LPG Cylinder price reduction ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ

Written by Ramlinganna

Published on:

LPG Cylinder price reduction : ಲೋಕಸಭಾ ಚುನಾವಣೆ ಘೋಷಣೆಗೆ  ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿಯವರು ಅಡುಗೆ ಅನಿಲ ಸಿಲೆಂಡರ್ ದರವನ್ನು 100 ರೂಪಾಯಿ ಕಡಿತಗೊಳಿಸಿದ್ದಾರೆ.

ಹೌದು, ಮಹಿಳಾ ದಿನಾಚರಣೆ ಹಾಗೂ ಶಿವರಾತ್ರಿ ಸಂಭ್ರಮದ ದಿನವಾದ ಶುಕ್ರವಾರ ದಿನದಂದು ಪ್ರಧಾನಿ ಈ ಘೋಷಣೆ ಮಾಡಿದ್ದಾರೆ.

ಕೇಂದ್ರ ಸರ್ಕಾರದ ದರ ಕಡಿತ ದರ ನಿರ್ಧಾರದಿಂದ 14.2 ಕೆಜಿ ತೂಕದ ಅಡುಗೆ ಅನಿಲ ಸಿಲೆಂಡರ್ ಇನ್ನೂ ಮುಂದೆ ನಿಮಗೆ 805 ರೂಪಾಯಿಗೆಸಿಗಲಿದೆ.

ಉಜ್ವಲ ಫಲಾನುಭವಿಗಳಿಗೆ ಈಗಾಗಲೇ  300 ರೂಪಾಯಿ ಸಬ್ಸಿಡಿ ಇರುವ ಕಾರಣ ಅವರಿಗೆ 505 ರೂಪಾಯಿಗೆ ಸಿಲೆಂಡರ್ ದೊರೆಯಲಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಹಾಗೂ ಅನಿಲ ಬೆಲೆ ಇಳಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದರ ಕಡಿತ ನಿರ್ಧಾರವನ್ನು ಪ್ರಕಟಿಸಿದೆ ಎಂದು ಹೇಳಲಾಗಿದೆ. ಆದರೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.ಕಳೆದ 23 ತಿಂಗಳಿನಿಂದ ಈ ಎರಡೂ ಇಂಧನಗಳ ಬೆಲೆಯಲ್ಲಿ ವ್ಯತ್ಯಾಸವಾಗಿಲ್ಲ.

ಇದನ್ನೂ ಓದಿ ನಿಮ್ಮ ಜಮೀನಿನ ಮ್ಯಾಪ್ mobileನಲ್ಲಿ ಡೌನ್ಲೋಡ್ ಮಾಡಿ

ಮಹಿಳಾ ದಿನಾಚರಣೆಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್.ಪಿ.ಜಿ ಸಿಲೆಂಡರ್ ದರವನ್ನು 100 ರೂಪಾಯಿ ನಷ್ಟು ಕಡಿತ ಮಾಡಲು ನಿರ್ಧರಿಸಿದೆ. ಇದರಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಹೊರೆ ತಗ್ಗಲಿದೆ. ವಿಶೇಷವಾಗಿ ನಾರಿಶಕ್ತಿಗೆ ಅನುಕೂಲವಾಗಲಿದೆ. ಅಡುಗೆ ಅನಿಲವನ್ನು ಮತ್ತಷ್ಟು ಕೈಗೆಟಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ಕುಟುಂಬಗಳ ಏಳ್ಗೆಯನ್ನು ಬೆಂಬಲಿಸುವ ಹಾಗೂ ಆರೋಗ್ಯವಂತ ಸಮಾಜದ ಗುರಿಯನ್ನು ಹೊಂದಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟ್ ಮಾಡಿದ್ದಾರೆ.

LPG Cylinder price reduction ಯಾವ ಸಿಲೆಂಡರ್ ಗೆ ಎಷ್ಟು ದರ

ಸಾಮಾನ್ಯವಾಗಿ ಬಳಸುವ ಗೃಹ ಬಳಕೆಯ ಸಿಲೆಂಡರ್ ದರ ಈಗ 805 ರೂಪಾಯಿ ಆದರೆ ಉಜ್ವಲ ಸಿಲೆಂಡರ್ ದರ 505 ರೂಪಾಯಿ ಆಗಲಿದೆ.

ಹೆಚ್ಚಿನ ಮಾಹಿತಿಗೆ ಎಲ್.ಪಿ.ಜಿ ವೆಬ್ಸೈಟ್ ಗೆ ಭೇಟಿ ನೀಡಬಹುದು.https://www.mylpg.in/           

ಗೃಹಲಕ್ಷ್ಮೀ ಯೋಜನೆಯ ಹಣ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ?

ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಎಷ್ಟು ಕಂತುಗಳು ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈ

https://mahitikanaja.karnataka.gov.in/Gruhalakshmi/GuhalakshmiStatus?ServiceId=5630&Type=SP&DepartmentId=3136

ಲಿಂಕ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ. ನಂತರ ಅಲ್ಲಿ ತೆರೆದುಕೊಳ್ಳುವ ಪೇಜ್ ನಲ್ಲಿ  Details of Gruhalakshmi status ಕೆಳಗಡೆ ನಿಮ್ಮ ರೇಶನ್ ಕಾರ್ಡ್ ನಮೂದಿಸಬೇಕು.  ನಂತರ submit ಮೇಲೆ ಕ್ಲಿಕ್ ಮಾಡಬೇಕು. ಆಗ ನೀವು ಯಾವ ದಿನಾಂಕದಂದು ಅರ್ಜಿ ಹಾಕಿದ್ದೀರಿ. ನಿಮ್ಮ ಅರ್ಜಿ ಸ್ವೀಕೃತವಾಗಿದೆಯೇ ಹಾಗೂ ಯಾವ ದಿನಾಂಕ ಅರ್ಜಿ ಸ್ವೀಕೃತವಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ. ಅದರ ಮುಂದುಗಡೆ ಇರುವ Details ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಕಂತುಗಳು ಜಮೆಯಾಗಿದೆ. ಯಾವ ಯಾವ ತಿಂಗಳಲ್ಲಿ ಜಮೆಯಾಗಿದೆ. ಯಾವ ತಿಂಗಳ ಯಾವ ದಿನಾಂಕದಂದು ಜಮಯಾಗಿದೆ ಹಾಗೂ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು. ಇದಕ್ಕಾಗಿ ನಿಮ್ಮ ಬಳಿ ಫೋನ್ ಇದ್ದರೆ ಸಾಕು, ನಿಮ್ಮ ಫೋನ್ ಇಲ್ಲದಿದ್ದರೂ ನಿಮ್ಮ ಮನೆಯಲ್ಲಿರುವ ಇತರರ ಫೋನ್ ಬಳಸಿ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಗೃಹಲಕ್ಷ್ಮೀ ಯೋಜನೆಗೆ ಅರ್ಹತೆ ಪಡೆದವರಿಗೆ ಮಾತ್ರ ಈ ಯೋಜನೆಯ ಹಣ ಜಮೆಯಾಗಲಿದೆ.

Leave a Comment