distribution tarpaulin in subsidy ಕೃಷಿ ಇಲಾಖೆಯಿಂದ ಕೃಷಿ ಉತ್ಪನ್ನಗಳ ಸಂಸ್ಕರಣೆ ಯೋಜನೆಯಡಿ ಟಾರ್ಪಲಿನ್ (ತಾಡಪತ್ರಿ) ಗಾಗಿ (distribution tarpaulin in subsidy) ಆಳಂದ ತಾಲೂಕಿನ ಅರ್ಹ ರೈತರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ ಎಂದು ಆಳಂದ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಕಟಾವಿನ ನಂತರ ಕೃಷಿ ಉತ್ಪನ್ನಗಳನ್ನು ಮಳೆ, ಗಾಳಿ, ಹಾಗೂ ಇತರೆ ಹವಾಮಾನ ವೈಪರೀತ್ಯಗಳಿಂದ ಸಂರಕ್ಷಿಸಿ ಆಹಾರ ಧಾನ್ಯಗಳ ಮತ್ತು ಕೃಷಿ ಉತ್ಪನಗಳ ಗುಣಮಟ್ಟ ಕಾಯ್ದುಕೊಳಲು ಅನೂಕುಲವಾಗುವಂತೆ (ತಾಡಪತ್ರಿ) ಟಾರ್ಪಲಿನಗಳನ್ನು ವಿತರಿಸಲಾಗುತ್ತಿದೆ. ಸಾಮಾನ್ಯ ರೈತರಿಗೆ ಶೇ.50 ರ ಸಹಾಯಧನದಲ್ಲಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ.90 ರ ಸಹಾಯಧನದಲ್ಲಿ ವಿತರಿಸಲಾಗುತ್ತಿದೆ.
ಅರ್ಹ ರೈತರು ತಮಗೆ ಸಂಬಂಧಪಟ್ಟ ಆಳಂದ, ಖಜೂರಿ, ಮಾ.ಹಿಪ್ಪರಗಾ, ನರೋಣಾ ಹಾಗೂ ನಿಂಬರ್ಗಾ ರೈತರ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ರೈತರು ಭರ್ತಿ ಮಾಡಿದ ಅರ್ಜಿಯೊಂದಿಗೆ ಪಹಣಿ, ಭಾವಚಿತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಜಾತಿ ಪ್ರಮಾಣ ಪತ್ರ ದಾಖಲಾತಿಯೊಂದಿಗೆ 2021ರ ಏಪ್ರಿಲ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ ಈ ರೈತರಿಗೇಕೆ ಬೆಳೆ ವಿಮೆ ಹಣ ಜಮೆಯಾಗಿಲ್ಲ? ಇಲ್ಲಿದೆ ಮಾಹಿತಿ
ಹೆಚ್ಚಿನ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಇಲಾಖೆಯಿಂದ ಕಳೆದ 3 ವರ್ಷಗಳಲ್ಲಿ ತಾಡಪತ್ರಿ ಪಡೆದ ರೈತರು ಅರ್ಜಿ ಸಲ್ಲಿಸಲು ಅರ್ಹ ಇರುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
distribution tarpaulin in subsidy ತಾಡಪತ್ರಿ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ
ಕೃಷಿ ಇಲಾಖೆಯು 2020-21ನೇ ಸಾಲಿನ ತಾಡಪಲ (tarpaulin )ವಿತರಣೆಗಾಗಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಯಾದಗಿರಿ ಜಿಲ್ಲೆಯಲ ಸುರಪುರ ಹೋಬಳಿ ವ್ಯಾಪ್ತಿಯ ರೈತರು ಹಸನಾಪುರ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಏಪ್ರೀಲ್ 10 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಫಲಾನುಭವಿಗಳು ಆದಾರ್ ಕಾರ್ಡ್, ಪಹಣಿ, ಬ್ಯಾಂಕ್ ಪಾಸ್ ಬುಕ್ ನೀಡವುದು ಕಡ್ಡಾಯವಾಗಿದೆ. ನಿಗದಿಗಿಂತಲು ಫಲಾನುಭವಿಗಳು ಹೆಚ್ಚಾದಲ್ಲಿ ಲಾಟ್ರಿ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುವುದು ಎಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಡಾ. ಭೀಮರಾಯ ಅವಾಲ್ದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಡಪತ್ರಿಗಳು ರೈತರ ದವಸಧಾನ್ಯ ಒಣಗಿಸಲು ಬೇಕಾಗುತ್ತದೆ. ಇದರೊಂದಿಗೆ ದವಸಧಾನ್ಯ ರಕ್ಷಣೆಗೂ ತಾಡಪತ್ರಿ ಬಳಕೆಯಾಗುತ್ತದೆ. ಹಾಗಾಗಿ ರೈತರು ರೈತ ಸಂಪರ್ಕ ಕೇಂದ್ರದ ವತಿಯಿಂದ ಸಬ್ಸಿಡಿಯಲ್ಲಿ ನೀಡಲು ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆದುಕೊಳ್ಳಬೇಕು. ಏಕೆಂದರೆ ಸಬ್ಸಿಡಿಯೊಂದಿಗೆ ಕಡಿಮೆ ದರದಲ್ಲಿ ರೈತರಿಗೆ ತಾಡಪತ್ರಿಗಳು ಸಿಗುತ್ತವೆ. ಕೂಡಲೇ ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಿ ಸಬ್ಸಿಡಿಯಲ್ಲಿ ತಾಡಪತ್ರಿ ಪಡೆದುಕೊಳ್ಳಬೇಕು.