿಜಯಪುರ, ಗದಗ, ಧಾರವಾಡ, ಬಾಗಲಕೋಟೆ, ಬೆಳಗಾವಿ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಮಧ್ಯಂತರ ವಿಮಾ ಪರಿಹಾರ ಬಿಡುಗಡೆ ಮಾಡಲಾಗಿದೆ.
21-12-2020 ರಂದು ಬೆಂಗಳೂರಿನಲ್ಲಿ ತಮ್ಮ ನೇತೃತ್ವದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರೊಂದಿಗೆ ಸಭೆ ನಡೆಸಲಾಗಿತ್ತು. ಆ ವೇಳೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಬಗ್ಗೆ ಕೇಂದ್ರ, ರಾಜ್ಯದ ಕೃಷಿ ಮತ್ತು ವಿಮಾ ಕಂಪನಿ ಅಧಿಕಾರಿಗಳೊಂದಿಗೆ ಧಾರವಾಡ ಜಿಲ್ಲೆಯ ಬಾಕಿ ಮಧ್ಯಂತರ ಪರಿಹಾರ ನಿಧಿ ಶೀಘ್ರ ಬಿಡುಗಡೆಗೆ ಒತ್ತಾಯಿಸಿದ್ದರಿಂದ ವಿಮಾ ಕಂಪನಿ ಹಣ ಬಿಡುಗಡೆಗೊಳಿಸಿದೆ ಎಂದು ತಿಳಿಸಿದ್ದಾರೆ.
ಏನಿದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ?
ಬೆಳೆ ನಷ್ಟ, ಬೆಳೆ ವಿಫಲಗೊಂಡ ಸಂದರ್ಭದಲ್ಲಿ ನಷ್ಟ ಹೊಂದಿದ ರೈತರ ಕೈಹಿಡಿಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗೀತ್ವದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ಅನಿರೀಕ್ಷಿತ ಘಟನೆಗಳಿಂದ ಮತ್ತು ದುರಂತಗಳಿಂದ ಉಂಟಾಗುವ ಬೆಳೆ ನಷ್ಟ ಅಥವಾ ಹಾನಿಯಿಂದ ಸಂಭವಿಸುವ ಸಂಕಷ್ಟದಲ್ಲಿ ರೈತರಿಗೆ ಆರ್ಥಿಕವಾಗಿ ನೆರವಾಗಲು ಈ ಯೋಜನೆಯ ಉದ್ದೇಶವಾಗಿದೆ.
ಇದನ್ನೂ ಓದಿ ನಿಮ್ಮ ಜಮೀನು ಯಾರಿಂದ ಯಾರಿಗೆ ವರ್ಗಾವಣೆಯಾಗಿದೆ? ಚೆಕ್ ಮಾಡಿ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ವಿಮೆ ಕಂತು ಕಟ್ಟಿದ್ದ ರೈತರಿಗೆ ಬೆಳೆನಷ್ಟ ಮತ್ತು ಪ್ರಕೃತಿ ವಿಕೋಪದಡಿ ಬೆಳೆ ನಷ್ಟ ಆದರೆ ಬೆಳೆ ವಿಮೆ ಮಾಡಿಸಿರುವ ರೈತರಿಗೆ ಎಕರೆವಾರು ವಿಮಾ ಮೊತ್ತವನ್ನು ಪಾವತಿ ಮಾಡುವ ಯೋಜನೆ ಇದಾಗಿದೆ.
Monsoon Interim Insurance Compensation ಪ್ರಕೃತಿ ವಿಕೋಪಕ್ಕೆ ವಿಮೆ ಪರಿಹಾರ
ಈ ಯೋಜನೆಯಡಿ 2020 ಮುಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂ ಕುಸಿತ ಮತ್ತು ಬೆಳೆ ಮುಳುಗಡೆ (ಇನಂಡೇಷನ್)ಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.
ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುವುದು.